ಬೆಳ್ತಂಗಡಿ: ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ ಬೃಹತ್ ಪ್ರತಿಭಟನೆ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕಿಂಜೆಯಲ್ಲಿ ನಡೆಯಿತು. ವಿಶೇಷ ಕಾಲ್ನಡಿಗೆ ಜಾಥಾ ಮೂಲಕ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜ ಮಾತನಾಡಿ ಸರ್ಕಾರದ ಆಡಳಿತ ವಿರೋಧಿ ನೀತಿಗಳನ್ನು ಎಳೆ ಎಳೆಯಾಗಿ ವಿವರಿಸಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಸರ್ಕಾರದ ಆಡಳಿತ ವಿರೋಧಿ ನೀತಿಗಳ ವಿರುದ್ಧ ಕಿಡಿಕಾರಿದರು. ವೇದಿಕೆಯಲ್ಲಿ ಜಿಲ್ಲಾ ಸಹ ಪ್ರಭಾರಿಗಳಾದ ಜಯಂತ್ ಕೋಟ್ಯಾನ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸುಚರಿತ ಭಟ್, ಉಜಿರೆ ಮಹಾಶಕ್ತಿ ಕೇಂದ್ರದ ಯಶವಂತ್ ಗೌಡ ಪುದುವೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ್, ಮನ್ ಕೀ ಬಾತ್ ಜಿಲ್ಲಾ ಸಂಚಾಲಕರಾದ ಸೀತಾರಾಮ್ ಬೆಳಾಲ್, ಸಹಕಾರ ಸಂಘದ ಪ್ರಕಾಶ್ ನಾರಾಯಣ ರಾವ್, ಮಂಡಲ ಉಪಾಧ್ಯಕ್ಷರು ಕೊರಗಪ್ಪ ಗೌಡ,ಪ್ರಭಾರಿ ಚನ್ನಕೇಶವ ಉಪಸ್ಥಿತರಿದ್ದರು. ದಿವಿನೇಶ್ ಚಾರ್ಮಾಡಿ ನಿರ್ವಹಣೆ ಮಾಡಿದರು.