ಸಾಮಾಜಿಕ, ಆರ್ಥಿಕ ಶಕ್ತಿ ತುಂಬುವುದೇ ನಮ್ಮ ಗುರಿ

KannadaprabhaNewsNetwork |  
Published : Apr 21, 2025, 12:45 AM ISTUpdated : Apr 21, 2025, 12:46 AM IST
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿದರು | Kannada Prabha

ಸಾರಾಂಶ

ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೇ ಎಲ್ಲ ಧರ್ಮದ, ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೇ ಎಲ್ಲ ಧರ್ಮದ, ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಶೋಕ್ ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಅವರು ಸುಳ್ಳೇ ಹೇಳುವುದು. ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ. ಆದರೆ, ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದರು. ಕಾಂಗ್ರೆಸ್ ಶಾಸಕರೇ ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿ ಯಾರೂ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದ್ದು, ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನಃ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು. ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ ಎಂದು ಪ್ರಶ್ನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು