ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಬಳಿಕ ಮಾತನಾಡಿದ ಶಾಸಕರು, ಸರ್ಕಾರ ಭತ್ತ ಮತ್ತು ರಾಗಿ ಖರೀದಿ ಕೇಂದ್ರವನ್ನು ಬೆಂಬಲ ಬೆಲೆಯಲ್ಲಿ ತೆರೆಯುತ್ತಿರುವುದು. ಶ್ಲಾಘನೀಯ. ಆದರೆ, ಸಕಾಲದಲ್ಲಿ ಖರೀದಿ ಕೇಂದ್ರ ತೆರೆದರೆ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.
ಪ್ರತಿ ಕ್ವಿಂಟಲ್ ರಾಗಿಗೆ 4290 ರು, ಪ್ರತಿ ಕ್ವಿಂಟಲ್ ಭತ್ತಕ್ಕೆ 2300 ರು.ಗಳನ್ನು ನಿಗದಿ ಮಾಡಿದೆ. ಖರೀದಿ ಕೇಂದ್ರ ತಡವಾಗಿ ಆರಂಭಿಸಲಾಗಿರುವುದು ಕಡಿಮೆ ರೈತರಿಗೆ ಮಾತ್ರ ಅನುಕೂಲವಾಗಲಿದೆ. ಎಲ್ಲಾ ರೈತರಿಗೆ ಅನುಕೂಲವಾಗಬೇಕಾದರೆ ವರ್ಷವಿಡೀ ಖರೀದಿ ಕೇಂದ್ರಗಳನ್ನು ತೆರೆದಿರುವಂತೆ ಕ್ರಮ ವಹಿಸಬೇಕಾಗಿದೆ ಎಂದರು.ರೈತರು ಬೆಳೆ ಕಟಾವು ಮುಗಿದು ಎರಡ್ಮೂರು ತಿಂಗಳ ಬಳಿಕ ಖರೀದಿ ಕೇಂದ್ರ ತೆರೆದರೆ ರೈತರಿಗೆ ಯಾವುದೇ ಪ್ರಯೋಜವಾಗುವುದಿಲ್ಲ. ಕಟಾವು ಆಗುತ್ತಿದ್ದಂತೆ ದಲ್ಲಾಳಿಗಳು ರೈತರಿಂದ ಬೆಳೆ ಖರೀದಿಸಿ ಬೆಂಬಲ ಬೆಲೆ ಘೋಷಣೆಯಾಗುತ್ತಿದ್ದಂತೆ ಖರೀದಿ ಕೇಂದ್ರಗಳಿಗೆ ಮಾರಾಟ ಮಾಡಿ ಹೆಚ್ಚಿನ ಲಾಭ ಮಾಡಿಕೊಳ್ಳುತ್ತಾರೆ ಎಂದರು.
ಈ ವೇಳೆ ರಾಜ್ಯ ಮಾರಾಟ ಮಹಾಮಂಡಳಿ ನಿರ್ದೇಶಕ ಶೀಳನೆರೆ ಎಸ್.ಎಲ್.ಮೋಹನ್, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಂ, ಎಪಿಎಂಸಿ ಕಾರ್ಯದರ್ಶಿ ಸತೀಶ್, ಮುಖಂಡರಾದ ನಾಗರಾಜೇಗೌಡ, ಡಿ.ಎಸ್.ನಾಗೇಂದ್ರ, ಚಟ್ಟೇನಹಳ್ಳಿ ನಾಗರಾಜು, ಆಹಾರ ಇಲಾಖೆ ನಟರಾಜ್, ಫೆಡರೇಷನ್ ವಿಭಾಗೀಯ ಮಾರಾಟ ವ್ಯವಸ್ಥಾಪಕ ವೆಂಕಟೇಶ್ ನಾಯಕ್, ಪಾಂಡವಪುರ ವ್ಯವಸ್ಥಾಪಕಿ ಶೀಲಾ, ಫೆಡರೇಷನ್ ಅಧಿಕಾರಿಗಳಾದ ರಘುಗೌಡ, ಮಧು, ಕಾರ್ತಿಕ್, ಉಗ್ರಣ ನಿಗಮ ಶಾಖಾ ವ್ಯವಸ್ಥಾಪಕ ಪ್ರದೀಪ್, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್ ಸೇರಿದಂತೆ ಇತರರಿದ್ದರು.