ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಶ್ಯಾದನಹಳ್ಳಿ ಪಿ.ಚಲುವರಾಜು ಆಯ್ಕೆ

KannadaprabhaNewsNetwork |  
Published : Mar 22, 2025, 02:08 AM IST
21ಕೆಎಂಎನ್ ಡಿ17 | Kannada Prabha

ಸಾರಾಂಶ

ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಶ್ಯಾದನಹಳ್ಳಿ ಪಿ.ಚಲುವರಾಜು, ಸುಪ್ರೀತ್‌ಗೌಡ ಇಬ್ಬರನ್ನು ಹೊರತುಪಡಿಸಿ ಉಳಿದ ಯಾವ ನಿರ್ದೇಶಕರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಕೆ.ಬೆಟ್ಟಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಶ್ಯಾದನಹಳ್ಳಿ ಪಿ.ಚಲುವರಾಜು, ಉಪಾಧ್ಯಕ್ಷರಾದ ಸುಪ್ರೀತ್‌ಗೌಡ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.

ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಶ್ಯಾದನಹಳ್ಳಿ ಪಿ.ಚಲುವರಾಜು, ಸುಪ್ರೀತ್‌ಗೌಡ ಇಬ್ಬರನ್ನು ಹೊರತುಪಡಿಸಿ ಉಳಿದ ಯಾವ ನಿರ್ದೇಶಕರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ನಿರ್ಮಾಲಾ ಘೋಷಿಸಿದರು.

ಪಿ.ಚಲುವರಾಜು, ಸುಪ್ರೀತ್ ಗೌಡ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆಯೇ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು. ನಂತರ ನಿರ್ದೇಶಕರು, ಮುಖಂಡರು ಅಭಿನಂದಿಸಿದರು.

ಅಧ್ಯಕ್ಷ ಪಿ.ಚಲುವರಾಜು ಮಾತನಾಡಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಆಶೀರ್ವಾದ ಹಾಗೂ ಎಲ್ಲಾ ನಿರ್ದೇಶಕರ ಸಹಕಾರದಿಂದ ಕೆ.ಬೆಟ್ಟಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಸಂಘದ ಎಲ್ಲಾ ನಿರ್ದೇಶಕರನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡುವುದಾಗಿ ತಿಳಿಸಿದರು.

ಅಧ್ಯಕ್ಷನಾಗಿ ಸರ್ಕಾರಗಳು ಸಂಘದ ಮೂಲಕ ರೈತರಿಗೆ ನೀಡುವ ಎಲ್ಲಾ ಸವಲತ್ತುಗಳನ್ನು ಪ್ರಾಮಾಣಿಕವಾಗಿ ಒದಗಿಸಿಕೊಡುವ ಮೂಲಕ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಈ ವೇಳೆ ಗುರುಸ್ವಾಮಿ, ಮಧುಸೂದನ್, ವಿ.ಎಸ್.ನಿಂಗೇಗೌಡ, ಕೆ.ಎಸ್.ಮನೋಹರ್, ಮಹೇಶ್, ನಂಜಮಣಿ, ಸಾವಿತ್ರಮ್ಮ, ವಿಜೇಂದ್ರಕುಮಾರ್, ನರಸಿಂಹನಾಯ್ಕೆ, ಅಂಕಯ್ಯ, ಕಾರ್‍ಯದರ್ಶಿ ಅಯ್ಯಣ್ಣ, ಮುಖಂಡರಾದ ಕೆ.ಎಸ್.ಮಹದೇವು, ಸಿ.ಎಂ.ದ್ಯಾವಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ದಿವಾಕರ್, ಶ್ಯಾದನಹಳ್ಳಿ ಅಕ್ಷಯ್, ಹರೀಶ್, ಪಾಪೇಗೌಡ, ಕರಿಯಪ್ಪ, ಶ್ರೀನಿವಾಸ್, ದಿಲೀಪ್, ರವಿ, ವಡ್ಡರಹಳ್ಳಿ ಗೋವಿಂದರಾಜು, ತಿಮ್ಮೇಗೌಡ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

ನಾಳೆ ಕಾರ್ಮಿಕ ಭವನ ಉದ್ಘಾಟನೆ

ಮಂಡ್ಯ: ವಿವೇಕಾನಂದ ನಗರದ ಚಿಕ್ಕಮಂಡ್ಯ ಕೆರೆ ಅಂಗಳದಲ್ಲಿ ಮಾ.23ರಂದು ಜಿಲ್ಲೆಯ ನೂತನ ಕಾರ್ಮಿಕ ಭವನ ಉದ್ಘಾಟನೆ ಉದ್ಘಾಟನೆಯಾಗಲಿದೆ.

ಕಾರ್ಮಿಕ ಇಲಾಖೆ, ಕರ್ನಾಟ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ.

ಕಾರ್ಮಿಕ ಸಚಿವ ಸಂತೋಷ್ ಎನ್.ಲಾಡ್ ಕಾರ್ಮಿಕ ಇಲಾಖೆಯ ವಿವಿಧ ಸೌಲಭ್ಯ ವಿತರಣೆ ಮಾಡಲಿದ್ದಾರೆ. ಶಾಸಕರಾದ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಪಿ.ಎಂ. ನರೇಂದ್ರಸ್ವಾಮಿ ಗೌರವ ಉಪಸ್ಥಿತರಿರುವರು. ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯರಾದ ಮಧು ಜಿ. ಮಾದೇಗೌಡ, ದಿನೇಶ್ ಗೂಳಿಗೌಡ, ಕೆ.ವಿವೇಕಾನಂದ, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿ ಮಂಜು, ಕೆ.ಎಂ ಉದಯ, ನಗರಸಭೆ ಅಧ್ಯಕ್ಷ ಎಂ.ವಿ ಪ್ರಕಾಶ್ (ನಾಗೇಶ್), ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನಯೀಮ್ ಆಗಮಿಸಲಿದ್ದಾರೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ