ರಾಹುಲ್‌ ಸೆರೆಗೆ ಕಿಡಿ: ಜ್ಞಾನೇಶ್‌ ಬಂಧನಕ್ಕೆ ಕಾಂಗ್ರೆಸ್‌ ಆಗ್ರಹ

KannadaprabhaNewsNetwork |  
Published : Oct 09, 2026, 01:30 AM IST
ರಾಹುಲ್‌ ಗಾಂಧಿ ಬಂಧನ ಖಂಡಿಸಿ ಹಾಗೂ ಕೇಂದ್ರ ಮುಖ್ಯ ಚುನಾವಣಾಆಯುಕ್ತ ಜ್ಞಾನೇಶ್ ಕುಮಾ‌ರ್ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ರಾಹುಲ್‌ ಗಾಂಧಿ ಬಂಧನ ಖಂಡಿಸಿ ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ರಾಹುಲ್‌ ಗಾಂಧಿ ಬಂಧನ ಖಂಡಿಸಿ ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನ ಮುಂಭಾಗದಲ್ಲಿ ಸಮಾವೇಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಅಲ್ಲಿಂದ ‌ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆತಡೆ ನಡೆಸಿ, ಕೇಂದ್ರ ಸರ್ಕಾರ, ಬಿಜೆಪಿ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಿದರು.

ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು ಹಾಗೂ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಮರ್ಪಕ ಸಮಾಲೋಚನೆ ನಡೆಸಬೇಕು, ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ವಿಶೇಷ ಮುನ್ನೆಚ್ಚರಿಕೆ ವಹಿಸಬೇಕು, ಮತದಾರರ ಹೆಸರನ್ನು ಕೈಬಿಡುವ ಮೊದಲು ಸಂಬಂಧಪಟ್ಟ ಮತದಾರರಿಗೆ ಸೂಕ್ತ ನೋಟೀಸ್ ನೀಡಿ, ತಮ್ಮ ಹಕ್ಕನ್ನು ಸಮರ್ಥಿಸಿಕೊಳ್ಳಲು ಸಮರ್ಪಕ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಬಿಎಲ್‌ಒ, ಎಆರ್‌ಒ ಮಟ್ಟದಲ್ಲಿ ನಡೆಯುವ ಪರಿಶೀಲನಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಬೇಕು.ಎಸ್‌ಐಆರ್‌ನಲ್ಲಿ ಹೆಸರು ಕೈಬಿಡಲಾದ ಅಥವಾ ಸೇರ್ಪಡೆಗೊಳ್ಳದ ಮತದಾರರಿಗೆ ಆಕ್ಷೇಪಣೆ ಹಾಗೂ ಮೇಲ್ಮನವಿ ಸಲ್ಲಿಸಲು ಸುಲಭವಾದ ಅವಕಾಶ ಕಲ್ಪಿಸಬೇಕು. ಗ್ರಾಮೀಣ ಪ್ರದೇಶಗಳು, ಬಡವರು. ವಲಸೆ ಕಾರ್ಮಿಕರು, ವೃದ್ಧರು ಹಾಗೂ ದಾಖಲೆಗಳನ್ನು ಹೊಂದಿಸುವಲ್ಲಿ ತೊಂದರೆ ಎದುರಿಸಬಹುದಾದ ಅರ್ಹ ನಾಗರಿಕರಿಗೆ ಅಗತ್ಯ ಸಹಾಯ ಮತ್ತು ಸೂಕ್ತ ಕಾಲಾವಕಾಶ ನೀಡಬೇಕು ಎಂದರು.

ಚೂಡಾಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾ ಪ್ರಧಾನ ಕಾರ್ಯದಶಿಗಳಾದ ಆ‌ರ್.ಮಹದೇವು, ಚಿಕ್ಕಮಹದೇವು, ಜಿಲ್ಲಾ ವಕ್ತಾರ ನವೀನ್ ಕೆರೆಹಳ್ಳಿ, ರವಿಕುಮಾರ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ, ತೋಟೇಶ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸೋಮೇಶ್ವರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ನಾಗರತ್ನ ಕೆಂಗಾಕಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಯೋಗೇಂದ್ರ, ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ನಾಗೇಂದ್ರ, ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಕಾರ್ಯದರ್ಶಿ ರಾಜೇಶ್ ಗೌಡಹಳ್ಳಿ, ಎನ್‌ಎಸ್‌ಯು ಐ ಜಿಲ್ಲಾಧ್ಯಕ್ಷ ಮೋಹನ್ ನಗು, ಜಿ.ಪಂ.ಮಾಜಿ ಸದಸ್ಯರಾದ ಎಸ್.ಸೋಮನಾಯಕ, ಎ.ಆರ್.ಬಾಲರಾಜು, ಕಾವೇರಿಶಿವಕುಮಾರ್, ರಮೇಶ್, ಸೇವಾದಳ ಜಿಲ್ಲಾಧ್ಯಕ್ಷ ಜಯರಾಜು, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಧುಸೂದರ್, ಮುಖಂಡರಾದ ನಾಗಯ್ಯ, ಭೋಗಾಪುರ ನಾಗೇಂದ್ರ, ಕುಮಾರ್‌ನಾಯಕ್, ಪ್ರಸನ್ನ, ಶಕುಂತಲಾ, ಕಂದಹಳ್ಳಿ ನಂಜುಂಡಸ್ವಾಮಿ, ಬಸವರಾಜು, ಪ್ರಭುಪ್ರಸಾದ್, ನಲ್ಲೂರು ಮಹದೇವಸ್ವಾಮಿ, ಪ್ರಸನ್ನ, ಸಿದ್ದರಾಜು ಇತರರು ಭಾಗವಹಿಸಿದ್ದರು. ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ
ಚನ್ನಗಿರಿಯಲ್ಲಿ ಫ್ರೀ ಫೈರ್‌ ಗೇಮ್‌ಗೆ ಅಪ್ರಾಪ್ತ ಬಲಿ!