ಪಾಡಿ ಶ್ರೀ ಇಗ್ಗುತಪ್ಪ ದೇವಾಲಯ: ‘ಪತ್ತಾಲೋಧಿ’ ಆರಾಧನೋತ್ಸವ ಸಂಪನ್ನ

KannadaprabhaNewsNetwork |  
Published : Oct 29, 2026, 03:00 AM IST
ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ  ಮಂಗಳವಾರ ಪತ್ತಾಲೋಧಿಆರಾಧನೋತ್ಸವವು ಶ್ರದ್ಧಾ-ಭಕ್ತಿಯಿಂದ ಸಂಪನ್ನಗೊಂಡಿತು. | Kannada Prabha

ಸಾರಾಂಶ

ಪವಿತ್ರ ಕಾವೇರಿ ತೀರ್ಥೋದ್ಭವದ ನಂತರ ತುಲಾ ಮಾಸದ ಹತ್ತನೇ ದಿನದಂದು ಆಚರಿಸಲಾಗುವ ಪ್ರಸಿದ್ಧ ‘ಪತ್ತಾಲೋಧಿ’ ಆರಾಧನೋತ್ಸವವು ಇಲ್ಲಿಗೆ ಸಮೀಪದ ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ಮಂಗಳವಾರ ಶ್ರದ್ಧಾ-ಭಕ್ತಿಯಿಂದ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲುಪವಿತ್ರ ಕಾವೇರಿ ತೀರ್ಥೋದ್ಭವದ ನಂತರ ತುಲಾ ಮಾಸದ ಹತ್ತನೇ ದಿನದಂದು ಆಚರಿಸಲಾಗುವ ಪ್ರಸಿದ್ಧ ‘ಪತ್ತಾಲೋಧಿ’ ಆರಾಧನೋತ್ಸವವು ಇಲ್ಲಿಗೆ ಸಮೀಪದ ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ಮಂಗಳವಾರ ಶ್ರದ್ಧಾ-ಭಕ್ತಿಯಿಂದ ಸಂಪನ್ನಗೊಂಡಿತು.ಪರದಂಡ ಕುಟುಂಬಸ್ಥರ ಮುಖಂಡತ್ವದಲ್ಲಿ ಆಚರಿಸಿಕೊಂಡು ಬರಲಾಗುತ್ತಿರುವ ಆರಾಧನೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ಉತ್ಸವದ ಹಿನ್ನೆಲೆಯಲ್ಲಿ ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತಾದಿಗಳು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ವಿಶೇಷ ಪೂಜೆ , ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ ಹಾಗೂ ತುಲಾಭಾರ ಸೇವೆಗಳನ್ನು ಸಲ್ಲಿಸಿ ತೀರ್ಥ ಪ್ರಸಾದ ಸ್ವೀಕರಿಸಿದರು. ದೇವರ ನೃತ್ಯ ಬಲಿ, ಅನ್ನಪ್ರಸಾದ ವಿತರಣೆ ನಡೆಯಿತು.ಅರ್ಚಕ ಜಗದೀಶ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು ಕಕ್ಕಬ್ಬೆಯ ಪಾಡಿ ದೇವಾಲಯ ಮಾತ್ರವಲ್ಲದೆ, ಪೇರೂರು ಹಾಗೂ ನೆಲಜಿ ಗ್ರಾಮಗಳ ಶ್ರೀ ಇಗ್ಗುತಪ್ಪ ದೇವಾಲಯಗಳಲ್ಲೂ ಪತ್ತಾಲೋಧಿ ಉತ್ಸವ ಸಂಭ್ರಮದಿಂದ ನೆರವೇರಿತು.

ದೇವಾಲಯದ ದೇವತಕ್ಕ, ಭಕ್ತ ಜನ ಸಂಘದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ದೇವರ ಸನ್ನಿಧಿಯಲ್ಲಿ ನಾಡಿನ ಸುಭಿಕ್ಷಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ದೇವಾಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ

ವ್ಯವಸ್ಥಾಪನ ಸಮಿತಿ, ಭಕ್ತ ಜನ ಸಂಘದ ಸಮಿತಿ ಸದಸ್ಯರು, ಪಾರು ಪತ್ತೆಗಾರ ಪರದಂಡ ಪ್ರಿನ್ಸ್ ತಮ್ಮಯ್ಯ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲ ನೀಡದ್ದಕ್ಕೆ ಬೇಕರಿ ಮಾಲೀಕರಿಗೆ ಧಮ್ಕಿ ಹಾಕಿ ದಾಂಧಲೆ : ಇಬ್ಬರ ಬಂಧನ
ಮೆಟ್ರೋದಲ್ಲಿ ಮಹಿಳೆಯ ವಿಡಿಯೋ ಮಾಡಿದ ಕಿಡಿಗೇಡಿ ವಿರುದ್ಧ ಕೇಸ್