ಹೆಚ್ಚುವರಿ ವಿದ್ಯುತ್ ಬಿಲ್‌ಗೆ ಆಕ್ರೋಶ

KannadaprabhaNewsNetwork |  
Published : May 23, 2026, 02:00 AM IST
ನೇಕಾರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಹೆಸ್ಕಾಂ ಅಧಿಕಾರಿಗಳು ನೇಕಾರರಿಗೆ ಭಾರಿ ಮೊತ್ತದ ಬಿಲ್ ನೀಡುತ್ತಿದ್ದಾರೆ. ಇದು ಸರ್ಕಾರ ಕೊಟ್ಟು ಕಿತ್ತುಕೊಳ್ಳುವ ನಡೆ ಅನುಸರಿಸುತ್ತಿರುವಂತೆ ಕಾಣುತ್ತಿದೆ.

ಗದಗ: ಸರ್ಕಾರದ ಆದೇಶದಂತೆ ವಿದ್ಯುತ್ ಚಾಲಿತ ಮಗ್ಗಗಳಿಗೆ 10 ಎಚ್‌ಪಿವರೆಗೆ ಉಚಿತ ವಿದ್ಯುತ್ ನೀಡಬೇಕಾಗಿದ್ದರೂ ಗದಗ- ಬೆಟಗೇರಿ ಅವಳಿ ನಗರದ ವೃತ್ತಿಪರ ನೇಕಾರರ ಘಟಕಗಳಿಗೆ ಹೆಸ್ಕಾಂ ಇಲಾಖೆಯು ಹೆಚ್ಚುವರಿ ಹಣ ಭರಿಸುವಂತೆ ಬಿಲ್ ನೀಡುತ್ತಿದೆ. ಇದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ರಾಜ್ಯ ನೇಕಾರ ಸೇವಾ ಸಂಘದ ವತಿಯಿಂದ ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನಗರದ ಮುಳಗುಂದ ನಾಕಾ ಬಳಿ ಇರುವ ಹೆಸ್ಕಾಂ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರರಿಗೆ ಸಲ್ಲಿಸಿದ ಮನವಿಯಲ್ಲಿ, ರಾಜ್ಯ ನೇಕಾರ ಸೇವಾ ಸಂಘ ಹಾಗೂ ಸಮಸ್ತ ವೃತ್ತಿಪರ ನೇಕಾರರ ನಿರಂತರ ಹೋರಾಟದ ಫಲವಾಗಿ ಸರ್ಕಾರವು 10 ಎಚ್‌ಪಿ ವರೆಗಿನ ಮಗ್ಗಗಳಿಗೆ ಸಂಪೂರ್ಣ ಉಚಿತ ವಿದ್ಯುತ್ ಹಾಗೂ 10 ಎಚ್‌ಪಿಗಿಂತ ಮೇಲ್ಪಟ್ಟ ಮಗ್ಗಗಳಿಗೆ ಪ್ರತಿ ಯುನಿಟ್‌ಗೆ ₹1.25 ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಹೆಸ್ಕಾಂ ಅಧಿಕಾರಿಗಳು ನೇಕಾರರಿಗೆ ಭಾರಿ ಮೊತ್ತದ ಬಿಲ್ ನೀಡುತ್ತಿದ್ದಾರೆ. ಇದು ಸರ್ಕಾರ ಕೊಟ್ಟು ಕಿತ್ತುಕೊಳ್ಳುವ ನಡೆ ಅನುಸರಿಸುತ್ತಿರುವಂತೆ ಕಾಣುತ್ತಿದೆ.

ಕೂಡಲೇ 10 ಎಚ್‌ಪಿ ವರೆಗಿನ ಎಲ್ಲ ವಿದ್ಯುತ್ ಚಾಲಿತ ಮಗ್ಗಗಳಿಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸದೆ ಸಂಪೂರ್ಣ ಉಚಿತವಾಗಿ ಜೀರೋ ಬಿಲ್ ನೀಡಬೇಕು. ಇನ್ನು ಮುಂದೆ ಹೆಸ್ಕಾಂನಿಂದ ಹಣ ಪಾವತಿಸುವಂತೆ ಬಿಲ್ ಬಂದರೆ ಅದಕ್ಕೆ ಸರ್ಕಾರ ಮತ್ತು ಇಲಾಖೆಯೇ ಸಂಪೂರ್ಣ ಜವಾಬ್ದಾರಿಯೇ ಹೊರತು, ನೇಕಾರರಾಗಲಿ ಅಥವಾ ಮಗ್ಗದ ಮಾಲೀಕರಾಗಲಿ ಒಂದು ರುಪಾಯಿಯನ್ನೂ ಪಾವತಿಸುವುದಿಲ್ಲ.

ಹೆಸ್ಕಾಂ ಇಲಾಖೆಯು ತಾಂತ್ರಿಕ ಗೊಂದಲವನ್ನು ಬಗೆಹರಿಸಿ, ನೇಕಾರರ ನೆರವಿಗೆ ಬರಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನೇಕಾರರ ಹಿತರಕ್ಷಣೆಗಾಗಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ವೃತ್ತಿಪರ ನೇಕಾರರು ಮನವಿಯಲ್ಲಿ ತಿಳಿಸಿದ್ದಾರೆ. ವಸತಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮುಂಡರಗಿ: ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿನಿಲಯಗಳಿಗೆ 2026- 27ನೇ ಸಾಲಿನ ಮೆಟ್ರಿಕ್‌ಪೂರ್ವ(5ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲು ಸೂಚಿಸಲಾಗಿದೆ. ಜೂ. 8 ಅರ್ಜಿ ಸಲ್ಲಿಸಲು ಕೊನೆಯ ದಿನ.ಮುಂಡರಗಿ ತಾಲೂಕಿನ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ- 1, 2ಎ, 2ಬಿ, 3ಎ, 3ಬಿ ಪ.ಜಾ, ಪ್ರವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2026- 27ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿದೆ. ವಿದ್ಯಾರ್ಥಿಗಳು https://bcwd.karnataka.gov.in/bcwd ಅನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ- ಮೇಲ್ ಮುಖಾಂತರ ಅಥವಾ ತಾಲೂಕು ಕಲ್ಯಾಣಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮುಂಡರಗಿ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಣಕೋಣ ಗ್ರಿಡ್‌ನಿಂದಲೇ ಮರಳಿ ವಿದ್ಯುತ್ ಸಂಪರ್ಕ: ಗ್ರಾಮಸ್ಥರ ಹರ್ಷ
ನನ್ನ ಗಟ್ಟಿ ಧ್ವನಿ ಅಡಗಿಸಲು ಪ್ಯಾಕೇಜ್ ಮಾಡಿ ಸೋಲಿಸಿದ್ದಾರೆ: ಆಂಜನೇಯ