ಬಡವರ ವಿರೋಧಿ ಸರ್ಕಾರದಿಂದ ಜನೌಷಧ ಕೇಂದ್ರಗಳ ಸ್ಥಗಿತ: ಆಕ್ರೋಶ

KannadaprabhaNewsNetwork |  
Published : Jun 01, 2025, 01:57 AM IST
೩೧ಕೆಎಂಎನ್‌ಡಿ-೪ ಕೆ.ಎಸ್.ವಿಜಯಕುಮಾರ್ | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯುಳ್ಳ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ಜನೌಷಧ ಕೇಂದ್ರಗಳಲ್ಲಿ ಶೇ. ೭೦ರಿಂದ ೯೦ ರಷ್ಟು ಕಡಿಮೆ ಬೆಲೆಯಲ್ಲಿ ಜೆನೆರಿಕ್ ಔಷಧಗಳು ದೊರಕುತ್ತಿದೆ. ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಅತ್ಯುತ್ತಮ ಔಷಧ ಒದಗಿಸುತ್ತಿರುವ ಈ ಕೇಂದ್ರಗಳನ್ನು ಮುಚ್ಚಿಸುವ ಅಗತ್ಯವೇನಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಬಡವರು, ಸಾಮಾನ್ಯ ಜನರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ತಂದ ಜನೌಷಧ ಕೇಂದ್ರಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿ ದ್ವೇಷದ ರಾಜಕಾರಣಕ್ಕೆ ನಾಂದಿ ಹಾಡಿದೆ ಎಂದು ಬಿಜೆಪಿ ಮಾಜಿ ಅಧ್ಯಕ್ಷ ಕೆ.ಜೆ.ವಿಜಯಕುಮಾರ್ ಟೀಕಿಸಿದ್ದಾರೆ.

ದೇಶಾದ್ಯಂತ ಯಶಸ್ವಿ ಮಾದರಿಯಾಗಿ ಹೊರಹೊಮ್ಮಿರುವ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳು ಕಡಿಮೆ ವೆಚ್ಚದಲ್ಲಿ ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಔಷಧ ಒದಗಿಸುತ್ತಿವೆ. ಕರ್ನಾಟಕದಲ್ಲಿಯೂ ನೂರಾರು ಜನೌಷಧ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ, ಸರ್ಕಾರ ಕುಂಟು ನೆಪ ಹೇಳಿ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು ೨೦೦ಕ್ಕೂ ಹೆಚ್ಚು ಜನೌಷಧ ಕೇಂದ್ರಗಳನ್ನು ಮುಚ್ಚಿಸುವ ಮೂಲಕ ಬಡವರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯುಳ್ಳ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ಜನೌಷಧ ಕೇಂದ್ರಗಳಲ್ಲಿ ಶೇ. ೭೦ರಿಂದ ೯೦ ರಷ್ಟು ಕಡಿಮೆ ಬೆಲೆಯಲ್ಲಿ ಜೆನೆರಿಕ್ ಔಷಧಗಳು ದೊರಕುತ್ತಿದೆ. ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಅತ್ಯುತ್ತಮ ಔಷಧ ಒದಗಿಸುತ್ತಿರುವ ಈ ಕೇಂದ್ರಗಳನ್ನು ಮುಚ್ಚಿಸುವ ಅಗತ್ಯವೇನಿದೆ, ರಾಜ್ಯ ಸರ್ಕಾರ ಕಾರ್ಪೊರೇಟ್ ಔಷಧ ಕಂಪನಿಗಳು ಮತ್ತು ಖಾಸಗಿ ಮೆಡಿಕಲ್ ಲಾಭಿಗೆ ಮಣಿದು ಈ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದರು.

ಜನೌಷಧ ಕೇಂದ್ರಗಳು ಬಡವರ ಪಾಲಿನ ವರದಾನವಾಗಿವೆ. ಆದರೆ, ಬಡವರ ಆರೋಗ್ಯದಲ್ಲೂ ರಾಜಕೀಯ ಮಾಡುವ ಈ ಭ್ರಷ್ಟ ಕರ್ನಾಟಕ ಕಾಂಗ್ರೆಸ್‌ಕ್ಕೆ ಜನರೇ ಬುದ್ಧಿ ಕಲಿಸುವ ದಿನ ದೂರವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌