ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಯಲ್ಲಿ ಡಬಲ್ ಡಿಜಿಟ್ ತಲುಪದೇ ಇರುವುದಕ್ಕೆ ನಮ್ಮ ನಾಯಕರ ಓವರ್ ಕಾನ್ಫಿಡೆನ್ಸೇ ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಯಲ್ಲಿ ಡಬಲ್ ಡಿಜಿಟ್ ತಲುಪದೇ ಇರುವುದಕ್ಕೆ ನಮ್ಮ ನಾಯಕರ ಓವರ್ ಕಾನ್ಫಿಡೆನ್ಸೇ ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೈರೆಕ್ಟರ್, ಪ್ರ್ಯೂಡ್ಯೂಸರ್ ಫೇಲ್. ಆದರೆ, ಈ ರೀತಿಯ ಫಲಿತಾಂಶ ನಿರೀಕ್ಷಿತವಾಗಿದೆ. ಚುನಾವಣೆಗೆ ಸಮಯ ಕಡಿಮೆ ಇರುತ್ತದೆ. ಆ ಸಮಯದಲ್ಲಿ ಅಲರ್ಟ ಆಗಿ ಇರಬೇಕು. ಇಲ್ಲವಾದರೆ ಚುನಾವಣೆ ಬಂದು ಹೋಗುತ್ತದೆ. ಆಗಲೇ ನಾವು ಕೆಲಸ ಮಾಡಬೇಕು. ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನೆಡೆಗೆ ಕಾರಣವಾಗಿದೆ ಎಂದರು.
ಗೆಲ್ಲುವ ಅತಿಯಾದ ವಿಶ್ವಾಸದ ಕಾರಣಕ್ಕೆ ಇನ್ನೂ ಹಲವು ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಚಾರ ಆಗಲಿಲ್ಲ. ಕೆಲವಡೆ ಕಡಿಮೆ ಮತಗಳ ಅಂತರದಿಂದ ಸೋಲಲು ನಮ್ಮ ನಿರ್ಲಕ್ಷ್ಯವೇ ಕಾರಣ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.