ಧರ್ಮಸ್ಥಳದ ವಿರುದ್ಧ ಪಿತೂರಿಗೆ ಆಕ್ರೋಶ

KannadaprabhaNewsNetwork |  
Published : Aug 13, 2025, 02:31 AM IST
ತತತತತ | Kannada Prabha

ಸಾರಾಂಶ

ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿದೇವಾಲಯ ಹಾಗೂ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಸರ್ಕಾರ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಡಾ.ಸಿದ್ಧಸೇನ ಮುನಿ ಮಹಾರಾಜರ ನೇತೃತ್ವದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳು ಪಟ್ಟಣದ ಮಹಾವೀರ ಭವನದಲ್ಲಿ ತಹಶೀಲ್ದಾರ ಸುರೇಶ ಮುಂಜೆ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ರಾಯಬಾಗ

ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿದೇವಾಲಯ ಹಾಗೂ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಸರ್ಕಾರ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಡಾ.ಸಿದ್ಧಸೇನ ಮುನಿ ಮಹಾರಾಜರ ನೇತೃತ್ವದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳು ಪಟ್ಟಣದ ಮಹಾವೀರ ಭವನದಲ್ಲಿ ತಹಶೀಲ್ದಾರ ಸುರೇಶ ಮುಂಜೆ ಅವರಿಗೆ ಮನವಿ ಸಲ್ಲಿಸಿದರು.

ಮಂಗಳವಾರ ಬೆಳಗ್ಗೆ 11ಕ್ಕೆ ಪಟ್ಟಣದ ಹನುಮಾನ ದೇವಸ್ಥಾನದಿಂದ ಮಹಾವೀರ ಭವನದವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಧರ್ಮಸ್ಥಳ ಭಕ್ತಾಭಿಮಾನಿಗಳು ಮತ್ತು ವಿವಿಧ ಹಿಂದೂ ಸಂಘಟನೆ ಮುಖಂಡರು ಯುಟ್ಯೂಬರ್ಸ್‌ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಈ ವೇ‍ಳೆ ಡಾ.ಸಿದ್ಧಸೇನ ಮುನಿ ಮಹಾರಾಜರು ಮಾತನಾಡಿ, ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡಿ, ಕಳಂಕ ತರುವ ಕೆಲಸ ಮಾಡುತ್ತಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಸರ್ಕಾರ ಮಾಡದ ಕೆಲಸವನ್ನು ಡಾ.ವೀರೇಂದ್ರ ಹೆಗ್ಗಡೆ ಅವರು ಮಾಡುತ್ತಿದ್ದಾರೆ. ಸಾಮಾಜಿಕವಾಗಿ ಅನೇಕ ಒಳ್ಳೆ ಕಾರ್ಯ ಮಾಡುತ್ತಿರುವ ಹೆಗ್ಗಡೆ ಅವರ ಪರ ನಾವೆಲ್ಲರೂ ಒಂದಾಗಿ ನಿಲ್ಲಬೇಕು ಎಂದು ಕರೆ ನೀಡಿದರು. ಧರ್ಮಸ್ಥಳ ರಕ್ಷಣೆಗಾಗಿ ಆ.24 ರಂದು ಧರ್ಮಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಡಾ.ಹೆಗ್ಗಡೆ ಅವರಿಗೆ ಬೆಂಬಲ ವ್ಯಕ್ತಪಡಿಸಬೇಕು ಎಂದು ಹೇಳಿದರು.ಯುವಧುರೀಣ ಧೂಳಗೌಡ ಪಾಟೀಲ ಮಾತನಾಡಿ, ಯುಟ್ಯೂಬರ್ ಸಮೀರ, ತಿಮರೋಡಿ, ಮಟ್ಟೆನ್ನವರ, ಸಂತೋಷ ಶೆಟ್ಟಿ, ಜಯಂತ ಟಿ ಹಾಗೂ ಇವರ ಸಹಚರರು ಧರ್ಮಸ್ಥಳ ಮಂಜುನಾಥ ಸ್ವಾಮಿದೇವಸ್ಥಾನ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಗೆ ಕಳಂಕ ತರುವ, ಪಿತೂರಿ ನಡೆಸುತ್ತಿರುವವರ ವಿರುದ್ಧ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಧರ್ಮಾಧಿಕಾರಿ ಹೆಗ್ಗಡೆ ಅವರ ವಿರುದ್ಧ ಕೆಲವೊಂದು ವ್ಯಕ್ತಿಗಳು ಸಾರ್ವಜನಿಕವಾಗಿ ಅಸಹ್ಯ ಹುಟ್ಟಿಸುವ ರೀತಿಯಲ್ಲಿ ಮಾತನಾಡುತ್ತಾ, ಸಾಮಾಜಿಕ ಜಾಲತಾಣಗಳಲ್ಲಿ, ಸಮೂಹ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿ, ಬಿತ್ತರಿಸುತ್ತಿದ್ದಾರೆ. ಇದರಿಂದ ಶ್ರೀಕ್ಷೇತ್ರದ ಭಕ್ತರಿಗೆ ನೋವುಂಟಾಗಿದೆ ಎಂದು ಹೇಳಿದರು. ಎಸ್‌ಐಟಿಯವರು ಇಲ್ಲಿವರೆಗೆ ನಡೆದ ಶೋಧಕಾರ್ಯದ ಬಗ್ಗೆ ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಿ ಸತ್ಯಾಸತ್ಯತೆಯನ್ನು ಜನರ ಮುಂದಿಡೇಕು. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಮತ್ತು ಡಾ.ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿರುವವರನ್ನುತನಿಖೆ ಮಾಡಿ, ಇವರ ಷಡ್ಯಂತ್ರದ ಹಿಂದಿರುವ ಸತ್ಯಾಂಶಗಳನ್ನು ಬಯಲಿಗೆ ಎಳೆಯಬೇಕು. ಇನ್ನೆಂದು ತನಿಖಾ ತಂಡ ರಚಿಸಿ ಸೂಕ್ತ ತನಿಖೆ ಮಾಡಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನಂದಿಕುರಳಿ ವೀರಭದ್ರ ಸ್ವಾಮೀಜಿ, ಶಂಕರಾನಂದ ಸ್ವಾಮೀಜಿ, ಹಿರಿಯ ಮುಖಂಡರಾದ ಡಿ.ಸಿ.ಸದಲಗಿ, ಈರಗೌಡ ಪಾಟೀಲ, ಡಿ.ಎಸ್.ನಾಯಿಕ, ಪಾರೀಸ ಉಗಾರೆ, ಎಸ್.ಟಿ.ಮುನ್ನೊಳಿ, ಜಿನ್ನಪ್ಪ ಬಡೋರೆ, ಶೀತಲ ಬೇಡಕಿಹಾಳೆ, ಅಣ್ಣಾಸಾಹೇಬ ಖೆಮಲಾಪೂರೆ, ಅಪ್ಪಾಸಾಹೇಬ ಮೈಶಾಳೆ, ಸಂದೇಶ ಶೆಟ್ಟಿ, ಕುಂತಿನಾಥ ಮಗದುಮ್ಮ, ನಿಂಗಪ್ಪ ಪಕಾಂಡಿ, ವೆಂಕಟೇಶ ಬನವಣೆ, ಜಿನ್ನಪ್ಪ ಖೆಮಲಾಪೂರೆ, ಸನ್ಮತಿ ಶೆಟ್ಟಿ, ಸಿದ್ದಪ್ಪ ನಾಗನೂರ, ಗಿರೀಶ ಪಾಟೀಲ ಸೇರಿ ಧರ್ಮಸ್ಥಳ ಸಂಘದ ಸದಸ್ಯರು, ಜೈನ ಸಮಾಜದ ಮುಖಂಡರು ಮತ್ತು ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

PREV

Recommended Stories

ಹೆತ್ತವರ ಕನಸು ನನಸಾಗಿಸುವುದೇ ಮಕ್ಕಳ ಗುರಿಯಾಗಿರಲಿ: ಸಚಿವೆ ಹೆಬ್ಬಾಳ್ಕರ್
ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್