ಬಿಜೆಪಿ ಪಿತೂರಿಗಳ ವಿರುದ್ಧ ನಮ್ಮ ಕಾರ್ಯಕರ್ತರು ಪುಟಿದೇಳಬೇಕು

KannadaprabhaNewsNetwork |  
Published : Sep 03, 2024, 01:33 AM IST
ಫೋಟೋ ವಿವರಣೆ : ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್.  ಫೋಟೋ-1. | Kannada Prabha

ಸಾರಾಂಶ

ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಕೋಮುವಾದಿ ಬಿಜೆಪಿ ಪಿತೂರಿಗಳ ವಿರುದ್ಧ ಕಾರ್ಯಕರ್ತರು ಪುಟಿದೇಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಕೋಮುವಾದಿ ಬಿಜೆಪಿ ಪಿತೂರಿಗಳ ವಿರುದ್ಧ ಕಾರ್ಯಕರ್ತರು ಪುಟಿದೇಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಕರೆ ನೀಡಿದರು.ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸೋಮವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಚಿವೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ನೀರಾವರಿ, ಕೈಗಾರಿಕೆ, ಸಮಾಜ ಕಲ್ಯಾಣ ಇಲಾಖೆಗೆ ಹೆಚ್ಚುವರಿ ಹಣ ನೀಡಿ ರಾಜ್ಯದ ಖಜಾನೆಯನ್ನು ದಿವಾಳಿಯಾಗಿಸಿತ್ತು. ಪಿ.ಎಸ್.ಐ, ಇಂಜಿನಿಯರಿಂಗ್ ನೇಮಕ, ಕೋವಿಡ್‍ನಲ್ಲಿ ನಡೆದ ಹಗರಣವನ್ನು ಎಲ್ಲಿ ಬಿಚ್ಚಿಡುತ್ತಾರೋ ಎಂಬ ಭಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಇಲ್ಲ ಸಲ್ಲದ ಅಪವಾದ ಹೊರಿಸುತ್ತಿದೆ. ರಾಜ್ಯಾದ್ಯಂತ ಕಾರ್ಯಕರ್ತರು ಮುಖಂಡರು ಸಿ.ಎಂ ಬೆನ್ನಿಗೆ ನಿಲ್ಲಬೇಕೆಂದು ಮನವಿ ಮಾಡಿದರು.ಕಾರ್ಯಕರ್ತರಿಲ್ಲದೆ ಪಕ್ಷವಿಲ್ಲ. ಪಕ್ಷದ ಆಶೀರ್ವಾದಿಂದ ಸಾಮಾನ್ಯ ಕಾರ್ಯಕರ್ತೆಯಾಗಿ, ಸಚಿವೆಯಾಗಿ ರಾಜ್ಯದ ಜನರ ಸೇವೆ ಮಾಡುತ್ತಿದ್ದೇನೆ. ನಾಲ್ಕು ವರ್ಷ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆಯಾಗಿದ್ದೇನೆ. ನಾನು ಎರಡು ಬಾರಿ ಸೋತರೂ ಎದೆಗುಂದಲಿಲ್ಲ. 24 ವರ್ಷಗಳಿಂದ ನಾನೂ ಕೂಡ ಸಾಕಷ್ಟು ತಳಮಳ ಅನುಭವಿಸಿದ್ದೇನೆ. ಒಮ್ಮೆಲೆ ಎಲ್ಲಾ ಅಧಿಕಾರ ಸಿಗುವುದಿಲ್ಲ. ತಳಮಟ್ಟದಿಂದ ಪಕ್ಷಕ್ಕೆ ದುಡಿಯಬೇಕೆಂದು ಹೇಳಿದರು.ಶಿಸ್ತಿನ ಪಕ್ಷ ಕಾಂಗ್ರೆಸ್‍ಗೆ ಎಷ್ಟೋ ಮಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ನಮ್ಮ ಪಕ್ಷಕ್ಕೆ ಬಲಿದಾನದ ಇತಿಹಾಸವಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ತೊಲಗಿಸಿ, ರಾಜ್ಯದ ಜನ 136 ಸೀಟುಗಳನ್ನು ಕಾಂಗ್ರೆಸ್‍ಗೆ ನೀಡಿದ್ದಾರೆ. ನಾವು ಇಷ್ಟಕ್ಕೆ ತೃಪ್ತಿಪಟ್ಟುಕೊಳ್ಳಬಾರದು 2028 ರ ವಿಧಾನಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ತೊಡಬೇಕು. ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರು ಈಗಿನಿಂದಲೇ ತಯಾರಾಗಿ ಪಕ್ಷವನ್ನು ಗೆಲ್ಲಿಸಬೇಕು. ಅಭಿವೃದ್ಧಿಯೆಂದರೆ ಬರೀ ರಸ್ತೆ ನಿರ್ಮಾಣ ಮಾಡುವುದಷ್ಟೆ ಅಲ್ಲ. ಪ್ರತಿಯೊಬ್ಬರ ಮನೆಯನ್ನು ಆರ್ಥಿಕವಾಗಿ ಮುಂದುವರೆಸುವುದೇ ನಿಜವಾದ ಅಭಿವೃದ್ಧಿ ಎಂದರು.ಕೆ.ಪಿ.ಸಿ.ಸಿ. ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿಗಳಾದ ಮುರಳಿಧರ ಹಾಲಪ್ಪ ಮಾತನಾಡಿ, ರಾಷ್ಟ್ರನಾಯಕ ದಿವಂಗತ ಎಸ್. ನಿಜಲಿಂಗಪ್ಪನವರ ನಿವಾಸವನ್ನು ಸ್ಮಾರಕವನ್ನಾಗಿ ಮಾಡುವ ಕೈಕಂರ್ಯಕ್ಕೆ ರಾಜ್ಯ ಸರ್ಕಾರ ಕೈಹಾಕಿದ್ದು, ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ವೀಕ್ಷಣೆಗೆ ಬಂದಿದ್ದಾರೆ. ನಂತರ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುವರು ಎಂದು ತಿಳಿಸಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ. ಹಾಲಸ್ವಾಮಿ, ಉಪಾಧ್ಯಕ್ಷರುಗಳಾದ ಎಸ್.ಎನ್.ರವಿಕುಮಾರ್, ನಜ್ಮತಾಜ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಘು ಪಿ. ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಹನುಮಲಿ ಷಣ್ಮುಖಪ್ಪ, ಮಾಜಿ ಶಾಸಕ ಎ.ವಿ. ಉಮಾಪತಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್‍ಕುಮಾರ್, ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್. ಶಿವಣ್ಣ, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ