ನೌಕರರಿಗೆ ಸೌಲಭ್ಯ ನೀಡದ ಶಾಹಿ ಗಾರ್ಮೆಂಟ್ಸ್ ವಿರುದ್ಧ ಆಕ್ರೋಶ

KannadaprabhaNewsNetwork |  
Published : Oct 30, 2025, 01:15 AM IST
29ಕೆಎಂಎನ್ ಡಿ14 | Kannada Prabha

ಸಾರಾಂಶ

ಶಾಹಿ ಗಾರ್ಮೆಂಟ್ಸ್‌ನಲ್ಲಿ ಮಹಿಳಾ ನೌಕರರೇ ಹೆಚ್ಚಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಆರೋಗ್ಯ, ಸಾರಿಗೆ, ಊಟ ಸೇರಿದಂತೆ ಇನ್ನಿತರೆ ಅಗತ್ಯ ಮೂಲಭೂತ ಸೌಕರ್ಯ ನೀಡಲು ಕಂಪನಿಯ ಆಡಳಿತ ಮಂಡಳಿ ವಿಫಲವಾಗಿದೆ. ನೌಕರರಿಗೆ ಸೌಲಭ್ಯ ನೀಡದಿರುವುದನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ್ದೇವೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಶಾಹಿ ಗಾರ್ಮೆಂಟ್ಸ್ ಕಂಪನಿ ನೌಕರರಿಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ ಎಂದು ಆರೋಪಿಸಿ ನೌಕರರ ಪರವಾಗಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಾಲೂಕಿನ ಕೆ.ಶೆಟ್ಟಹಳ್ಳಿಯ ಶಾಹಿ ಗಾರ್ಮೆಂಟ್ಸ್ ಎದುರು ವೇದಿಕೆ ಅಧ್ಯಕ್ಷ ಶಂಕರ್‌ಬಾಬು ನೇತೃತ್ವದಲ್ಲಿ ಪದಾಧಿಕಾರಿಗಳು ಸೇರಿ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೆಲ ಕಾಲ ಧರಣಿ ನಡೆಸಿದರು.

ಬಳಿಕ ಶಂಕರ್ ಬಾಬು ಮಾತನಾಡಿ, ಗಾರ್ಮೆಂಟ್ಸ್‌ನಲ್ಲಿ ಮಹಿಳಾ ನೌಕರರೇ ಹೆಚ್ಚಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಆರೋಗ್ಯ, ಸಾರಿಗೆ, ಊಟ ಸೇರಿದಂತೆ ಇನ್ನಿತರೆ ಅಗತ್ಯ ಮೂಲಭೂತ ಸೌಕರ್ಯ ನೀಡಲು ಕಂಪನಿಯ ಆಡಳಿತ ಮಂಡಳಿ ವಿಫಲವಾಗಿದೆ. ನೌಕರರಿಗೆ ಸೌಲಭ್ಯ ನೀಡದಿರುವುದನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ್ದೇವೆ. ಆದರೆ, ಮುಂದಿನ ದಿನಗಳಲ್ಲಿ ಈ ಎಲ್ಲಾ ಅಗತ್ಯ ಸೌಕರ್ಯಗಳ ಬಗ್ಗೆ ಕ್ರಮವಹಿಸದಿದ್ದರೆ ಗಾರ್ಮೆಂಟ್ಸ್ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ ಗಾರ್ಮೆಂಟ್ಸ್‌ನ ಮಾನವ ಸಂಪನ್ಮೂಲ ಅಧಿಕಾರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮನವಿ ಸ್ವೀಕರಿಸಿದ ಮಾನವ ಸಂಪನ್ಮೂಲ ಅಧಿಕಾರಿ, ನೌಕರರ ಪರ ತಮ್ಮ ಮನವಿಯನ್ನು ಕಾರ್ಖಾನೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಜೊತೆಗೆ ಸಾಧ್ಯವಾದಷ್ಟು ಸೌಕರ್ಯಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆಯಲ್ಲಿ ವೇದಿಕೆ ಪದಾಧಿಕಾರಿಗಳಾದ ಜಗದೀಶ್, ಬಾಳೆ ಮಂಜು, ಛಾಯಾ ಸೇರಿದಂತೆ ಇತರರು ಇದ್ದರು.

ನ.6 ರಂದು ದಿಶಾ ಸಮಿತಿ ಸಭೆ

ಮಂಡ್ಯ: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯನ್ನು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹಾಗೂ ಸಂಸದ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನ.6ರಂದು ಬೆಳಗ್ಗೆ 11.00 ಗಂಟೆಗೆ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಭೆಗೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಇತರೆ ಸಿಬ್ಬಂದಿಯನ್ನು ನಿಯೋಜಿಸದೆ ತಪ್ಪದೇ ಹಾಜರಾಬೇಕೆಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನ.14 ರಿಂದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ

ಮಂಡ್ಯ: ಜಿಲ್ಲೆಯಲ್ಲಿ ನವೆಂಬರ್ 14 ರಿಂದ 20 ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಆಚರಿಸುತ್ತಿದೆ. ಈ ಸಂಬಂಧ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಸಪ್ತಾಹ ನಡೆಯುವ 7 ದಿನಗಳಂದು ಸಹಕಾರ ಸಂಘ ಹಾಗೂ ಬ್ಯಾಂಕ್‌ಗಳ ಕಟ್ಟಡದ ಮೇಲೆ ಸಹಕಾರ ಧ್ವಜ ವನ್ನು ಕಡ್ಡಾಯವಾಗಿ ಹಾರಿಸಬೇಕು. ಸಹಕಾರ ಧ್ವಜ ಇಲ್ಲದೇ ಇರುವ ಸಂಘದವರು ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟದಲ್ಲಿ ಪಡೆಯುವಂತೆ ಹಾಗೂ ಸಹಕಾರ ಸಪ್ತಾಹವನ್ನು ಯಶಸ್ವಿಯಾಗಿ ಅರ್ಥಪೂರ್ಣವಾಗಿ ಅಚರಿಸುವಂತೆ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ