ಮುಂಡಗದೊರೆ ಗ್ರಾಪಂ ಅಧ್ಯಕ್ಷರಾಗಿ ಪದ್ಮ ಸೋಮೇಶ್ ಆಯ್ಕೆ

KannadaprabhaNewsNetwork |  
Published : Feb 12, 2025, 12:31 AM IST
11ಕೆಎಂಎನ್ ಡಿ26 | Kannada Prabha

ಸಾರಾಂಶ

ಶ್ರೀರಂಗಪಟ್ಟಣ ತಾಲೂಕಿನ ಮುಂಡುಗದೊರೆ ಗ್ರಾಪಂಗೆ ನೂತನ ಅಧ್ಯಕ್ಷೆಯಾಗಿ ಪದ್ಮ ಸೋಮೇಶ್ ಹಾಗೂ ಉಪಾಧ್ಯಕ್ಷೆಯಾಗಿ ಗಾಯಿತ್ರಿ ಶಿವರಾಜ್ ಕುಮಾರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ತಾಲೂಕಿನ ಮುಂಡುಗದೊರೆ ಗ್ರಾಪಂಗೆ ನೂತನ ಅಧ್ಯಕ್ಷೆಯಾಗಿ ಪದ್ಮ ಸೋಮೇಶ್ ಹಾಗೂ ಉಪಾಧ್ಯಕ್ಷೆಯಾಗಿ ಗಾಯಿತ್ರಿ ಶಿವರಾಜ್ ಕುಮಾರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.

ನಿಕಟಪೂರ್ವ ಅಧ್ಯಕ್ಷ ಸೋಮಣ್ಣ ಹಾಗೂ ಉಪಾಧ್ಯಕ್ಷೆ ಸುಗುಣ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಒಟ್ಟು 18 ಮಂದಿ ಸದಸ್ಯರಿರುವ ಮುಂಡುಗದೊರೆ ಪಂಚಾಯ್ತಿಯಲ್ಲಿ ೧೩ ಮಂದಿ ಕಾಂಗ್ರೆಸ್ ಬೆಂಬಲಿತರು ಮಾತ್ರ ಭಾಗವಹಿಸಿದ್ದರು.

ಜೆಡಿಎಸ್ ಬೆಂಬಲಿತ 5 ಮಂದಿ ಚುನಾವಣೆಯಿಂದ ಹೊರಗುಳಿದ್ದರು. ಅಧ್ಯಕ್ಷ ಸ್ಥಾನಕ್ಕೆ ಪದ್ಮ ಸೋಮೇಶ್ ಹಾಗೂ ಉಪಾಧ್ಯಕ್ಷೆ ಗಾಯಿತ್ರಿ ರಾಜ್‌ಕುಮಾರ್ ಇಬ್ಬರನ್ನು ಹೊರತು ಪಡಿಸಿ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಎಇಇ ಮಂಜುನಾಥ್ ಘೋಷಣೆ ಮಾಡಿದರು. ನೂತನ ಅಧ್ಯಕ್ಷ - ಉಪಾಧ್ಯಕ್ಷರನ್ನು ಸದಸ್ಯರು ಹಾಗೂ ಗ್ರಾಮಸ್ಥರು ಅಭಿನಂದಿಸಿದರು.

ಮಲ್ಲನಕುಪ್ಪೆ ಗ್ರಾಪಂ ಅಧ್ಯಕ್ಷರಾಗಿ ಗಿರಿಯಪ್ಪ ಆಯ್ಕೆ

ಮದ್ದೂರು: ತಾಲೂಕಿನ ಮಲ್ಲನಕುಪ್ಪೆ ಗ್ರಾಪಂ ನೂತನ ಅಧ್ಯಕ್ಷರಾಗಿ ಗಿರಿಯಪ್ಪ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅಧ್ಯಕ್ಷೆ ಸವಿತಾ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಗಿರಿಯಪ್ಪ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದರು.

ನೂತನ ಅಧ್ಯಕ್ಷ ಗಿರಿಯಪ್ಪ ಮಾತನಾಡಿ, ಶಾಸಕ ಕೆ.ಎಂ.ಉದಯ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಮುಖಂಡರಾದ ಸಿ.ಟಿ.ಶಂಕರ್ ರವರ ಬೆಂಬಲದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಗ್ರಾಪಂ ಎಲ್ಲಾ ಸದಸ್ಯ ಸಹಕಾರದಿಂದ ಗ್ರಾಪಂ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಅದರಲ್ಲೂ ಮೂಲ ಸೌಕರ್ಯಗಳ ಉನ್ನತಿಗೆ ಶ್ರಮಿಸುವುದಾಗಿ ತಿಳಿಸಿದರು.

ಈ ವೇಳೆ ಗ್ರಾಪಂ ಉಪಾಧ್ಯಕ್ಷೆ ಪ್ರತಿಮಾ, ಸದಸ್ಯರಾದ ಇಂದ್ರಮ್ಮ, ಎಂ.ಪಿ.ರವಿ, ಪ್ರೇಮಕುಮಾರಿ, ರಮೇಶ್, ವಾಸುದೇವ್, ಸಿ.ಪಿ.ರವಿ, ಹೇಮಾವತಿ, ಮಣಿತ, ರಂಜಿತಾ, ಜಗದೀಶ್, ಸವಿತಾ, ವೆಂಕಟಾಚಲಯ್ಯ, ರಮ್ಯಾ, ಮುಖಂಡರಾದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದುಂಡನಹಳ್ಳಿ ಯೋಗೇಶ್, ಉಪಾಧ್ಯಕ್ಷ ರವಿ ಕುಮಾರ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಧು, ರಾಜೇಂದ್ರ, ಪುಟ್ಟಸ್ವಾಮಿ, ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

PREV

Recommended Stories

ಸರ್ಕಾರಿ ಯೋಜನೆ ತಲುಪಲು ‘ಅರಿವು’ ಕಾರ್ಯಕ್ರಮ ಸಹಕಾರಿ: ಯಶ್ಪಾಲ್‌ ಸುವರ್ಣ
ತಾಯಿ ಹೆಸರಿನಲ್ಲಿ ಒಂದು ಸಸಿ ಹಾಗೂ ಬೀಜದುಂಡೆ ಕಾರ್ಯಕ್ರಮಕ್ಕೆ ಚಾಲನೆ