ಬಂಟ್ವಾಳ: ಬಂಟ್ವಾಳ ತಾಲೂಕಿನ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ಸಂಪರ್ಕ ರಸ್ತೆ, ವಿವಿಧ ಸೌಕರ್ಯಗಳ ಕಾಮಗಾರಿಗೆ ಚಾಲನೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಪದ್ಯಾಣ ದೇವಸ್ಥಾನದಲ್ಲಿ ನಡೆಯಿತು.
ಬೆಂಗಳೂರಿನ ಉದ್ಯಮಿ ಡಾ. ನವೀನ್ ಕುಮಾರ್ ಮತ್ತು ಡಾ. ಶಿಲ್ಪಾ ಸಮನ್ವಿಫೌಂಡೇಶನ್ ನ ಡಾ. ಶಿಲ್ಪಾ ಎಚ್. ನವೀನ್ ದಂಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ 10 ಲಕ್ಷ ರು. ದೇಣಿಗೆ ಘೋಷಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣಶ್ಯಾಮ ಸ್ವಾಗತಿಸಿದರು. ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಸೇರಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪದ್ಯಾಣ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸೇರಾಜೆ ಗೋಪಾಲಕೃಷ್ಣ ಭಟ್, ಕಾರ್ಯಾಧ್ಯಕ್ಷ ಶ್ಯಾಮಸುದರ್ಶನ ಹೊಸಮೂಲೆ, ಜೀರ್ಣೋದ್ಧಾರ ಸಮಿತಿ ಸಮಿತಿ ಗೌರವಾಧ್ಯಕ್ಷ ಪದ್ಯಾಣ ರಘುರಾಮ ಕಾರಂತ, ಕಾರ್ಯದರ್ಶಿ ಈಶಾನ್ಯ ಪದ್ಯಾಣ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ, ವಕೀಲರಾದ ಎಸ್.ಎಂ.ಭಟ್ ಮಂಗಳೂರು, ದಾನಿಗಳಾದ ಟಿ.ಎಸ್.ಭಟ್ ಮಂಗಳೂರು, ಗುರಿಕಾರರಾದ ಬಾಲಸುಬ್ರಹ್ಮಣ್ಯ ಪದ್ಯಾಣ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಪದ್ಯಾಣ ಗೋವಿಂದ ಭಟ್, ಪ್ರಮುಖರಾದ ಮುಗುಳಿ ತಿರುಮಲೇಶ್ವರ ಭಟ್ ಉಪಸ್ಥಿತರಿದ್ದರು. ದೀಪ್ತಿ ಪದ್ಯಾಣ ಮತ್ತು ವೈಭವಿ ಪದ್ಯಾಣ ಪ್ರಾರ್ಥನೆ ನೆರವೇರಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ ಶೆಟ್ಟಿ ಅನೆಯಾಲಗುತ್ತು ಅವರು ವಂದಿಸಿದರು. ಡಾ. ಗೋವಿಂದ ಪ್ರಸಾದ ಕಜೆ ಕಾರ್ಯಕ್ರಮ ನಿರ್ವಹಿಸಿದರು. ಇದೇ ವೇಳೆ ಕುಂಟುಕುಡೇಲು ನವೀನ ತಂತ್ರಿ, ಟಿ.ಎಸ್. ಭಟ್, ಮುಗುಳಿ ತಿರುಮಲೇಶ್ವರ ಭಟ್, ಎಸ್.ಎನ್. ಭಟ್, ಮಾಣಿಪ್ಪಾಡಿ ಕೃಷ್ಣ ಎಂ.ಆರ್, ಶಿವಪ್ರಸಾದ್ ಶೆಟ್ಟಿ ಅವರನ್ನು ಗೌರವಿಸಲಾಯಿತು.