ಪದ್ಮಶ್ರೀ ಪ್ರಶಸ್ತಿ ಕೆಎಲ್‌ಇ ಕುಟುಂಬಕ್ಕೆ ಸಮರ್ಪಣೆ

KannadaprabhaNewsNetwork |  
Published : Jul 02, 2026, 02:15 AM IST
 ''ಪದ್ಮಶ್ರೀ'' ಪ್ರಶಸ್ತಿಗೆ ಭಾಜನರಾದ ಕೆಎಲ್‌ಇ ಕುಲಾಧಿಪತಿ ಡಾ. ಪ್ರಭಾಕರ ಕೋರೆ ಅವರನ್ನು ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಕಾಹೇರ್) ಮತ್ತು ವಿವಿ ವತಿಯಿಂದ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಶಿಕ್ಷಣ, ಆರೋಗ್ಯ, ಸಾಹಿತ್ಯ ಕ್ಷೇತ್ರಗಳಿಗೆ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ''ಪದ್ಮಶ್ರೀ'' ಪ್ರಶಸ್ತಿಗೆ ಭಾಜನರಾದ ಕೆಎಲ್‌ಇ ಕುಲಾಧಿಪತಿ ಡಾ. ಪ್ರಭಾಕರ ಕೋರೆ ಅವರನ್ನು ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಕಾಹೇರ್) ಮತ್ತು ವಿವಿ ವತಿಯಿಂದ ಸನ್ಮಾನಿಸಲಾಯಿತು.

ಬೆಳಗಾವಿ:

ಶಿಕ್ಷಣ, ಆರೋಗ್ಯ, ಸಾಹಿತ್ಯ ಕ್ಷೇತ್ರಗಳಿಗೆ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ''''ಪದ್ಮಶ್ರೀ'''' ಪ್ರಶಸ್ತಿಗೆ ಭಾಜನರಾದ ಕೆಎಲ್‌ಇ ಕುಲಾಧಿಪತಿ ಡಾ. ಪ್ರಭಾಕರ ಕೋರೆ ಅವರನ್ನು ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಕಾಹೇರ್) ಮತ್ತು ವಿವಿ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಕುಲಸಚಿವ ಡಾ. ವಿ.ಎಂ. ಪಟ್ಟಣಶೆಟ್ಟಿ, ವಿಶ್ವವಿದ್ಯಾಲಯದ ಪರವಾಗಿ ಪ್ರಶಂಸಾ ಪತ್ರವನ್ನು ವಾಚಿಸಿದರು. ಅದರಲ್ಲಿ ಡಾ. ಪ್ರಭಾಕರ ಕೋರೆ ಅವರ ದೂರದೃಷ್ಟಿಯ ನಾಯಕತ್ವ ಹಾಗೂ ಶಿಕ್ಷಣ, ಆರೋಗ್ಯ, ಸಂಶೋಧನೆ ಮತ್ತು ಸಾಹಿತ್ಯ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿರುವ ಅಸಾಮಾನ್ಯ ಕೊಡುಗೆಯನ್ನು ಶ್ಲಾಘಿಸಲಾಯಿತು. ಗುಣಮಟ್ಟದ ಶಿಕ್ಷಣ, ಸುಲಭ ಆರೋಗ್ಯ ಸೇವೆ ಹಾಗೂ ಅತ್ಯುತ್ತಮ ಸಂಸ್ಥಾ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಅವರು ಸಲ್ಲಿಸಿರುವ ಅವಿರತ ಸೇವೆಯನ್ನು ಪ್ರಶಂಸಾ ಪತ್ರದಲ್ಲಿ ಸ್ಮರಿಸಲಾಯಿತು.

ಡಾ. ಪ್ರಭಾಕರ ಕೋರೆ ಮಾತನಾಡಿ, ಕಳೆದ 110 ವರ್ಷಗಳಿಂದ ಕೆಎಲ್ಇ ಸಂಸ್ಥೆ, ಕಾಹೇರ್ ಹಾಗೂ ಅದರ ಎಲ್ಲ ಸಂಸ್ಥೆಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ತಮ್ಮ ಅವಿರತ ಪರಿಶ್ರಮ, ಬದ್ಧತೆ ಮತ್ತು ಸಾಮೂಹಿಕ ಸಹಕಾರದ ಮೂಲಕ ಅಪಾರ ಕೊಡುಗೆ ನೀಡಿರುವ ಕೆಎಲ್ಇಯ ಶಿಕ್ಷಕರು ಹಾಗೂ ಸಿಬ್ಬಂದಿಗೆ ಈ ಪದ್ಮಶ್ರೀ ಪ್ರಶಸ್ತಿಯನ್ನು ಸಮರ್ಪಿಸುತ್ತೇನೆ. ಈ ಗೌರವವು ನಿಜಕ್ಕೂ ಇಡೀ ಕೆಎಲ್ಇ ಕುಟುಂಬಕ್ಕೆ ಸಲ್ಲುತ್ತದೆ ಎಂದರು.

ಕುಲಪತಿ ಡಾ. ಸಂದೀಪ್ ಶ್ರೀವಾಸ್ತವ ಮಾತನಾಡಿ, ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕೆಎಲ್ಇ ಸಂಸ್ಥೆಗೆ ಮಾತ್ರವಲ್ಲದೆ ಇಡೀ ಕೆಎಲ್ಇ ಕುಟುಂಬಕ್ಕೆ ಹೆಮ್ಮೆಯ ಹಾಗೂ ಗೌರವದ ಕ್ಷಣವಾಗಿದೆ ಎಂದು ಹೇಳಿದರು.

ಡಾ. ಎಚ್.ಬಿ. ರಾಜಶೇಖರ ಮಾತನಾಡಿ, ಡಾ. ಪ್ರಭಾಕರ ಕೋರೆ ಅವರನ್ನು ದೂರದೃಷ್ಟಿಯ ನಾಯಕರೆಂದು ಬಣ್ಣಿಸಿ, ಕೆಎಲ್ಇ ಸಂಸ್ಥೆಯ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ನಿಜಕ್ಕೂ ಅನನ್ಯ ಮತ್ತು ಸ್ಮರಣೀಯವಾಗಿದೆ ಎಂದರು.

ವೇದಿಕೆಯಲ್ಲಿ ಆಶಾತಾಯಿ ಕೋರೆ, ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಶಿವಾನಂದ ಕೌಜಲಗಿ, ಡಾ. ಚಂದ್ರ ಮೆಟಗುಡ ಉಪಸ್ಥಿತರಿದ್ದರು. ಕೆಎಲ್ಇ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಮಹಾಂತೇಶ ಕೌಜಲಗಿ, ಉಪಾಧ್ಯಕ್ಷ ಬಸವರಾಜ ತಟವಟಿ, ಆಡಳಿತ ಮಂಡಳಿ ಸದಸ್ಯರಾದ ಎಂ.ಕೆ. ಕವಟಗಿಮಠ, ಜಯಾನಂದ ಮುನವಳ್ಳಿ, ಡಾ. ವಿ.ಐ. ಪಾಟೀಲ, ವೈ. ಎಸ್. ಪಾಟೀಲ, ಪ್ರವೀಣ ಬಾಗೇವಾಡಿ, ಡಾ. ಪ್ರೀತಿ ದೊಡ್ಡವಾಡ, ಎಂ.ಸಿ. ಕೊಲ್ಲಿ, ಡಾ. ಕರ್ನಲ್ ದಯಾನಂದ, ಡಾ. ವಿ.ಡಿ. ಪಾಟೀಲ, ಡಾ. ಆರ್.ಎಸ್. ಮುಧೋಳ, ಡಾ. ಎಂ.ವಿ. ಜಾಲಿ, ಡಾ. ಅಶೋಕ್ ಗೋಧಿ, ಡಾ. ಎನ್.ಎಸ್. ಮಹಾಂತಶೆಟ್ಟಿ ಹಾಗೂ ಡಾ. ಬಿ.ಎಸ್. ಪ್ರಸಾದ್ ಹಾಗೂ ಆಡಳಿತ ಮಂಡಳಿ ಕಾರ್ಯದರ್ಶಿ ಡಾ. ಎಸ್.ಎಸ್. ಜಲಾಲಪೂರೆ, ಸಂಸ್ಥೆಯ ಆಜೀವ ಸದಸ್ಯರು, ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಹಾಗೂ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಲಿನ್ಯ ನಿಯಂತ್ರಣ ಇಲಾಖೆ ಕಣ್ಣಿದ್ದೂ ಕುರುಡು
ವಾರದೊಳಗೆ ಚುನಾವಣಾ ಪ್ರಕ್ರಿಯೆ ಮುಗಿಸಲು ಆದೇಶ: ಎನ್.ಕೆ. ಭಟ್ಟ