ಹುಬ್ಬಳ್ಳಿ:
ಅವರು ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬುಧವಾರ ಶಿಗ್ಗಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಶೇ. 80.48ರಷ್ಟು ಮತದಾನವಾಗಿದೆ. 2023ರ ಚುನಾವಣೆ ಸಂದರ್ಭದಲ್ಲಿಯೂ ಅಷ್ಟೇ ಪ್ರಮಾಣದ ಮತದಾನವಾಗಿತ್ತು. ಹಾಗಾಗಿ ಈ ಬಾರಿಯೂ ಕ್ಷೇತ್ರದ ಜನತೆಯ ಬೆಂಬಲ ನನ್ನ ಪರವಾಗಿರುತ್ತದೆ ಎಂಬ ನಂಬಿಕೆಯಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಕ್ಷೇತ್ರದಲ್ಲಿ ನನ್ನ ಪರವಾಗಿ ಹಗಲು-ರಾತ್ರಿ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಯಾಸಿರಖಾನ್ ಪಠಾಣ್ ರೌಡಿ ಶೀಟರ್ ಎಂಬ ಬಸವರಾಜ ಬೊಮ್ಮಾಯಿ ಹೇಳಿಕೆ ಕುರಿತು ಕಿಡಿಕಾರಿದ್ದ ಸಚಿವ ಶಿವಾನಂದ ಪಾಟೀಲರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾವು ಆ ರೀತಿಯಾಗಿ ಎಲ್ಲಿಯೂ ಹೇಳಿಲ್ಲ. ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.