ಕನ್ನಡಪ್ರಭ ವಾರ್ತೆ ಕಮತಗಿ
ರೈತರ ಹೋರಾಟಕ್ಕೆ ಸ್ವಾಮೀಜಿಗಳ ಬೆಂಬಲ: ಇಳಕಲ್ಲ ಗುರು ಮಹಾಂತ ಸ್ವಾಮೀಜಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ರೈತರು ಬೆಳೆಯುವ ಕಬ್ಬು ಸೇರಿದಂತೆ ವಿವಿಧ ರೀತಿಯ ಬೆಳೆ ಬೆಳೆಯುತ್ತಾರೆ. ಮಾರುಕಟ್ಟೆಯಲ್ಲಿ ಬೆಳೆಗೆ ಸೂಕ್ತ ಬೆಲೆ ನಿಗದಿಪಡಿಸಬೇಕು. ಸದ್ಯ ಕಬ್ಬಿಗೆ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಕಡಿಮೆ ಬೆಲೆ ನೀಡಲಾಗುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಹಾಗೂ ಕಾರ್ಖಾನೆ ಮಾಲೀಕರು ಸೂಕ್ತ ಬೆಲೆ ನೀಡುವ ಮೂಲಕ ಅವರ ಬೇಡಿಕೆ ಈಡೇರಿಸಬೇಕು ಎಂದು ರಾಜ್ಯ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಅಮೀನಗಡದ ಪ್ರಭು ಶಂಕರರಾಜೇಂದ್ರ ಶ್ರೀ, ಗುಳೇದಗುಡ್ಡ ಅಭಿನವ ಕಾಡಸಿದ್ದೇಶ್ವರ ಶ್ರೀಗಳು ಭಾಗವಹಿಸಿದ್ದರು.
ಪ್ರತಿಭಟನಾ ಸ್ಥಳಕ್ಕೆ ಎಸಿ ಭೇಟಿ: ಕಮತಗಿ ಕ್ರಾಸ್‌ನಲ್ಲಿ ಬೆಳಗ್ಗೆಯಿಂದ ರಸ್ತೆ ತಡೆಹಿಡಿದು ರೈತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಭೇಟಿ ನೀಡಿ ಮನವಿ ಸ್ವೀಕರಿಸಿ,ಆದಷ್ಟು ಬೇಗ ನಿಮ್ಮ ಬೇಡಿಕೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದರಿಂದ ರೈತರು ಪ್ರತಿಭಟನೆ ಹಿಂಪಡೆದರು.ಈ ವೇಳೆ ಹುನಗುಂದ ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ, ಉಪತಹಸೀಲ್ದಾರ್ ಎಂ.ಆರ್. ಹೆಬ್ಬಳ್ಳಿ, ಹುನಗುಂದ ಸಿಪಿಐ, ಕಂದಾಯ ನಿರೀಕ್ಷಕ ಡಿ.ಎಸ್. ಯತ್ನಟ್ಟಿ ಇದ್ದರು.
ಪ್ರತಿಭಟನೆಯಲ್ಲಿ ಹುನಗುಂದ, ಇಳಕಲ್, ಗುಳೇದಗುಡ್ಡ, ರಾಯಚೂರು ಜಿಲ್ಲಾ ರೈತ ಸಂಘದ ಮುಖಂಡರು, ಕಮತಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು, ಕರ್ನಾಟಕ ರಕ್ಷಣಾ ವೇದಿಕೆಯ ಎಚ್ ಶಿವರಾಮೇಗೌಡ ಬಣದ ಮುಖಂಡರು, ಹಸಿರು ಕ್ರಾಂತಿ ಸಂಘಟನೆಯ ಮುಖಂಡರು ಭಾಗವಹಿಸಿದ್ದರು.