ಸರ್ಕಾರಿ ಶಾಲೆಗಳ ಬಲವರ್ಧನೆಗೆ ನಮ್ಮ ದ್ಯೇಯ

KannadaprabhaNewsNetwork |  
Published : Oct 01, 2024, 01:16 AM IST
ಸೂಲಿಬೆಲೆ ಹೋಬಳಿ ಬೆಟ್ಟಹಳ್ಳಿ ಸರ್ಕಾರಿಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಜೇನುಗೂಡು ರೂರಲ್ ಡೆವಲ್ಪಮೆಂಟ್ ಅಂಡ್ ಕಲ್ಚರಲ್ ಟ್ರಸ್ಟ್ ವತಿಯಿಂದ ಐಡಿ ಕಾರ್ಡ ವಿತರಣೆಯನ್ನು ಟ್ರಸ್ಟಿನ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ ನೆರವೇರಿಸಿದರು, ನಿರ್ದೇಶಕ ತರಬಹಳ್ಳಿ ಹರೀಶ್, ಉಮೇಶ್, ಮಂಜುನಾಥ್, ನಿವೇದಿತಾ ಹೆಮಂತಗೌಡ, ಬೆಟ್ಟಹಳ್ಳಿ ಗೋಪಿನಾಥ್, ಶಿವಕುಮಾರ್ ಇತರರು ಇದ್ದರು. | Kannada Prabha

ಸಾರಾಂಶ

ಸೂಲಿಬೆಲೆ: ಸರ್ಕಾರಿ ಶಾಲೆಗಳ ಬಗ್ಗೆ ಪೋಷಕ ಸಮುದಾಯದಲ್ಲಿ ಅಸಡ್ಡೆ ಮನೋಭಾವ ಮನೆ ಮಾಡಿದ್ದು, ಇದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪಿವೆ ಎಂದು ಜೇನುಗೂಡುರೂರಲ್ ಡೆವಲ್ಪಮೆಂಟ್ ಅಂಡ್ ಕಲ್ಚರಲ್ ಟ್ರಸ್ಟಿನ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ ಕಳವಳ ವ್ಯಕ್ತಪಡಿಸಿದರು.

ಸೂಲಿಬೆಲೆ: ಸರ್ಕಾರಿ ಶಾಲೆಗಳ ಬಗ್ಗೆ ಪೋಷಕ ಸಮುದಾಯದಲ್ಲಿ ಅಸಡ್ಡೆ ಮನೋಭಾವ ಮನೆ ಮಾಡಿದ್ದು, ಇದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪಿವೆ ಎಂದು ಜೇನುಗೂಡುರೂರಲ್ ಡೆವಲ್ಪಮೆಂಟ್ ಅಂಡ್ ಕಲ್ಚರಲ್ ಟ್ರಸ್ಟಿನ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ ಕಳವಳ ವ್ಯಕ್ತಪಡಿಸಿದರು.

ಹೋಬಳಿ ಬೆಟ್ಟಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿದರು.ಜೇನುಗೂಡು ರೂರಲ್ ಡೆವಲಪ್‌ಮೆಂಟ್ ಅಂಡ್ ಕಲ್ಚರಲ್ ಟ್ರಸ್ಟ್ ಸತತ ೫ ವರ್ಷಗಳಿಂದ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಥಮ ಆದ್ಯತೆ ನೀಡುತ್ತಿದೆ. ಬೆಟ್ಟಹಳ್ಳಿ ಸರ್ಕಾರಿ ಶಾಲೆಯನ್ನು ಖಾಸಗಿ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ಅನುದಾನದಲ್ಲಿ ಸುಮಾರು ೪೦ ರು. ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು, ಲೇಖನ ಸಾಮಾಗ್ರಿ ವಿತರಣೆ ಹಾಗೂ ಐಡಿ ಕಾರ್ಡ್‌ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅಡುಗೆ ಮನೆ ನಿರ್ಮಾಣ ಮಾಡಿಕೊಡುತ್ತೇವೆ ಎಂದು ತಿಳಿಸಿದರು.ಮಾನವ ಹಕ್ಕುಗಳ ಜಾಗೃತಿ ಸಮಿತಿ ಅಧ್ಯಕ್ಷ ಎಂ.ಆರ್.ಉಮೇಶ್ ಮಾತನಾಡಿ, ಸರ್ಕಾರಿ ಶಾಲೆಗಳು ಉಳಿಯಬೇಕಾದರೆ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಕನ್ನಡ ಮಾಧ್ಯಮ ಉಳಿಯಬೇಕು ಎಂದರು.ಗ್ರಾ.ಪಂ ಮಾಜಿ ಉಪಾಧ್ಯಕ್ಷೆ ನಿವೇಧಿತಾ, ಮುಖಂಡ ಹೇಮಂತಗೌಡ, ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಬೆಟ್ಟಹಳ್ಳಿಗೋಪಿನಾಥ್, ನಿರ್ದೇಶಕ ತರಬಹಳ್ಳಿ ಹರೀಶ್, ಪತ್ರಕರ್ತ ಮಂಜುನಾಥ್, ಮುಖ್ಯಶಿಕ್ಷಕ ಶಿವಕುಮಾರ್, ಅಂಗನವಾಡಿ ಕಾರ್ಯಕರ್ತೆ ಸುಜಾತ, ಸಹ ಶಿಕ್ಷಕ ಶೋಭಾ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!