ಇಂದಿನಿಂದ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್‌ ಪಂದ್ಯಾಕೂಟ

KannadaprabhaNewsNetwork |  
Published : Nov 14, 2025, 03:45 AM IST
ಮೂಲ್ಕಿಯಲ್ಲಿ ನವಂಬರ್‌ 14 ರಿಂದ 16 ರ ವರೆಗೆ  ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ | Kannada Prabha

ಸಾರಾಂಶ

ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್‌ ಪಂದ್ಯಾಕೂಟ ಎಂ ಮಿಥುನ್ ರೈ ಟ್ರೋಫಿ- 2025 ಪಂದ್ಯಾಟವು ನ. 14ರಿಂದ 16 ರವರೆಗೆ ಮೂಲ್ಕಿಯ ವಿಜಯ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೂಲ್ಕಿ: ಈಗಲ್ ಮರೈನ್ ವತಿಯಿಂದ ಪ್ರಪ್ರಥಮ ಬಾರಿಗೆ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್‌ ಪಂದ್ಯಾಕೂಟ ಎಂ ಮಿಥುನ್ ರೈ ಟ್ರೋಫಿ- 2025 ಪಂದ್ಯಾಟವು ನ. 14ರಿಂದ 16 ರವರೆಗೆ ಮೂಲ್ಕಿಯ ವಿಜಯ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಹೇಳಿದರು.

ಮೂಲ್ಕಿಯ ಆದಿಧನ್ ಹೋಟೆಲ್ ಸಭಾಂಗಣದಲ್ಲಿ ರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಂದ್ಯಾ ಕೂಟವನ್ನು ನ. 14ರಂದು ಬೆಳಗ್ಗೆ 11 ಗಂಟೆಗೆ ಮೂಲ್ಕಿ ವಿಜಯ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಭಟ್ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ನ. 15 ರ ಶನಿವಾರ ಸಂಜೆ 6 ಗಂಟೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಮಿಥುನ್.ಎಂ.ರೈ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಅಭಯ ಚಂದ್ರ ಜೈನ್, ಬಿ. ರಮಾನಾಥ್ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿ. ಸೋಜಾ, ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆ‌ರ್.ಪೂಜಾರಿ, ಇನಾಯತ್ ಅಲಿ, ರಕ್ಷಿತ್ ಶಿವರಾಮ್ ಮತ್ತಿತರರು ಉಪಸ್ಥಿತರಿರುವರು. ನ. 16 ಭಾನುವಾರ ರಾತ್ರಿ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಉಪಸ್ಥಿತಿಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮುನಿಯಾಲ್ ಉದಯಕುಮಾರ್ ಶೆಟ್ಟಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿರುವರು.ಮೂಲ್ಕಿಯಲ್ಲಿ ಪ್ರಥಮ ಬಾರಿಯಾಗಿ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದು ಸುಮಾರು 17 ತಂಡಗಳು ಭಾಗವಹಿಸಲಿವೆ. ಮಧ್ಯಪ್ರದೇಶ ಗುಜರಾತ್ ಬೆಂಗಳೂರು ತಂಡದ ಖ್ಯಾತ ಆಟಗಾರರು ವಿವಿಧ ತಂಡಗಳಲ್ಲಿದ್ದು ರೋಮಾಂಚನಕಾರಿ ಪ್ರದರ್ಶನ ನೀಡಲಿದ್ದಾರೆಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ಮಂಜುನಾಥ ಕಂಬಾರ, ರಕ್ಷಿತ್ ಕೊಳಚಿ ಕಂಬಳ, ಅಶೋಕ್ ಪೂಜಾರ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ಸುಪ್ರೀಂನಲ್ಲಿ ರಾಜ್ಯಕ್ಕೆ ಮೇಕೆದಾಟು ವಿಜಯ - ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ
ಹಾರನ್‌ ಮಾಡಿದ್ದಕ್ಕೆ ಸಿಟ್ಟಿಗೆದ್ದು ಬೈಕ್‌ಗೆ ಕಾರು ಗುದ್ದಿಸಿದವ ಸೆರೆ