ಕನ್ನಡಪ್ರಭವಾರ್ತೆ ಚಿತ್ರದುರ್ಗ
ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ನಾಯಕ ಸಮಾಜದ ಮುಖಂಡ ಬಿ. ಕಾಂತರಾಜ್ , ಚಿತ್ರದುರ್ಗ ನಗರದ ಮದಕರಿ ವೃತ್ತದಲ್ಲಿ ನಿರ್ಮಿಸಲಾಗಿರುವ ವಾಲ್ಮೀಕಿ ಭವನ ಅವೈಜ್ಞಾನಿಕವಾಗಿ ನಿರ್ಮಾಣವಾಗಿದೆ. ಕೋಟಿಗಟ್ಟಲೆ ಸರ್ಕಾರಿ ಅನುದಾನ ಸುರಿದರೂ ಭವನ ಬಳಕೆಗೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲವೆಂದು ದೂರಿದರು.
ವಾಲ್ಮೀಕಿ ಭವನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹಸ್ತಾಂತರವಾಗಿಲ್ಲ. ಕಾಮಗಾರಿ ನಿರ್ವಹಣೆ ಮಾಡಿದ ಗುತ್ತಿಗೆದಾರ ಹಣ ಪಡೆದು ತನ್ನ ಪಾಡಿಗೆ ತಾನಿದ್ದಾನೆ. ಇಡೀ ಆಸನ ವ್ಯವಸ್ಥೆ ಅವೈಜ್ಞಾನಿಕವಾಗಿದೆ. ಪರಿಶಿಷ್ಟರ ಅನುದಾನ ಬಳಕೆ ಮಾಡಿ ಕಟ್ಟಿದ ಭವನ ಇಷ್ಟೊಂದು ಕೆಟ್ಟದಾಗಿರಬೇಕೇ? ಕೆಲವು ತಾಂತ್ರಿಕ ಸಮಸ್ಯೆಗಳು ಇದ್ದು, ಈ ಕುರಿತು ಸಂಬಂಧಪಟ್ಟವರು ಅಗತ್ಯ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.ಇದಕ್ಕೆ ದನಿಗೂಡಿಸಿದ ನಗರಸಭೆ ಸದಸ್ಯ ವೆಂಕಟೇಶ್, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಎಚ್.ಜೆ. ಕೃಷ್ಣಮೂರ್ತಿ, ವಾಲ್ಮೀಕಿ ಭವನ ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿದೆ. ಅಂದಿನ ಸಚಿವ ನಾಗೇಂದ್ರ ಸ್ವತಃ ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದರು. ಭವನದ ಕಾಮಗಾರಿ ಮುಗಿದು ವರ್ಷಗಳೇ ಉರುಳಿದರೂ ಹಸ್ತಾಂತರವಾಗಿಲ್ಲ ಎಂದರು.
ಜಿಲ್ಲಾ ಮಟ್ಟದಲ್ಲಿ ಶ್ರೀ ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಹಾಗೂ ಜಯಂತಿ ಯಶಸ್ವಿಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ವಸತಿ ನಿಲಯ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ, ಉಪನ್ಯಾಸ ಮಾಲಿಕೆ ಕಾರ್ಯಕ್ರಮ ಏರ್ಪಡಿಸಬೇಕು. ಭಾಷಣ, ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ಹಮ್ಮಿಕೊಂಡು ವಾಲ್ಮೀಕಿ ಕುರಿತು ಅರಿವು ಮೂಡಿಸಬೇಕು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಗೆ ಕ್ರಮ ವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳೆಸಿಂಗೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್. ದಿವಾಕರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ನಗರಸಭೆ ಸದಸ್ಯರಾದ ದೀಪು, ವೆಂಕಟೇಶ್, ಸಮಾಜದ ಮುಖಂಡರಾದ ಡಿ. ಗೋಪಾಲಸ್ವಾಮಿ ನಾಯಕ, ರತ್ನಮ್ಮ, ಪ್ರಶಾಂತ ನಾಯಕ, ರಾಜ ಮದಕರಿ ನಾಯಕ, ಗೋಪಿ, ಕಾಟಿಹಳ್ಳಿ ಕರಿಯಣ್ಣ, ಇಂಗಳದಾಳ್ ದರ್ಶನ್ ಸೇರಿದಂತೆ ಮತ್ತಿತರರು ಇದ್ದರು.17 ರಂದು ವಾಲ್ಮೀಕಿ ಜಯಂತಿ