ಕನ್ನಡ ಪ್ರಭ ವಾರ್ತೆ ಮದ್ದೂರು
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬರಪೀಡಿತ ಪ್ರದೇಶಗಳ ಪರಿಶೀಲನೆ ಮಾಡಲು ತೆರಳುತ್ತಿದ್ದ ವೇಳೆ ಮಂಡ್ಯ ಜಿಲ್ಲೆಯ ಗಡಿ ಭಾಗ ನಿಡಘಟ್ಟ ಗ್ರಾಮದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ ಮೇಲೆ ಮತ್ತೇಕೆ ಬಿಜೆಪಿ ನಾಯಕರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಇದು ರಾಜಕೀಯ ಲಾಭಕ್ಕಾಗಿಯೇ ಹೊರತು ಯಾವುದೇ ವಿಷಯವಿಲ್ಲ. ಸಮಯ ಬಂದಾಗ ಇದಕ್ಕೆ ನಾವು ಏನು ಪ್ರತ್ಯುತ್ತರ ಕೊಡಬೇಕು ಎನ್ನುವುದನ್ನು ನಿರ್ಧರಿಸುತ್ತೇವೆ ಎಂದರು.ಕೆಪಿಎಸ್ಸಿ ನೇಮಕಾತಿ ಹಗರಣದ ಬಗ್ಗೆ ಸಿಓಡಿ ತನಿಖೆ ನಡೆಯುತ್ತಿದೆ. ಇದರ ವರದಿ ಬಂದ ಮೇಲೆ ಸತ್ಯಾಸತ್ಯತೆ ಹೊರಬೀಳಲಿದೆ. ಆನಂತರ ತಪ್ಪಿತಸ್ಥರ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆನ್ನುವುದನ್ನು ಯೋಚನೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಕನ್ನಡಪ್ರಭ ವಾರ್ತೆ ಮದ್ದೂರು
ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ರಾಜ್ಯಾಧ್ಯಕ್ಷ ಪ್ರತಾಪ್ ಮದಕರಿ ನೇತೃತ್ವದಲ್ಲಿ ಸಂಘದ ನೌಕರರಿಂದ ಮನವಿ ಸ್ವೀಕರಿಸಿ ಮಾತನಾಡಿ, ಬೆಂಗಳೂರಿನಲ್ಲಿ ಕಳೆದ ಆಗಸ್ಟ್ 24 ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆಯೇ ಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಈಗಾಗಲೇ ಚರ್ಚೆ ಮಾಡಿದ್ದೇನೆ. ಮುಂದಿನ ಸೆ.4 ಅಥವಾ 5 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಿಎಂರೊಂದಿಗೆ ಮಾತನಾಡುವುದಾಗಿ ಹೇಳಿದರು.
ಈ ವೇಳೆ ನೌಕರರ ಸಂಘದ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಲಿಂಗಯ್ಯ, ಮೈಸೂರು ವಿಭಾಗದ ಪ್ರಧಾನ ಕಾರ್ಯದರ್ಶಿ ಮತ್ತು ತಾಲೂಕು ಅಧ್ಯಕ್ಷ ಕೆ.ಆರ್.ಗೋವಿಂದರಾಜು, ಗೌರವಾಧ್ಯಕ್ಷ ಮಹಾಲಿಂಗಯ್ಯ, ಪದಾಧಿಕಾರಿಗಳಾದ ಶಿವಕುಮಾರ್ ಸಂಪತ್, ಆಕಾಶ್ ಮತ್ತಿತರರು ಇದ್ದರು.