ಪರೀಕ್ಷೆಗೆ ಹಾಜರಾದ ಪದ್ಮುಂಜ ಪ್ರೌಢಶಾಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರು

KannadaprabhaNewsNetwork |  
Published : Apr 03, 2025, 12:36 AM IST
೩೨ | Kannada Prabha

ಸಾರಾಂಶ

ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಿಂದ ಇಬ್ಬರು ಹೆಣ್ಣುಮಕ್ಕಳಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಪ್ರಕರಣ ವಿದ್ಯಾರ್ಥಿನಿಯರು ಬುಧವಾರದಂದು ಪರೀಕ್ಷೆ ಬರೆದಿದ್ದಾರೆ.

ಕನ್ನಡಪ್ರಭ ವಾರ್ತೆ ಉಪ್ಪಿನಂಗಡಿ

ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಿಂದ ಇಬ್ಬರು ಹೆಣ್ಣುಮಕ್ಕಳಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಪ್ರಕರಣ ವಿದ್ಯಾರ್ಥಿನಿಯರು ಬುಧವಾರದಂದು ಪರೀಕ್ಷೆ ಬರೆದಿದ್ದಾರೆ.

ಶೇ. ನೂರು ಫಲಿತಂಶದ ಕಾರಣಕ್ಕೆ ಕಲಿಕೆಯಲ್ಲಿ ಹಿಂದುಳಿದಿರುವ ತಮಗೆ ಅವಕಾಶ ನಿರಾಕರಿಸಲಾಗಿದೆ ಎಂದು ದೂರು ನೀಡಲಾಗಿತ್ತು. ಮಧ್ಯಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ವಿದ್ಯಾರ್ಥಿನಿಯರಿಬ್ಬರಿಗೂ ಪ್ರವೆಶಪತ್ರವನ್ನು ಒದಗಿಸಿದ್ದರು. ಆ ಬಳಿಕವೂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಸತತ ಮನವೊಲಿಸಿ ಬುಧವಾರದಂದು ಪರೀಕ್ಷೆ ಬರೆಯಲು ವಿನಂತಿಸಲಾಗಿತ್ತು. ಅದರಂತೆ ಕರಾಯ ಪ್ರೌಢ ಶಾಲೆಯಲ್ಲಿ ನಡೆದ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿನಿಯರು ವಿಜ್ಞಾನ ಪರೀಕ್ಷೆಯನ್ನು ಬರೆದಿದ್ದಾರೆ. ಇನ್ನುಳಿದ ಒಂದು ಪರೀಕ್ಷೆಯನ್ನು ಬರೆದರೆ, ಈಗಾಗಲೇ ಪರೀಕ್ಷೆಗೆ ಹಾಜರಾಗದೆ ಉಳಿದ ನಾಲ್ಕು ಪರೀಕ್ಷೆಗಳನ್ನು ಮುಂದಿನ ೨ ಹಂತಗಳಲ್ಲಿ ಬರೆಯಲು ಅವಕಾಶವಿರುತ್ತದೆ.

ಪ್ರಕರಣದ ಬಗ್ಗೆ ಬಂದ ದೂರನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಇಬ್ಬರು ವಿದ್ಯಾರ್ಥಿನಿಯರು ಬುಧವಾರ ವಿಜ್ಞಾನ ವಿಷಯದ ಪರೀಕ್ಷೆಯನ್ನು ಬರೆದಿದ್ದು, ಉಳಿದ ಒಂದು ಪರೀಕ್ಷೆಯನ್ನು ಮೊದಲ ಹಂತದಲ್ಲಿ ಬರೆದರೆ, ಬರೆಯದೆ ಉಳಿದ ನಾಲ್ಕು ಪಠ್ಯಗಳ ಪರೀಕ್ಷೆಗಳನ್ನು ಎರಡನೇ ಹಂತದಲ್ಲಿ ಬರೆಯಬಹುದಾಗಿದೆ. ಅದೆರಡು ಹಂತಗಳಲ್ಲೂ ತೃಪ್ತಿಕರ ಅಂಕ ಬಾರದಿದ್ದರೆ ಮೂರನೇ ಹಂತದ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ. ಒಟ್ಟಾರೆ ಪದ್ಮುಂಜ ಸರಕಾರಿ ಪ್ರೌಢ ಶಾಲೆಯ ಪರೀಕ್ಷೆ ಬರೆಯದ ಪ್ರಕರಣವು ಪ್ರಸಕ್ತ ತನಿಖಾ ಹಂತದಲ್ಲಿದೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ
‘ಆತ್ಮನಿರ್ಭರ ಭಾರತ’ಕ್ಕೆ ಅಮೆಜಾನ್ ಪುಷ್ಟಿ