ಬಳ್ಳಾರಿ: ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟ್ರವಾಗಿದ್ದು, ಪ್ರಪಂಚದಾದ್ಯಂತ ರಾಷ್ಟ್ರೀಯ ಐಕ್ಯತೆ ಸಾರಿದ ದೇಶ ನಮ್ಮದು ಎಂದು ಎಸ್ಪಿ ಡಾ.ಶೋಭಾರಾಣಿ ವಿ.ಜೆ. ಹೇಳಿದರು.ರಾಷ್ಟ್ರೀಯ ಐಕ್ಯತಾ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರ, ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮದಿನದ ವಾರ್ಷಿಕೋತ್ಸವದ ನಿಮಿತ್ತ ಸಾರ್ವಜನಿಕರಲ್ಲಿ ನಾಗರಿಕರ ಸುರಕ್ಷತೆ ಮತ್ತು ಜವಾಬ್ದಾರಿಗಳ ಕುರಿತು ಅರಿವು ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ರನ್- ಫಾರ್- ಯುನಿಟಿ (ಏಕತೆಗಾಗಿ ಓಟ) ಮ್ಯಾರಥಾನ್ ಓಟ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ಪ್ರಸ್ತುತದಲ್ಲಿ ಯುವ ಸಮುದಾಯ ಆನ್‌ಲೈನ್ ಗೇಮ್, ಆನ್ ಲೈನ್ ವಂಚನೆಗಳಿಂದ ದೂರವಿರಬೇಕು. ಮೊಬೈಲ್ ನಲ್ಲಿ ಬರುವ ಯಾವುದೇ ರೀತಿಯ ಗೊತ್ತಿರದ ಫೈಲ್‌ಗಳ ಮೇಲೆ ಕ್ಲಿಕ್ ಮಾಡಬಾರದು. ಇದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆ ಹೆಚ್ಚು ಎಂದು ತಿಳಿಸಿದರು.
ಮ್ಯಾರಥಾನ್ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಆರಂಭಗೊಂಡು ಇಂದಿರಾ ವೃತ್ತ- ನೂತನ ಜಿಲ್ಲಾಡಳಿತ ಭವನ- ಎಂ.ಜಿ ರಸ್ತೆ- ಅನಂತಪುರ ಬೈಪಾಸ್ ಕ್ರಾಸ್ ನಿಂದ ಮರಳಿ ಎಂ.ಜಿ ವೃತ್ತ- ಇಂದಿರಾ ವೃತ್ತ- ಎಸ್. ಎನ್.ಪೇಟೆ ಕ್ರಾಸ್(ಕೂಲ್ ಕಾರ್ನರ್)- ಡಿಎಆರ್ ಪೊಲೀಸ್ ಕವಾಯತು ಮೈದಾನಕ್ಕೆ ತಲುಪಿ ಮುಕ್ತಾಯಗೊಂಡಿತು.ಮ್ಯಾರಥಾನ್ ಓಟದಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಾಳುಗಳಿಗೆ ಪ್ರಶಸ್ತಿ, ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಮ್ಯಾರಥಾನ್ ಓಟದ ವಿಜೇತರು:
ಪ್ರಥಮ ಬಹುಮಾನ (₹10 ಸಾವಿರ ನಗದು): ಪುರುಷೋತ್ತಮ ಬಳ್ಳಾರಿ
ತೃತೀಯ ಬಹುಮಾನ (₹3 ಸಾವಿರ): ಸುನೀಲ್ ಬೆಳಗಾವಿ
ಪ್ರಥಮ ಬಹುಮಾನ (₹10 ಸಾವಿರ): ಶಾಹೀನ್ ಎಸ್.ಡಿ ಹುಬ್ಬಳ್ಳಿ
ತೃತೀಯ ಬಹುಮಾನ (₹3 ಸಾವಿರ): ವಿಜಯಲಕ್ಷ್ಮಿ ಧಾರವಾಡ