ಕನ್ನಡಪ್ರಭ ವಾರ್ತೆ ರಾಮನಾಥಪುರ
ರಾಮನಾಥಪುರದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಜಾತ್ರೆ ಹಾಗೂ ರಥೋತ್ಸವ ಪ್ರಾರಂಭವಾಗಲಿದೆ. ಅಷ್ಟರಲ್ಲಿ ಈ ಕಾವೇರಿ ನದಿ ದಂಡೆಯಲ್ಲಿರುವ ಕಿರು ಸೇತುವೆ ಕಾಮಗಾರಿ ಮುಗಿಸಬೇಕು. ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಿಂದ ರಾಮೇಶ್ವರ ದೇವಾಲಯಕ್ಕೆ ಹೋಗುವ ಮಧ್ಯ ಸುಮಾರು ಒಂದು ವರ್ಷದಿಂದ ಕಿರು ಸೇತುವೆ ಕಾಮಗಾರಿ ನಡೆಯುತ್ತಿದ್ದು, ಇನ್ನೂ ಮುಗಿದಿಲ್ಲ. ಇದರಿಂದ ಸಂಚರಿಸಲು ಭಕ್ತರು ಪರದಾಡುವಂತಾಗಿದೆ ಎಂದು ದೂರಿದರು.
ಸಂಬಂಧಪಟ್ಟ ಅಧಿಕಾರಿಗಳು ಸೇತುವೆ ಕಾಮಗಾರಿಯನ್ನು ಶೀಘ್ರ ಮುಗಿಸಿ ದೇವಾಲಯಗಳಿಗೆ ಭಕ್ತರು ಹಾಗೂ ವಾಹನಗಳು ತಿರುಗಾಡಲು ಅನುವು ಮಾಡಿಕೊಡದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಶಂಕರ್ ಎಚ್ಚರಿಸಿದ್ದಾರೆ.ಫೋಟೋ: ಶಂಕರ್