ಬಂಟ್ವಾಳ: ಧರ್ಮಸ್ಥಳಕ್ಕೂ ಪದ್ಯಾಣಕ್ಕೂ ಯಕ್ಷಗಾನದ ಮೂಲಕ ನಂಟು ಬೆಸೆದಿದೆ. ಸಾಂಸ್ಕೃತಿಕ ಕ್ಷೇತ್ರಕ್ಕೆ ಪದ್ಯಾಣ ಮಣ್ಣಿನ ಕೊಡುಗೆ ಅನನ್ಯ. ಹಲವು ವಿದ್ವಾಂಸರು ಈ ಪರಿಸರದಲ್ಲಿದ್ದಾರೆ ಎಂದು ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಶ್ಲಾಘಿಸಿದ್ದಾರೆ.
ಕ್ಷೇತ್ರದ ವೆಬ್ ಸೈಟ್ ಅನಾವರಣ ಹಾಗೂ ಬ್ರಹ್ಮಕಲಶ ಗೀತೆ ಬಿಡುಗಡೆ ನೆರವೇರಿಸಿ ಅವರು ದಿಕ್ಸೂಚಿ ಭಾಷಣ ಮಾಡಿದರು.
ಕ್ಷೇತ್ರದಲ್ಲಿ ರುದ್ರನಮನಂ ಕಾರ್ಯಕ್ರಮದಲ್ಲಿ ಸಾಮೂಹಿಕ ರುದ್ರಪಠಣ ನಡೆಯಿತು. ಸುಮಾರು 75ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ನಾನು ಶಾಸಕನಾದ ಬಳಿಕ 300ಕ್ಕೂ ಅಧಿಕ ದೇವಸ್ಥಾನಗಳ ಸುತ್ತಮುತ್ತಲಿನ ಸಂಪರ್ಕ ರಸ್ತೆ ಅಭಿವೃದ್ಧಿ ಸಹಿತ ಅಭಿವೃದ್ಧಿಗೆ ನೆರವಾಗುವ ಅವಕಾಶ ದೊರೆಯಿತು ಎಂದರು.
ಸಮಿತಿ ಅಧ್ಯಕ್ಷ ಡಾ. ಅರುಣಶ್ಯಾಮ ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಬೆನಕಾ ಗೋಲ್ಡ್ ಬೆಂಗಳೂರು ಎಂ.ಡಿ. ಭರತ್ ಕುಮಾರ್ ಎಸ್, ಕಾಕುಂಜೆ ಸಾಫ್ಟ್ ವೇರ್ ಎಂ.ಡಿ. ಕಾಕುಂಜೆ ಗೋಪಾಲಕೃಷ್ಣ ಭಟ್, ಪತ್ರಕರ್ತ ಜಿತೇಂದ್ರ ಕುಂದೇಶ್ವರ ಪಾಲ್ಗೊಂಡರು.ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸೇರಾಜೆ ಗೋಪಾಲಕೃಷ್ಣ ಭಟ್, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಪದ್ಯಾಣ ರಘುರಾಮ ಕಾರಂತ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪದ್ಯಾಣ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶ್ಯಾಮಸುದರ್ಶನ ಹೊಸಮೂಲೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಈಶಾನ್ಯ ಪದ್ಯಾಣ, ಬ್ರಹ್ಮಕಲಶೋತ್ಸವ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ ಶೆಟ್ಟಿ ಅನೆಯಾಲಗುತ್ತು ಮತ್ತಿತರರಿದ್ದರು.ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಸೇರಾಜೆ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ ವಂದಿಸಿದರು. ವಾದಿರಾಜ ಕಲ್ಲೂರಾಯ ನಿರ್ವಹಿಸಿದರು.