ನಾಳೆಯಿಂದ ಪದ್ಯಾಣ ದೇವಾಲಯ ಬ್ರಹ್ಮಕಲಶೋತ್ಸವ

KannadaprabhaNewsNetwork |  
Published : Mar 30, 2026, 02:15 AM IST
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಡಾ.ಅರುಣ್‌ ಶ್ಯಾಮ್‌. | Kannada Prabha

ಸಾರಾಂಶ

ಮಂಗಳೂರು: ‘ಈಶ್ವರನ ಹೂದೋಟ’ ಎಂದೇ ಬಣ್ಣಿಸಲಾಗುವ ಬಂಟ್ವಾಳದ ಪದ್ಯಾಣದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.30ರಿಂದ ಏ.6ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ. ಏ.7ರಂದು ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಹೈಕೋರ್ಟ್ ಹಿರಿಯ ವಕೀಲ ಡಾ. ಅರುಣ್ ಶ್ಯಾಮ್ ತಿಳಿಸಿದ್ದಾರೆ.

ಮಂಗಳೂರು: ‘ಈಶ್ವರನ ಹೂದೋಟ’ ಎಂದೇ ಬಣ್ಣಿಸಲಾಗುವ ಬಂಟ್ವಾಳದ ಪದ್ಯಾಣದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.30ರಿಂದ ಏ.6ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ. ಏ.7ರಂದು ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಹೈಕೋರ್ಟ್ ಹಿರಿಯ ವಕೀಲ ಡಾ. ಅರುಣ್ ಶ್ಯಾಮ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಮಾ.30ರಂದು ಬೆಳಗ್ಗೆ 11 ಗಂಟೆಗೆ ಗಂಗೆ, ಯಮುನೆ, ಸರಸ್ವತಿ, ನರ್ಮದೆ, ಗಂಡಕೀ, ನಾರಾಯಣಿ, ತ್ರಿಶೂಲಿ, ಸರಯೂ, ಕಾವೇರಿ, ತುಂಗೆ, ನೇತ್ರಾವತಿ ನದಿಗಳ ತೀರ್ಥದ ಭವ್ಯ ಮೆರವಣಿಗೆ ಸಂಗಮ ಕ್ಷೇತ್ರ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ, ಮಹಾಕಾಳಿ ದೇವಸ್ಥಾನದಿಂದ ಆರಂಭವಾಗಿ ಹೊರೆಕಾಣಿಕೆಗಳ ಸಹಿತ ನಾಡಿನ ಸಾಧು, ಸಂತರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಪದ್ಯಾಣ ತಲುಪಲಿದೆ ಎಂದರು.

ಮಾ.30ರಂದು ಮಧ್ಯಾಹ್ನ 3.30ಕ್ಕೆ ಮಿತ್ತನಡ್ಕ ಶ್ರೀ ಮಲರಾಯ ದೈವಸ್ಥಾನದಿಂದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಸಿರುವಾಣಿ ಮೆರವಣಿಗೆ ನಡೆಯಲಿದೆ. ಸಂಜೆ 5ರಿಂದ ವೈದಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಸಂಜೆ 4.30ರಿಂದ ಸುಧರ್ಮ ಸಭೆ ನಡೆಯಲಿದೆ. ಮಾ.31ರಂದು ಬೆಳಗ್ಗೆ 7ರಿಂದ ವೈದಿಕ ಕಾರ್ಯಕ್ರಮ, ಚಂಡಿಕಾಯಾಗ, ಸಂಜೆ 4.30ರಿಂದ ಸುಧರ್ಮ ಸಭೆ: ಮಾತೃಸಂಗಮ ನಡೆಯಲಿದೆ. ಏ.1ರಂದು ಬೆಳಗ್ಗೆ 7ರಿಂದ ವೈದಿಕ ಕಾರ್ಯಕ್ರಮ, ಸಂಜೆ 4.30ರಿಂದ ಸುಧರ್ಮ ಸಭೆ, ಏ.2ರಂದು ಬೆಳಗ್ಗೆ 7 ರಿಂದ ವೈದಿಕ ಕಾರ್ಯಕ್ರಮ, ಸಂಜೆ 4.30ರಿಂದ ಸುಧರ್ಮ ಸಭೆ, ಏ.3ರಂದು ಬೆಳಗ್ಗೆ 10.56ಕ್ಕೆ ಶ್ರೀ ಮಹಾಲಿಂಗೇಶ್ವರ ದೇವರು, ಶ್ರೀ ಮಹಾಗಣಪತಿ, ಶ್ರೀ ಶಾಸ್ತಾರ ದೇವರ ಪುನರ್ ಪ್ರತಿಷ್ಠೆ, ರುದ್ರಹೋಮ, ಸಂಜೆ 4.30ರಿಂದ ಸುಧರ್ಮ ಸಭೆ ನಡೆಯಲಿದೆ ಎಂದರು.

ಏ.4ರಂದು ಬೆಳಗ್ಗೆ 7ರಿಂದ ವೈದಿಕ ಕಾರ್ಯಕ್ರಮ, ಸಂಜೆ 4.30ಕ್ಕೆ ಸುಧರ್ಮ ಸಭೆ, ಏ.5ರಂದು ಬೆಳಗ್ಗೆ 7ರಿಂದ ವೈದಿಕ ಕಾರ್ಯಕ್ರಮ, ಶ್ರೀಶಿವ ಪಂಚಾಕ್ಷರಿ ಹಾಗೂ ಶ್ರೀ ಶಕ್ತಿಪಂಚಾಕ್ಷರಿ ಹವನ, ಸಂಜೆ 4.30ರಿಂದ ಸುಧರ್ಮ ಸಭೆ, ಏ.7ರಂದು ಬೆಳಗ್ಗೆ 7ರಿಂದ ದರ್ಶನ ಬಲಿ, ಬಟ್ಟಲು ಕಾಣಿಕೆ, ಸಂಜೆ 4.30ರಿಂದ ಕಾರ್ಯಕರ್ತರ ಸಂಗಮ, ರಾತ್ರಿ 9ರಿಂದ ಶ್ರೀ ಧೂಮಾವತಿ ಹಾಗೂ ಕೊರತಿ ದೈವಗಳ ನೇಮ, ಮೇ 20ರಂದು ದೃಢಕಲಶ ನಡೆಯಲಿದೆ ಎಂದು ತಿಳಿಸಿದರು.ಏ.6ರಂದು ಬೆಳಗ್ಗೆ 7ರಿಂದ ಶತರುದ್ರ ಸಹಿತ ಬ್ರಹ್ಮಕುಂಭಾಭಿಷೇಕ ನೆರವೇರಲಿದೆ. ಪ್ರತಿದಿನ ಸಂಜೆ 7ರಿಂದ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ. ಅಲ್ಲದೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಗಣ್ಯರು, ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ಅರುಣ್ ಶ್ಯಾಮ್ ತಿಳಿಸಿದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಸೇರಾಜೆ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸೇರಾಜೆ ಗೋಪಾಲಕೃಷ್ಣ ಭಟ್, ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ ಶೆಟ್ಟಿ ಅನೆಯಾಲಗುತ್ತು, ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪದ್ಯಾಣ, ಕಾರ್ಯದರ್ಶಿ ಈಶಾನ್ಯ ಪದ್ಯಾಣ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಪ್ರಣತಿ ಚೈತನ್ಯ ಪದ್ಯಾಣ, ವಿವಿಧ ಸಮಿತಿಗಳ ಪ್ರಮುಖರಾದ ವಿನೋದ್ ಶೆಟ್ಟಿ ಪಟ್ಲ, ಚೈತನ್ಯಕೃಷ್ಣ ಪದ್ಯಾಣ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶನಿವಾರಸಂತೆ ಶ್ರದ್ಧಾಭಕ್ತಿಯ ಶ್ರೀರಾಮನವಮಿ
ಕುಂಜಿಬೆಟ್ಟು ರುಕ್ಮಿಣಿ ಸತ್ಯಭಾಮಾ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶಿಲಾನ್ಯಾಸ