ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬೊಮ್ಮಾಯಿ

KannadaprabhaNewsNetwork |  
Published : Apr 15, 2024, 01:20 AM IST
ಅಂಬೇಡ್ಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.  | Kannada Prabha

ಸಾರಾಂಶ

ಜನರ ಜೀವನ ಮಟ್ಟ ಹೆಚ್ಚಳ ಹಾಗೂ ಬಡತನ ನಿರ್ಮೂಲನೆ ಮಾಡುವ ಯೋಜನೆ ನಮ್ಮ ಪ್ರಣಾಳಿಕೆಯಲ್ಲಿವೆ

ಗದಗ: ನಮ್ಮದು ಬಡವರಿಗೆ ಬದುಕು ಕಟ್ಟಿಕೊಡುವ ಪ್ರಣಾಳಿಕೆಯಾಗಿದೆ. ಶಾಶ್ವತವಾಗಿ ದೇಶ ಕಟ್ಟುವಂಥದ್ದು ಮತ್ತು ಬಡತನ ನಿರ್ಮೂಲನೆ ಮಾಡುವುದೇ ನಮ್ಮ ಗುರಿಯಾಗಿದೆ. ಆದರೆ ಕಾಂಗ್ರೆಸ್‌ನವರದ್ದು ಬೇಜವಾಬ್ದಾರಿ ಪ್ರಣಾಳಿಕೆಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಭಾನುವಾರ ಗದಗ ನಗರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಆನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಹತ್ತು ವರ್ಷದಲ್ಲಿ ಈಗಾಗಲೇ 15 ಕೋಟಿ ಜನರ ಬಡತನ ನಿರ್ಮೂಲನೆಯಾಗಿದೆ. ಇನ್ನೂ 25 ಕೋಟಿ ಜನರ ಬಡತನ ನಿರ್ಮೂಲನೆ ಮಾಡುವ ಗುರಿ ನಮ್ಮ ಪ್ರಣಾಳಿಕೆಯಲ್ಲಿದೆ. ಮೂಲಭೂತ ಸೌಕರ್ಯ, ಮನೆ, ಶೌಚಾಲಯ, ಶಾಶ್ವತವಾಗಿ ಕೊಡುತ್ತೇವೆ. ವಿಶೇಷವಾಗಿ ಸೂರ್ಯ ಘರ್ ಯೋಜನೆ ಅಡಿ ಸೋಲಾರ್ ಎನರ್ಜಿಯಿಂದ ಉಚಿತ ವಿದ್ಯುತ್ ಪಡೆದು ವಿದ್ಯುತ್ ಉತ್ಪಾದನೆ ಮಾಡಿ ಮಾರಾಟ ಮಾಡಬಹುದು. ರೈತರಿಗೆ ಅನುಕೂಲವಾಗುವಂತಹ ಯೋಜನೆ ಮುಂದುವರಿಸಲಾಗಿದೆ. ಹೆಣ್ಣು ಮಕ್ಕಳಿಗೆ ಲಕ್ಷ ಪತಿ ದೀದಿ ಯೋಜನೆಯಿದೆ.‌ ಅದನ್ನು 3 ಕೋಟಿ ಮಹಿಳೆಯರಿಗೆ ವಿಸ್ತರಿಸಲು ಭರವಸೆ ನೀಡಲಾಗಿದೆ. ಇದರಿಂದ ಹೆಣ್ಣು ಮಕ್ಕಳ ಸಬಲೀಕರಣವಾಗುತ್ತದೆ ಎಂದು ಹೇಳಿದರು.ಬಿಜೆಪಿ ಪ್ರಣಾಳಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಜನರ ಜೀವನ ಮಟ್ಟ ಹೆಚ್ಚಳ ಹಾಗೂ ಬಡತನ ನಿರ್ಮೂಲನೆ ಮಾಡುವ ಯೋಜನೆ ನಮ್ಮ ಪ್ರಣಾಳಿಕೆಯಲ್ಲಿವೆ. ಕಾಂಗ್ರೆಸ್‌ನವರು ಬೇಕಾಬಿಟ್ಟಿಯಾಗಿ ಘೋಷಣೆ ಮಾಡಿದ್ದಾರೆ. ಅವರಿಗೆ ಜವಾಬ್ದಾರಿ ಇಲ್ಲ, ಯಾಕೆಂದರೆ ಅವರು ಅಧಿಕಾರಕ್ಕೆ ಬರುವುದು ಗ್ಯಾರಂಟಿ ಇಲ್ಲ, ಅವರು ಅಧಿಕಾರಕ್ಕೆ ಬರಲು 272 ಸೀಟ್ ಬೇಕು. ಅವರು ಸ್ಪರ್ಧೆ ಮಾಡಿರುವುದೇ 230 ಕ್ಷೇತ್ರದಲ್ಲಿ ಮಾತ್ರ. ಕಾಂಗ್ರೆಸ್ ಪ್ರಣಾಳಿಕೆ ಬೇಜವಾಬ್ದಾರಿ ಪ್ರಣಾಳಿಕೆ. ನಮ್ಮದು ಜವಾಬ್ದಾರಿಯುತ ಪ್ರಣಾಳಿಕೆ ಎಂದು ಬೊಮ್ಮಾಯಿ ತಿರುಗೇಟು ನೀಡಿದರು.

ಎಂಎಲ್‌ಸಿ ಎಸ್.ವಿ. ಸಂಕನೂರ, ಮಾಜಿ ಸಚಿವ ಸಿ.ಸಿ. ಪಾಟೀಲ, ನಗರಸಭೆಯ ಅಧ್ಯಕ್ಷೆ ಉಷಾ ದಾಸರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಪಿಎಸ್ಸಿ ನೇಮಕ ಹಗರಣ : ಮತ್ತೆ ಸಾಹುಕಾರ್‌ ಸಸ್ಪೆಂಡ್‌ಗೆ ಸಚಿವ ಸಂಪುಟ ಶಿಫಾರಸು
ನಾಗೇಂದ್ರ ತಲೆದಂಡಕ್ಕೆ ಆಗ್ರಹಿಸಿ ಬಳ್ಳಾರಿಗೆ ಬಿಜೆಪಿ ಪಾದಯಾತ್ರೆ