- ಪಾಂಡೋಮಟ್ಟಿ ವಿರಕ್ತ ಮಠದ ಡಾ. ಶ್ರೀ ಗುರುಬಸವ ಮಹಾಸ್ವಾಮೀಜಿ ಮಾಹಿತಿ
ಕನ್ನಡಪ್ರಭ ವಾರ್ತೆ ಚನ್ನಗಿರಿ
ರಾಜ್ಯದ ಜನತೆಯಲ್ಲಿ ಶಿಕ್ಷಣ, ಆರೋಗ್ಯ, ಪರಿಸರ, ಕೃಷಿ ಮತ್ತು ಆಡಳಿತದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ನಮ್ಮನಡೆ ಸರ್ವೋದಯದ ಕಡೆ ಕಾರ್ಯಕ್ರಮವನ್ನು ಮೇ1 ರಿಂದ 15ರವರೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಡಾ. ಶ್ರೀ ಗುರುಬಸವ ಮಹಾಸ್ವಾಮೀಜಿ ನುಡಿದರು.ಮಂಗಳವಾರ ತಾಲೂಕಿನ ಪಾಂಡೋಮಟ್ಟಿ ಗ್ರಾಮದ ವಿರಕ್ತ ಮಠದ ಸಭಾಂಗಣದಲ್ಲಿ ನಮ್ಮನಡೆ ಸರ್ವೋದಯದ ಕಡೆಗೆ ಎಂಬ ಜನಜಾಗೃತಿ ಅಂದೋಲದ ಪೂರ್ವಭಾವಿ ಸಮಾಲೋಚನಾ ಸಭೆ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಈ ಜಾಗೃತಿ ಕಾರ್ಯಕ್ರಮವು ಜಾತ್ಯತೀತ, ಧರ್ಮಾತೀತ ಕಾರ್ಯಕ್ರಮ ಇದಾಗಿದೆ. ಮಹಾತ್ಮಗಾಂಧೀಜಿ ಅವರ ಗ್ರಾಮ ಅಭಿವೃದ್ಧಿ ಕನಸುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಾಗಿದೆ ಎಂದರು.
ಸಭೆಯಲ್ಲಿ ಗವಿ ಮಠದ ಶ್ರೀ ಚಂದ್ರಶೇಖರ ಮಹಾಸ್ವಾಮೀಜಿ, ಚನ್ನಗಿರಿ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ, ಬಸವತಪೋ ವನದ ಜಯಬಸವಾನಂದ ಮಹಾಸ್ವಾಮೀಜಿ, ಹೊಳಲ್ಕೆರೆ ಒಂಟಿ ಕಲ್ಮಠದ ತಿಪ್ಪೇರುದ್ರ ಮಹಾಸ್ವಾಮೀಜಿ, ರುದ್ರಮುನಿ ಮಹಾಸ್ವಾಮೀಜಿ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್, ಜೀವವೈವಿಧ್ಯ ನಿಗಮದ ಅಧ್ಯಕ್ಷ ವಡ್ನಾಳ್ ಜಗದೀಶ್, ನಿವೃತ್ತ ಶಿಕ್ಷಕ ಎಂ.ಯು. ಚನ್ನಬಸಪ್ಪ ಸೇರಿದಂತೆ ಮಠದ ಭಕ್ತರು, ಆಸಕ್ತ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು.
-10ಕೆಸಿಎನ್‌ಜಿ3: