ರಾಮನಗರ: ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪಿ.ಅಶ್ವತ್ಥ್ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷ ತೊರೆದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ರಾಜು ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಈ ವೇಳೆ ಮಾತನಾಡಿದ ಪಿ.ಅಶ್ವತ್ಥ್, ಜಿಲ್ಲೆಯ ಸಮಸ್ತ ಅಭಿವೃದ್ಧಿಯ ಹರಿಕಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುತ್ತಿರುವುದಾಗಿ ಹೇಳಿದರು.
ಡಿಕೆ ಸಹೋದರರು ಕೇವಲ ನಾಯಕರಲ್ಲ. ಅವರು ನಮ್ಮ ಜಿಲ್ಲೆಯ ಮಣ್ಣಿನ ಮಕ್ಕಳು. ಪಕ್ಷಕ್ಕಾಗಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ದುಡಿಯುವ ಸಾಮಾನ್ಯ ಕಾರ್ಯಕರ್ತರು ಮತ್ತು ಮುಖಂಡರನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ಹಾಗೂ ಗೌರವ ನೀಡುವ ಅಪರೂಪದ ಗುಣ ಹೊಂದಿರುವ ನಾಯಕರು ಎಂದು ಬಣ್ಣಿಸಿದರು.ಕಾರ್ಯಕರ್ತರ ಕಷ್ಟಕ್ಕೆ ಧಾವಿಸುವ ಇಂತಹ ವಿಶಾಲ ಮನಸ್ಥಿತಿಯ ನಾಯಕರ ಅವಶ್ಯಕತೆ ನಮ್ಮ ಜಿಲ್ಲೆಗೆ ಅಗತ್ಯವಿದೆ. ಮುಂಬರುವ ದಿನಗಳಲ್ಲಿ ನಮ್ಮ ಜಿಲ್ಲೆಯ ಜನತೆ ಡಿ.ಕೆ.ಸಹೋದರರಿಗೆ ಮತ್ತಷ್ಟು ಶಕ್ತಿ ತುಂಬಿಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ತರುವುದೇ ನಮ್ಮೆಲ್ಲರ ಏಕೈಕ ಉದ್ದೇಶ ಎಂದು ತಿಳಿಸಿದರು.
13ಕೆಆರ್ ಎಂಎನ್ 2.ಜೆಪಿಜಿ