ಜನರ ಬೇಡಿಕೆಗಳನ್ನು ಅರಿತು ಪೂರೈಸುವುದು ನಮ್ಮ ಜವಾಬ್ದಾರಿ: ಎಚ್.ಡಿ ತಮ್ಮಯ್ಯ

KannadaprabhaNewsNetwork |  
Published : Feb 21, 2025, 11:45 PM IST
ಚಿಕ್ಕಮಗಳೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಚಿಕ್ಕಮಗಳೂರಿನಿಂದ ಕಳಸಾಪುರ ಮಾರ್ಗವಾಗಿ ಬೆಂಗಳೂರಿಗೆ, ಹಾಗೂ ಸಗನೀಪುರದಿಂದ ಸಂಚರಿಸುವ ನೂತನ ಬಸ್ ಸಂಚಾರಕ್ಕೆ ಶಾಸಕ ಹೆಚ್.ಡಿ ತಮ್ಮಯ್ಯ ಹಸಿರು ನಿಶಾನೆ ತೋರಿಸಿದರು | Kannada Prabha

ಸಾರಾಂಶ

ಚಿಕ್ಕಮಗಳೂರು, ಸಾರ್ವಜನಿಕರ ಬೇಡಿಕೆಗಳನ್ನು ಅರಿತು ಪೂರೈಸುವ ಜೊತೆಗೆ ಅವರ ಉತ್ತಮ ಜೀವನ ನಿರ್ವಹಣೆಗೆ ಸಹಕರಿಸುವುದು ನಮ್ಮ ಜವಾಬ್ದಾರಿ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.

ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನೂತನ ಬಸ್ ಸಂಚಾರಕ್ಕೆ ಹಸಿರು ನಿಶಾನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸಾರ್ವಜನಿಕರ ಬೇಡಿಕೆಗಳನ್ನು ಅರಿತು ಪೂರೈಸುವ ಜೊತೆಗೆ ಅವರ ಉತ್ತಮ ಜೀವನ ನಿರ್ವಹಣೆಗೆ ಸಹಕರಿಸುವುದು ನಮ್ಮ ಜವಾಬ್ದಾರಿ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಚಿಕ್ಕಮಗಳೂರಿನಿಂದ ಕಳಸಾಪುರ ಮಾರ್ಗವಾಗಿ ಬೆಂಗಳೂರಿಗೆ, ಹಾಗೂ ಸಗನೀಪುರದಿಂದ ಸಂಚರಿಸುವ ನೂತನ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿ ನಂತರ ಮಾತನಾಡಿ, ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿ ಮಹಿಳಾ ಸಬಲೀಕರಣಕ್ಕೆ ದಾಪುಗಾಲಿಟ್ಟಿದೆ ಎಂದರು. ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಪ್ರಯಾಣ ನೀಡಿರುವುದು ಮಹಿಳೆಯರ ಆರ್ಥಿಕ ಉನ್ನತಿಗೂ ಕಾರಣವಾಗಿದೆ. ಸಗನೀ ಪುರ ಗ್ರಾಮದ ಅನೇಕರು ಕೃಷಿ ಅವಲಂಬಿತರಾಗಿದ್ದು ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ನಗರದಲ್ಲಿನ ಶಾಲೆಗಳಿಗೆ ತೆರಳಿ ವಿದ್ಯಾ ಭ್ಯಾಸ ನಿರ್ವಹಿಸಲು ಆಗುತ್ತಿರುವ ಅಡಚಣೆ ಗಮನಿಸಿ ಇಂದು ಈ ಗ್ರಾಮಕ್ಕೆ ವಿಶೇಷ ಬಸ್ ಸಂಚಾರಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು. ಪೋಷಕರು ಮಕ್ಕಳ ಶಿಕ್ಷಣಕ್ಕೆ ಒತ್ತುನೀಡಬೇಕು. ಈ ಭಾಗದಲ್ಲಿ ಬಸ್ ನಿಲ್ದಾಣದ ಬೇಡಿಕೆ ಇದ್ದು ಮುಂದಿನ ದಿನಗಳಲ್ಲಿ ಬಸ್ ನಿರ್ಮಾಣ ಕಾಮಗಾರಿಯ ಕುರಿತು ಕ್ರಮ ವಹಿಸಲಾಗುವುದು. ಅಧಿಕಾರಿಗಳು ಸಮಯ ನಿಗದಿ ಮಾಡಿ ಸಮಯದ ವೇಳಾಪಟ್ಟಿ ಯನ್ನು ನೀಡಿ ಬಸ್ ಸೂಕ್ತ ರೀತಿಯಲ್ಲಿ ಸಂಚರಿಸುವಂತೆ ಸೂಚಿಸಿದರು.ಜಗದೀಶ್ ಕುಮಾರ್ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ. ಸಾರ್ವಜನಿಕರಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಚಿಕ್ಕಮಗಳೂರಿನಿಂದ ಕಳಸಾಪುರ, ಜಾವಗಲ್, ಬಾಣಾವರ, ತಿಪಟೂರು, ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಕಾರ್ಯ ಚರಣೆಗೊಳ್ಳುವ ನೂತನ ಬಸ್‌ಗೆ ಇಂದು ಚಾಲನೆ ನೀಡಿದ್ದು ಪ್ರತಿಯೊಬ್ಬರು ಇದರ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಸ್ವಾಮಿ. ಎ.ಎನ್ ಮಹೇಶ್, ಜಯರಾಜು ಅರಸು, ಮೂರ್ತಿ, ಯತೀಶ್, ಸಿದ್ದರಾಮು, ಆನಂದರಾಜು, ನಾಗೇಶ್, ಹಂಪಾಪುರ ಮಂಜೇಗೌಡ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''