ಅನಿವಾಸಿ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಲಿ

KannadaprabhaNewsNetwork |  
Published : Mar 07, 2026, 01:00 AM IST
ಪದ್ಮರಾಜ್‌ ಆರ್‌.ಪೂಜಾರಿ | Kannada Prabha

ಸಾರಾಂಶ

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ದಿನೇ ದಿನೇ ಉಲ್ಬಣಿಸುತ್ತಿರುವ ಯುದ್ಧದ ಪರಿಸ್ಥಿತಿಯು ಅಲ್ಲಿ ನೆಲೆಸಿರುವ ಲಕ್ಷಾಂತರ ತುಳುನಾಡಿನವರು ಸೇರಿದಂತೆ ಭಾರತೀಯರ ನೆಮ್ಮದಿಯನ್ನು ಕಸಿದುಕೊಂಡಿದೆ. ಇಸ್ರೇಲ್, ಇರಾನ್, ದುಬೈ, ಕತಾರ್, ಬಹರೇನ್ ಸೇರಿದಂತೆ ಯುದ್ಧ ಪೀಡಿತ ಪ್ರದೇಶಗಳಲ್ಲಿನ ಅನಿಶ್ಚಿತತೆ ಅತ್ಯಂತ ಕಳವಳಕಾರಿಯಾಗಿದ್ದು, ಕೇಂದ್ರ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಪದ್ಮರಾಜ್ ಆರ್‌.ಪೂಜಾರಿ ಆಗ್ರಹಿಸಿದ್ದಾರೆ.

ಮಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ದಿನೇ ದಿನೇ ಉಲ್ಬಣಿಸುತ್ತಿರುವ ಯುದ್ಧದ ಪರಿಸ್ಥಿತಿಯು ಅಲ್ಲಿ ನೆಲೆಸಿರುವ ಲಕ್ಷಾಂತರ ತುಳುನಾಡಿನವರು ಸೇರಿದಂತೆ ಭಾರತೀಯರ ನೆಮ್ಮದಿಯನ್ನು ಕಸಿದುಕೊಂಡಿದೆ. ಇಸ್ರೇಲ್, ಇರಾನ್, ದುಬೈ, ಕತಾರ್, ಬಹರೇನ್ ಸೇರಿದಂತೆ ಯುದ್ಧ ಪೀಡಿತ ಪ್ರದೇಶಗಳಲ್ಲಿನ ಅನಿಶ್ಚಿತತೆ ಅತ್ಯಂತ ಕಳವಳಕಾರಿಯಾಗಿದ್ದು, ಕೇಂದ್ರ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಪದ್ಮರಾಜ್ ಆರ್‌.ಪೂಜಾರಿ ಆಗ್ರಹಿಸಿದ್ದಾರೆ. ಪ್ರತಿದಿನದ ಸ್ಫೋಟದ ಸದ್ದುಗಳು ಮತ್ತು ಅಸುರಕ್ಷಿತ ಭಾವನೆ ಅಲ್ಲಿನ ಕುಟುಂಬಗಳು, ವಿಶೇಷವಾಗಿ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ತೀವ್ರವಾದ ಕೆಟ್ಟ ಪರಿಣಾಮ ಬೀರುತ್ತಿದೆ. ಯುದ್ಧದ ಸನ್ನಿವೇಶ ಮಕ್ಕಳ ಸಹಜ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತಿದ್ದು, ಅಲ್ಲಿನ ಭಾರತೀಯರು ಪ್ರತಿಕ್ಷಣವನ್ನೂ ಆತಂಕದಲ್ಲೇ ಕಳೆಯುವಂತಾಗಿದೆ. ವಿಮಾನ ಸಂಚಾರಗಳು ಸ್ಥಗಿತಗೊಂಡಿರುವುದು ಅಥವಾ ಅನಿಶ್ಚಿತತೆಯಿಂದ ಕೂಡಿರುವುದರಿಂದ, ತಾಯ್ನಡಿಗೆ ಮರಳಲು ಬಯಸುವ ಅನೇಕ ಕುಟುಂಬಗಳು ಯಾವುದೇ ದಾರಿಯಿಲ್ಲದೆ ಅಲ್ಲಿಯೇ ಸಿಲುಕಿಕೊಂಡಿವೆ. ಜಗತ್ತಿನ ಸಣ್ಣಪುಟ್ಟ ರಾಷ್ಟ್ರಗಳೂ ಈಗಾಗಲೇ ತಮ್ಮ ದೇಶದ ಪ್ರಜೆಗಳನ್ನು ಸುರಕ್ಷಿತವಾಗಿ ಕರೆಸಿಕೊಂಡಿವೆ. ಆದರೆ ಇಷ್ಟೆಲ್ಲಾ ಗಂಭೀರ ಪರಿಸ್ಥಿತಿ ಇದ್ದರೂ ಭಾರತೀಯರನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರದಿಂದ ಯಾವುದೇ ಅಧಿಕೃತ ಮತ್ತು ಪರಿಣಾಮಕಾರಿ ಪ್ರಯತ್ನಗಳು ನಡೆಯದಿರುವುದು ವಿಷಾದನೀಯ ಎಂದದ್ದಾರೆ. ಆದ್ದರಿಂದ ಪರಿಸ್ಥಿತಿ ಕೈಮೀರುವ ಮುನ್ನ ಕೇಂದ್ರ ಸರ್ಕಾರ ರಾಜತಾಂತ್ರಿಕ ಮಟ್ಟದಲ್ಲಿ ಮಧ್ಯಪ್ರವೇಶಿಸಿ ಅನಿವಾಸಿಗಳ ಸುರಕ್ಷತೆ ಖಚಿತಪಡಿಸಬೇಕು. ವಿಮಾನಯಾನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳು ಮತ್ತು ಮಕ್ಕಳನ್ನು ಭಾರತಕ್ಕೆ ಕರೆತರಲು ಕೂಡಲೇ ವಿಶೇಷ ಚಾರ್ಟರ್ ವಿಮಾನಗಳ ವ್ಯವಸ್ಥೆ ಮಾಡಬೇಕು. ಸಂಕಷ್ಟದಲ್ಲಿರುವ ಕನ್ನಡಿಗರಿಗೆ ನೆರವು ನೀಡಲು ವಿಶೇಷ ವಿಭಾಗವನ್ನು ತೆರೆಯಬೇಕು. ಸಂಕಷ್ಟದ ಸಮಯದಲ್ಲಿ ಭಾರತ ಸರ್ಕಾರ ತನ್ನ ಪ್ರಜೆಗಳ ಬೆನ್ನಿಗೆ ನಿಂತು, ಲಕ್ಷಾಂತರ ಕುಟುಂಬಗಳ ಆತಂಕವನ್ನು ದೂರ ಮಾಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

17ರಿಂದ ರೋಶನಿ ನಿಲಯದಲ್ಲಿ ಅಂ.ರಾ. ‘ಫೋರೆನ್ಸಿಕ್‌ ಫ್ಯೂಷನ್’
ಆಯುರ್ವೇದ ಸಂಶೋಧನೆಗಳು ವ್ಯಾಪಾರ ಅವಕಾಶಗಳಾಗಿ ರೂಪುಗೊಳ್ಳಲಿ: ಡಾ.ಲಕ್ಷ್ಮೀ ನಾರಾಯಣ ಶೆಣೈ