ಕನ್ನಡಪ್ರಭ ವಾರ್ತೆ ಹಲಗೂರು
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ ಬಂಧನವನ್ನು ವಿರೋಧಿಸಿ ಗುರುವಾರ ಸಂಜೆ ಕರವೇ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.ಇಲ್ಲಿನ ಮುತ್ತತ್ತಿ ವೃತದಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆ ಗಳನ್ನು ಕೂಗಿದರು.
ಹಲಗೂರು ವೃತ್ತದಲ್ಲಿ ಕರವೇ ಹೋಬಳಿ ಅಧ್ಯಕ್ಷ ಗಂಗರಾಜ್ ಮಾತನಾಡಿ, ಬೆಂಗಳೂರಿನಲ್ಲಿ ಆಂಗ್ಲ ನಾಮಫಲಕಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನಾರಾಯಣಗೌಡರನ್ನು ಬಂಧಿಸಿ ರುವ ರಾಜ್ಯ ಸರ್ಕಾರದ ಕ್ರಮ ಕನ್ನಡ ವಿರೋಧಿ ನೀತಿಗೆ ಸಾಕ್ಷಿಯಾಗಿದೆ ಎಂದು ಕಿಡಿ ಕಾರಿದರು.ಅವರ ಬಂಧನ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದರೂ ಬಿಡುಗಡೆ ಗೊಳಿಸದಿರುವ ಸರ್ಕಾರದ ಧೋರಣೆ ಖಂಡನೀಯವಾಗಿದ್ದು ಕೂಡಲೇ ನಾರಾಯಣ ಗೌಡರನ್ನು ಬಿಡುಗಡೆ ಗೊಳಿಸದಿದ್ದರೆ ರಾಜ್ಯದಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.
ತಾಲೂಕು ಗೌರವಾಧ್ಯಕ್ಷ ಕುಮಾರ್ ಮಾತನಾಡಿ ನಮ್ಮ ನಾಡು ನುಡಿ ಜಲಕ್ಕಾಗಿ ಹೋರಾಟ ಮಾಡಿದ ನಾರಾಯಣಗೌಡರನ್ನು ಬಂಧಿಸಿರುವುದು ಖಂಡನೀಯವಾಗಿದೆ ನಾವು ಯಾವುದೇ ಸ್ವರ್ಧಕಾಗಿ ಮಾಡುತ್ತಿಲ್ಲ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ, ಅವರನ್ನು ತಕ್ಷಣವೇ ಬಿಡಬೇಕು ಎಂದು ಆಗ್ರಹಪಡಿಸಿದರುಪ್ರತಿಭಟನೆಯಲ್ಲಿ ಘಟಕದ ತಾಲೂಕು ಅಧ್ಯಕ್ಷ ಅಪೇಗೌಡ, ತಾಲೂಕುಮಹಿಳಾ ಘಟಕದ ಅಧ್ಯಕ್ಷೆ ವಿಜಯ, ಹಲಗೂರು ಹೋಬಳಿ ಅಧ್ಯಕ್ಷ ಗಂಗಾಧರ್, ತಾಲೂಕು ಸಂಘಟನಾ ಕಾರ್ಯದರ್ಶಿ ಮಲ್ಲಿಕಾ, ತಾಲೂಕು ಗೋರವಾಧ್ಯಕ್ಷ ಕುಮಾರ್ ಜಗಣ್ಣ , ಮತ್ತಿತರರು ಪಾಲ್ಗೊಂಡಿದ್ದರು.
ಕನ್ನಡಪರ ಹೋರಾಟಗಾರರ ಬಂಧನ ಖಂಡಿಸಿ ಪಂಜಿನ ಮೆರವಣಿಗೆಮಳವಳ್ಳಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದಿಂದ ತಾಲೂಕು ಘಟಕದ ಅಪ್ಪೇಗೌಡ ನೇತೃತ್ವದಲ್ಲಿ ಹತ್ತಾರು ಮಂದಿ ಪಂಜಿನನೊಂದಿಗೆ ಮೆರವಣಿಗೆಯಲ್ಲಿ ಸಾಗಿಸಿ ಪಟ್ಣಣದ ಅನಂತ್ ರಾಂ ವೃತ್ತದ ಬಳಿ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಕೆಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.ಅಪ್ಪೇಗೌಡ ಮಾತನಾಡಿ, ವಾರದ ಹಿಂದೆ ವಾಣಿಜ್ಯ ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಿರುವ ಕುರಿತು ಜಾಗೃತಿ ಅಭಿಯಾನಯೊಂದಿಗೆ ಕರವೇ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇಂಥ ಸಂದರ್ಭದಲ್ಲಿ ಕನ್ನಡ ಪರ ಹೋರಾಟ ನಡೆಸುತ್ತಿದ್ದ ಟಿ.ಎ.ನಾರಾಯಣಗೌಡ ಅವರನ್ನು ಪೊಲೀಸರು ಬಂಧಿಸಿರುವುದು ಕನ್ನಡ ಮಾಡಿದ ಅಪಮಾನವಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಮಹಿಳಾ ಘಟಕದ ಅಧ್ಯಕ್ಷೆ ಎಚ್.ಈ.ವಿಜಯಾ, ಹಲಗೂರು ಹೋಬಳಿ ಘಟಕದ ಅಧ್ಯಕ್ಷ ಗಂಗರಾಜು, ಮಲ್ಲಿಕ್, ನಾಗರಾಜು, ಇದ್ದರು.