ಸ್ತ್ರೀಯರ ಪ್ರತಿಭೆಗೆ ವೇದಿಕೆ ಕಲ್ಪಿಸುವುದು ನಮ್ಮ ಗುರಿ

KannadaprabhaNewsNetwork |  
Published : May 18, 2026, 01:15 AM IST
ಪೋಟೋ 2 : ನೆಲಮಂಗಲ ತಾಲೂಕಿನ ಸೋಲೂರು ಹೋಬಳಿ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ 'ನೆಲಮಂಗಲ ಉತ್ಸವ' ದ ಅಂಗವಾಗಿ ಆಯೋಜಿಸಿದ್ದ ಬೃಹತ್ ರಂಗೋಲಿ ಸ್ಪರ್ಧೆಗೆ ಶಾಸಕ ಎನ್. ಶ್ರೀನಿವಾಸ್ ಚಾಲನೆ ನೀಡಿದರು. | Kannada Prabha

ಸಾರಾಂಶ

ದಾಬಸ್‍ಪೇಟೆ: ರಂಗೋಲಿ ಎನ್ನುವುದು ಕೇವಲ ಬಣ್ಣದ ಚಿತ್ತಾರವಲ್ಲ, ಅದು ನಮ್ಮ ದೇಶದ ಪವಿತ್ರ ಸಂಸ್ಕೃತಿಯ ಅವಿಭಾಜ್ಯ ಅಂಗ. ಮನೆಯ ಮುಂದಿನ ರಂಗೋಲಿ ಶುಭಸೂಚಕವಾಗಿದ್ದು, ಇಂತಹ ಸಂಪ್ರದಾಯವನ್ನು ಉಳಿಸಿ ಬೆಳೆಸುತ್ತಿರುವ ಮಹಿಳೆಯರ ಪ್ರತಿಭೆಯನ್ನು ಜಗತ್ತಿಗೆ ಪರಿಚಯಿಸುವುದೇ ನೆಲಮಂಗಲ ಉತ್ಸವದ ಮೂಲ ಉದ್ದೇಶ ಎಂದು ಶಾಸಕ ಎನ್. ಶ್ರೀನಿವಾಸ್ ತಿಳಿಸಿದರು

ದಾಬಸ್‍ಪೇಟೆ: ರಂಗೋಲಿ ಎನ್ನುವುದು ಕೇವಲ ಬಣ್ಣದ ಚಿತ್ತಾರವಲ್ಲ, ಅದು ನಮ್ಮ ದೇಶದ ಪವಿತ್ರ ಸಂಸ್ಕೃತಿಯ ಅವಿಭಾಜ್ಯ ಅಂಗ. ಮನೆಯ ಮುಂದಿನ ರಂಗೋಲಿ ಶುಭಸೂಚಕವಾಗಿದ್ದು, ಇಂತಹ ಸಂಪ್ರದಾಯವನ್ನು ಉಳಿಸಿ ಬೆಳೆಸುತ್ತಿರುವ ಮಹಿಳೆಯರ ಪ್ರತಿಭೆಯನ್ನು ಜಗತ್ತಿಗೆ ಪರಿಚಯಿಸುವುದೇ ನೆಲಮಂಗಲ ಉತ್ಸವದ ಮೂಲ ಉದ್ದೇಶ ಎಂದು ಶಾಸಕ ಎನ್. ಶ್ರೀನಿವಾಸ್ ತಿಳಿಸಿದರು.

ನೆಲಮಂಗಲ ತಾಲೂಕಿನ ಸೋಲೂರು ಹೋಬಳಿ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ''''''''ನೆಲಮಂಗಲ ಉತ್ಸವ''''''''ದ ಅಂಗವಾಗಿ ಆಯೋಜಿಸಿದ್ದ ಬೃಹತ್ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಕ್ಷೇತ್ರದ ಜನರ ಋಣ ನನ್ನ ಮೇಲಿದೆ. ಅದನ್ನು ತೀರಿಸುವ ನಿಟ್ಟಿನಲ್ಲಿ ವೈಯಕ್ತಿಕವಾಗಿ ಇಂತಹ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇನೆ. ಫೆ.14ರಂದು ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಆರಂಭವಾದ ಈ ಉತ್ಸವ, ಇಂದು ರಂಗೋಲಿ ಸ್ಪರ್ಧೆ ಮೂಲಕ ಹಳ್ಳಿ ಹಳ್ಳಿಯ ಮನೆ ಮನೆಗಳನ್ನು ತಲುಪಿದೆ ಎಂದರು.

ಸೋಲೂರು ಹೋಬಳಿಯನ್ನು ನೆಲಮಂಗಲ ತಾಲೂಕಿಗೆ ಸೇರ್ಪಡೆ ಮಾಡಿ ಜನತೆಯ ಋಣವನ್ನು ತೀರಿಸುವ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಈ ಸಂಭ್ರಮಾಚರಣೆ ಅಂಗವಾಗಿ ಸೋಲೂರು ಹೋಬಳಿಯ ಪ್ರತಿಮನೆಗೆ ಸಿಹಿ ಹಂಚುವ ಕೆಲಸಕ್ಕೆ ಮುಂದಾಗುತ್ತೇನೆ. ಕ್ರೀಡೆ, ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕ್ಷೇತ್ರದ ಯುವಕರು ಮತ್ತು ಮಹಿಳೆಯರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಡೆಯಲಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರುದ್ರಶರ್ಮಾ ಮಾತನಾಡಿ, ನಮ್ಮ ಭಾಗದ ಗ್ರಾಮೀಣ ಕಲೆ ಮತ್ತು ಸಂಸ್ಕೃತಿಯನ್ನು ಜೀವಂತವಾಗಿರಿಸುವಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ. ಶಾಸಕ ಶ್ರೀನಿವಾಸ್ ರೂಪಿಸಿರುವ ಈ ''''''''ನೆಲಮಂಗಲ ಉತ್ಸವ'''''''' ಕೇವಲ ಹಬ್ಬವಲ್ಲ, ಇದು ನಮ್ಮೂರಿನ ಪ್ರತಿಭೆಗಳಿಗೆ ಸಿಕ್ಕ ಗೌರವ. ವಿಶೇಷವಾಗಿ ಗ್ರಾಮೀಣ ಭಾಗದ ಹೆಣ್ಣುಮಕ್ಕಳು ತಮ್ಮ ಮನೆಯ ಅಂಗಳದ ಕಲೆಯನ್ನು ಸ್ಪರ್ಧಾ ವೇದಿಕೆಯಲ್ಲಿ ಪ್ರದರ್ಶಿಸುತ್ತಿರುವುದು ಹೆಮ್ಮೆಯ ವಿಷಯ. ಇಂತಹ ಕಾರ್ಯಕ್ರಮಗಳು ಕ್ಷೇತ್ರದ ಜನರನ್ನು ಭಾವನಾತ್ಮಕವಾಗಿ ಒಂದುಗೂಡಿಸುತ್ತವೆ ಎಂದು ಶ್ಲಾಘಿಸಿದರು.

1000ಕ್ಕೂ ಹೆಚ್ಚು ಮಹಿಳೆಯರ ಭಾಗಿ: ಸೋಲೂರು ಹೋಬಳಿಯಲ್ಲಿ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡು ತಮ್ಮ ಸೃಜನಶೀಲತೆಯನ್ನು ಅನಾವರಣಗೊಳಿಸಿದರು. ಜಾನಪದ ಕಲೆ, ಪರಿಸರ ಕಾಳಜಿ ಶಿವನ ಲಿಂಗ, ಶಿವಕುಮಾರ ಸ್ವಾಮೀಜಿಯ ಭಾವಚಿತ್ರ, ಇನ್ನು ವಿಶಿಷ್ಟ ರೀತಿ ಯಲ್ಲಿ ವಿವಿಧ ರೀತಿಯ ಲಾಂಛನಗಳನ್ನು ಒಳಗೊಂಡ ರಂಗೋಲಿಗಳು ನೋಡುಗರ ಕಣ್ಣು ಸೆಳೆದವು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಮಹಿಳೆಯರು ಭಾಗವಹಿಸಿದ್ದರು.

ಪೋಟೋ 2 :

ನೆಲಮಂಗಲ ತಾಲೂಕಿನ ಸೋಲೂರು ಹೋಬಳಿ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ ''''''''ನೆಲಮಂಗಲ ಉತ್ಸವ'''''''' ದ ಅಂಗವಾಗಿ ಆಯೋಜಿಸಿದ್ದ ಬೃಹತ್ ರಂಗೋಲಿ ಸ್ಪರ್ಧೆಗೆ ಶಾಸಕ ಎನ್. ಶ್ರೀನಿವಾಸ್ ಚಾಲನೆ ನೀಡಿದರು.

ಪೋಟೋ 3 :

ರಂಗೋಲಿ ಸ್ಪರ್ಧೇಯಲ್ಲಿ ವಿಜೇತರಾದವರಿಗೆ ಶಾಸಕ ಎನ್.ಶ್ರೀನಿವಾಸ್ ಬಹುಮಾನ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿರುಗಾಳಿ, ಆಲಿಕಲ್ಲು ಮಳೆಗೆ ಸಾವಿರಾರು ಎಕರೆ ಬೆಳೆ ನಾಶ
ಎಲ್ಲ ಸಮುದಾಯಗಳ ಹಿತ ಕಾಯುವ ಹೊಣೆ ನನ್ನ ಮೇಲಿದೆ