23 ವರ್ಷಗಳ ನಂತರ ಅಪರಾಧಿ ಜೈಲಿಗೆ!

KannadaprabhaNewsNetwork |  
Published : Jul 23, 2026, 02:45 AM IST
21ಶಿಂದೆ | Kannada Prabha

ಸಾರಾಂಶ

ಶಾಲಾ ಬಾಲಕನೊಬ್ಬನ ಸಾವಿಗೆ ಕಾರಣನಾಗಿ ಶಿಕ್ಷೆ ಘೋಷಿಸಲ್ಪಟ್ಟಿ ಅಪರಾಧಿ, 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಹಾರಾಷ್ಟ್ರದ ವಿಲಾಸ್ ಶಿಂಧೆ ಎಂದು ಗುರುತಿಸಲಾಗಿದೆ

ಪಡುಬಿದ್ರಿ: ಶಾಲಾ ಬಾಲಕನೊಬ್ಬನ ಸಾವಿಗೆ ಕಾರಣನಾಗಿ ಶಿಕ್ಷೆ ಘೋಷಿಸಲ್ಪಟ್ಟಿ ಅಪರಾಧಿ, 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಹಾರಾಷ್ಟ್ರದ ವಿಲಾಸ್ ಶಿಂಧೆ ಎಂದು ಗುರುತಿಸಲಾಗಿದೆ2002ರ ಸೆ. 7ರಂದು ಇಲ್ಲಿನ ಬಡಾ ಗ್ರಾಮದ ಮೂಳೂರು ಮಸೀದಿ ಸಮೀಪ ರಾಹೆಯಲ್ಲಿ ವಿಲಾಸ್ ಶಿಂದೆ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ರಸ್ತೆ ಬದಿಯಲ್ಲಿದ್ದ ಶಾಲಾ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದ.ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗೆ ಮೂರು ತಿಂಗಳ ಜೈಲು ಶಿಕ್ಷೆ ಹಾಗೂ 1,000 ರು. ದಂಡ ವಿಧಿಸಿತ್ತು. ಆದರೆ ತೀರ್ಪಿನ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಎಲ್‌ಪಿಸಿ ವಾರಂಟ್ ಹೊರಡಿಸಿತ್ತು.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ಅವರ ನಿರ್ದೇಶನದಂತೆ, ಪಡುಬಿದ್ರಿ ಠಾಣೆಯ ಎಸ್ಐ ಶಕ್ತಿವೇಲು ಮತ್ತು ಸಿಬ್ಬಂದಿ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆ ಮಾಡಿದರು, ನಂತರ ಅಲ್ಲಿಗೆ ತೆರಳಿದ ಪೊಲೀಸ್ ತಂಡ, ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ವಿಲಾಸ್ ಶಿಂಧೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. 23 ವರ್ಷಗಳ ಬಳಿಕ ಪ್ರಕರಣವನ್ನು ಬೆನ್ನತ್ತಿ ಆರೋಪಿಯನ್ನು ಬಂಧಿಸಿದ ಪಡುಬಿದ್ರಿ ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಬಿಕಾ ನೀಟ್‌ ಅಕಾಡೆಮಿ: ರಿಪೀಟರ್ಸ್‌ ಬ್ಯಾಚ್ ದಾಖಲಾತಿ ಆರಂಭ
ಕೆಬಿಎಲ್‌ ಹೆಚ್ಚುವರಿ ನಿರ್ದೇಶಕರಾಗಿ ಡಾ.ಎಂ.ಅರುಣ ಶ್ಯಾಮ್‌ ನೇಮಕ