ಬಿಟಿಡಿಎ ಕಚೇರಿ ಎದುರು ಹೊರಗುತ್ತಿಗೆ ನೌಕರರ ಪ್ರತಿಭಟನೆ

KannadaprabhaNewsNetwork |  
Published : Oct 07, 2026, 04:15 AM IST
ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ | Kannada Prabha

ಸಾರಾಂಶ

ಹೊರಗುತ್ತಿಗೆ ನೌಕರರಿಗೆ ಸರಿಯಾದ ವೇತನ, ಸೂಕ್ತ ಸೌಲಭ್ಯಗಳು ಹಾಗೂ ಭದ್ರತೆ ಒದಗಿಸಬೇಕು ಸೇರಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೊರಗುತ್ತಿಗೆ ನೌಕರರು ಮಂಗಳವಾರ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಹೊರಗುತ್ತಿಗೆ ನೌಕರರಿಗೆ ಸರಿಯಾದ ವೇತನ, ಸೂಕ್ತ ಸೌಲಭ್ಯಗಳು ಹಾಗೂ ಭದ್ರತೆ ಒದಗಿಸಬೇಕು ಸೇರಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೊರಗುತ್ತಿಗೆ ನೌಕರರು ಮಂಗಳವಾರ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಿಟಿಡಿಎ ಕಚೇರಿಯ ಮುಖ್ಯದ್ವಾರದಲ್ಲಿ ಗೇಟ್ ಬಂದ್ ಮಾಡಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ನೌಕರರು, ಬಾಕಿ ವೇತನ ನೀಡುವುದರ ಜತೆಗೆ, ಪ್ರತಿ ತಿಂಗಳು ಕಡ್ಡಾಯವಾಗಿ ನೌಕರರ ಖಾತೆಗೆ ವೇತನ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.

ಕೆಲಸಕ್ಕೆ ಭರ್ತಿ ಮಾಡಿಕೊಂಡಿರುವ ಅಧಿಕೃತ ಆದೇಶ ಪತ್ರ, ಪ್ರತಿ ತಿಂಗಳ ವೇತನ ಪತ್ರ (ಪೇ ಸ್ಲಿಪ್) ಮತ್ತು ಅವರ ಹುದ್ದೆಗೆ ಸಂಬಂಧಿಸಿದ ಗುರುತಿನ ಚೀಟಿ (ಐಡಿ ಕಾರ್ಡ್‌) ನೀಡಬೇಕು. ಮೇ 2025 ರಿಂದ ಏಪ್ರಿಲ್ 2026ರವರೆಗೆ ಬಿಟಿಡಿಎ ಪ್ರಾಧಿಕಾರದಿಂದ ಲೇಬರ್ ಟೆಂಡರ್ ಪಡೆದುಕೊಂಡ ತ್ರೀ ಸ್ಟಾರ್ ಏಜೆನ್ಸಿ ಸರಿಯಾದ ವೇತನ ಮತ್ತು ಇತರ ಸೌಲಭ್ಯಗಳನ್ನು ನೀಡದೆ ಅನ್ಯಾಯ ಎಸಗಿದ್ದು, ಈ ಅನ್ಯಾಯವನ್ನು ಭರಿಸಿಕೊಡಬೇಕು ಎಂದು ಆಗ್ರಹಿಸಿದರು.

2023 ರಲ್ಲಿ ನಿಗದಿಯಾದ ಕನಿಷ್ಠ ವೇತನದಲ್ಲಿ ಅರ್ಧ ವೇತನ ನೀಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. 2023ರಿಂದ ಬರಬೇಕಾದ ಬಾಕಿ ವೇತನ ನೀಡಬೇಕು. ಪ್ರತಿ ತಿಂಗಳು ಕಡ್ಡಾಯವಾಗಿ ಪಿಎಫ್ ಹಾಗೂ ಇಎಸ್ಐ ಹಣವನ್ನು ನೌಕರರ ಖಾತೆಗೆ ಜಮಾ ಮಾಡಬೇಕು ಎಂದರು.

ಸರ್ಕಾರ ಆದೇಶಿಸಿರುವಂತೆ ಕನಿಷ್ಠ ವೇತನ ಜಾರಿಗೊಳಿಸಬೇಕು. ಹೊರಗುತ್ತಿಗೆ ನೌಕರರ ಮೇಲಾಗುತ್ತಿರುವ ದೌರ್ಜನ್ಯವನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ನೌಕರರ ಕುಟುಂಬದ ಹಿತದೃಷ್ಟಿಯಿಂದ ಕಾಳಜಿ ವಹಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಳು ಬಿದ್ದ ಸರ್ಕಾರಿ ವಸತಿ ಗೃಹದಲ್ಲಿ ವ್ಯಕ್ತಿ ಆತ್ಮಹತ್ಯೆ
ಕಡಪಟ್ಟಿ ಪಿಡಿಒ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ