ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸ್ವಪಕ್ಷದವರ ಆಕ್ರೋಶ

KannadaprabhaNewsNetwork |  
Published : Sep 30, 2026, 01:15 AM IST
ಸಿಕೆಬಿ-1 ಶಾಸಕ ಪ್ರದೀಪ್ ಈಶ್ವರ್               ಸಿಕೆಬಿ-2 ಮಾಜಿ ಸಚಿವ ಡಾ.ಎಂ.ಸಿ.ಸುಧಾಕರ್ | Kannada Prabha

ಸಾರಾಂಶ

ಶಾಸಕ ಪ್ರದೀಪ್ ಈಶ್ವರ್ ಅವರ ಕಾರ್ಯವೈಖರಿ, ಪಕ್ಷ ಸಂಘಟನೆ ಹಾಗೂ ಸ್ಥಳೀಯ ಚುನಾವಣೆಗಳ ಕುರಿತು ಹಲವು ಅಹವಾಲುಗಳನ್ನು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಮುಂದಿನ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್‌ಗೆ ಟಿಕೆಟ್ ನೀಡದಿರಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಗೆ ದೂರು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್‌ಗೆ ಟಿಕೆಟ್ ನೀಡಬಾರದು ಎಂದು ಕಾಂಗ್ರೆಸ್‌ನ ಕೆಲ ಮುಖಂಡರು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ದೂರು ನೀಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವ ಡಾ.ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಮಾಜಿ ಶಾಸಕರನ್ನೊಳಗೊಂಡ ನಿಯೋಗ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿದೆ. ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರ ಕಾರ್ಯವೈಖರಿ, ಪಕ್ಷ ಸಂಘಟನೆ ಹಾಗೂ ಸ್ಥಳೀಯ ಚುನಾವಣೆಗಳ ಕುರಿತು ಹಲವು ಅಹವಾಲುಗಳನ್ನು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಶಾಸಕ ಪ್ರದೀಪ್ ಈಶ್ವ‌ರ್ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿರುವ ಕಾಂಗ್ರೆಸ್ ಮುಖಂಡರು, ಶಾಸಕ ಪ್ರದೀಪ್‌ ಈಶ್ವರ್‌ ಕ್ಷೇತ್ರಕ್ಕೆ ಸರಿಯಾಗಿ ಬರುತ್ತಿಲ್ಲ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಕರೆಗಳಿಗೆ ಸ್ಪಂದಿಸುತ್ತಿಲ್ಲ ಎಂಬ ದೂರಿದ್ದಾರೆ. ನಿಷ್ಠಾವಂತ ಕಾರ್ಯಕರ್ತರಿಗೆ ನಾಮನಿರ್ದೆಶನ ಸ್ಥಾನಗಳನ್ನು ನೀಡುತ್ತಿಲ್ಲ. ಸ್ಥಳೀಯ ಚುನಾವಣೆಗಳಲ್ಲಿ ಶಾಸಕರು ಸಕ್ರಿಯವಾಗಿ ತೊಡಗಿಸಿ ಕೊಳ್ಳುತ್ತಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಸ್ಥಳೀಯ ಚುನಾವಣೆಗಳಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ವಿರೋಧ ವ್ಯಕ್ತಪಡಿಸಲಾಗಿದೆ. ಮೋದಿ ಟ್ಯಾಟೂ ಹಾಕಿಸಿಕೊಂಡಿದ್ದ ಯುವಕನಿಗೆ ನಗರಸಭೆ ನಾಮನಿರ್ದೆ ಶನ ಸ್ಥಾನ ನೀಡಲಾಗಿದೆ ಎಂಬ ಆರೋಪ ಮಾಡಿದ್ದಾರೆ. ಈ ಎಲ್ಲ ವಿಚಾರಗಳನ್ನು ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗಿದ್ದು, ಮುಂದಿನ ಚುನಾವಣೆ ಯಲ್ಲಿ ಪ್ರದೀಪ್ ಈಶ್ವರ್‌ಗೆ ಟಿಕೆಟ್ ನೀಡಬಾರದು ಎಂದು ಮುಖಂಡರು ಒತ್ತಾಯಿಸಿದ್ದಾರೆ.ಮುಖಂಡರ ಅಹವಾಲುಗಳನ್ನು ಆಲಿಸಿದ ಬಿ.ಕೆ. ಹರಿಪ್ರಸಾದ್, ಬಹುತೇಕ ಎಲ್ಲರಿಂದಲೂ ಒಂದೇ ರೀತಿಯ ದೂರುಗಳು ಬರುತ್ತಿವೆ ಎಂದು ಹೇಳಿ ದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶಾಸಕ ಪ್ರದೀಪ್ ಅವರನ್ನು ಕರೆಸಿ ಮಾತನಾಡುವುದಾಗಿ ತಿಳಿಸಿದ್ದಾರೆ.

ಎಐಸಿಸಿ ಯುವ ಕಾಂಗ್ರೇಸ್ ಅಧ್ಯಕ್ಷ ಎಂ.ಎಸ್. ರಕ್ಷರಾಮಯ್ಯ, ಮಾಜಿ ಶಾಸಕರಾದ ಎಸ್.ಎಂ. ಮುನಿಯಪ್ಪ, ಕೆ.ಪಿ.ಬಚ್ಚೇಗೌಡ, ಜಿ.ಪಂ. ಮಾಜಿ ಸದಸ್ಯ ಪ್ರಕಾಶ್, ಕೆಎಂಎಫ್ ನಿರ್ದೇಶಕ ಭರಣಿ ವೆಂಕಟೇಶ್, ನಗರಸಭೆ ಮಾಜಿ ಸದಸ್ಯ ಮಿಲ್ಟನ್ ವೆಂಕಟೇಶ್, ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ನಿಯೋಗದಲ್ಲಿ ಇದ್ದರು.ಪ್ರದೀಪ್ ಈಶ್ವರ್ ಅವರ ರಾಜಕೀಯ ಪಯಣದಲ್ಲಿ ಡಾ.ಎಂ.ಸಿ. ಸುಧಾಕರ್ ಅವರ ಪಾತ್ರದ ಬಗ್ಗೆ ಈ ಹಿಂದೆಯೂ ವರದಿ ಆಗಿತ್ತು. 2023ರ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್ ದೊರಕಿಸುವಲ್ಲಿ ಡಾ.ಎಂಸಿ .ಸುಧಾಕರ್ ಪ್ರಮುಖ ಪಾತ್ರ ವಹಿಸಿದ್ದರು . ಹೀಗಾಗಿ ಇದೀಗ ಇಬ್ಬರ ನಡುವಿನ ರಾಜಕೀಯ ಭಿನ್ನಾಭಿಪ್ರಾಯದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಆದರೆ, ಮುಂದಿನ ಚುನಾವಣೆಗೆ ಇನ್ನೂ ಸಮಯವಿಲ್ಲದ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಅಂತಿಮ ನಿರ್ಧಾರ ಏನೆಂಬುದು ಸ್ಪಷ್ಟವಾಗಿಲ್ಲ.

ಸಿಕೆಬಿ-1 ಶಾಸಕ ಪ್ರದೀಪ್ ಈಶ್ವರ್

ಸಿಕೆಬಿ-2 ಮಾಜಿ ಸಚಿವ ಡಾ.ಎಂ.ಸಿ.ಸುಧಾಕರ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಕುಶಲ ಕಲೆಗಳಿವೆ ತನ್ನದೇ ವೈಶಿಷ್ಟ್ಯತೆ: ಕಿರಣ
ಹೃದಯದ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿ