ಕನ್ನಡಪ್ರಭವಾರ್ತೆ ಚಿತ್ರದುರ್ಗಮಂಡ್ಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ ಖಂಡಿಸಿ ಚಿತ್ರದುರ್ಗ ನಾಗರಿಕರ ಸಮಿತಿ ಮತ್ತು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಒಕ್ಕೂಟದ ವತಿಯಿಂದ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಹಿಂದೂ ಯುವಕರ ಮೇಲೆ ದಾಳಿ ನಡೆಸಿ ಭಯದ ವಾತಾವರಣ ನಿರ್ಮಿಸಿದ್ದಾರೆ. ತಕ್ಷಣ ಜಿಹಾದಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಈ ಕೃತ್ಯ ಉದ್ದೇಶಪೂರ್ವಕವಾಗಿದ್ದು ಪೂರ್ವಯೋಜಿತ. ಈ ಜಿಹಾದಿ ಯುವಕರ ಹಿಂದೆ ನಿಷೇಧಿತ ಇಸ್ಲಾಮಿಕ್ ಮೂಲಭೂತ ಸಂಘಟನೆಗಳ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದೆ. ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸುವಂತೆ ಜಿಲ್ಲಾಧಿಕಾರಿಗೆ ಸಲ್ಲಿಸಲಾದ ಮನವಿಯಲ್ಲಿ ಆಗ್ರಹಿಸಲಾಗಿದೆ.---------------ಮಂಡ್ಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ ಖಂಡಿಸಿ ಚಿತ್ರದುರ್ಗ ನಾಗರಿಕರ ಸಮಿತಿ ಮತ್ತು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಒಕ್ಕೂಟದ ವತಿಯಿಂದ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
12 ಸಿಟಿಡಿ7