ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಬೆಳಗಾವಿಯ ಸುವರ್ಣ ಸೌಧದ ಎದುರು ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಪಂಚಮಸಾಲಿ ಸಮಾಜ ಹಾಗೂ ವೀರಶೈವ ಲಿಂಗಾಯಿತ ಒಳ ಪಂಗಡಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಬೆಳಗಾವಿಯ ಸುವರ್ಣ ಸೌಧದ ಎದುರು ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಪಂಚಮಸಾಲಿ ಸಮಾಜ ಹಾಗೂ ವೀರಶೈವ ಲಿಂಗಾಯಿತ ಒಳ ಪಂಗಡಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಹೋರಾಟ ಮಾಡುತ್ತಿರುವವರ ಮೇಲೆ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ಅಮಾನತ್ತುಗೊಳಿಸಬೇಕು ಎಂದು ಆಗ್ರಹಿಸಿದರು. ಪಂಚಮಸಾಲಿಗಳಿಗೆ ಮೀಸಲು ನಿರ್ಧಾರ ಆಗುವ ತನಕ ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಸರ್ಕಾರ ನಮ್ಮ ಚಳವಳಿಯನ್ನು ಹತ್ತಿಕ್ಕಲು ಅವಕಾಶ ಕೊಡುವುದಿಲ್ಲ. ಪ್ರತಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪೊಲೀಸರ ನಡೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುವುದೆಂದು ಸರ್ಕಾರಕ್ಕೆ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಎಸ್.ಟಿ.ನವೀನ್‍ಕುಮಾರ್, ಪಿ.ಎಂ.ಸಿದ್ದಪ್ಪ, ರುದ್ರೇಶ್ ಐಗಳ್, ಎಂ.ಶಶಿಧರ್‌ಬಾಬು, ಜಿ.ಸಿ.ತಿಪ್ಪಣ್ಣ, ಮಹಂತೇಶ್, ಎಸ್.ಪರಮೇಶ್, ಕಾರ್ತಿಕ್, ತಿಪ್ಪೇಸ್ವಾಮಿ, ಜಾಲಿಕಟ್ಟೆ ರುದ್ರಣ್ಣ, ಶಿವಾನಂದ್, ಪ್ರವೀಣ್, ನಿರ್ಮಲ ಬಸವರಾಜ್, ರೀನ ವೀರಭದ್ರಪ್ಪ, ಶಿವಪ್ರಕಾಶ್, ಮನು ತಮಟಕಲ್ಲು, ಶಿವರಾಜ್, ಉಮಾ ರಮೇಶ್, ಶೈಲಾ ಕಲ್ಲೇಶ್, ಶ್ರೀದೇವಿ ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.