ಪಹಲ್ಗಾಂ ಘಟನೆ ದೇಶದ ಸಂಸ್ಕೃತಿ ಮೇಲಿನ ದಾಳಿ: ಕಾರಜೋಳ

KannadaprabhaNewsNetwork |  
Published : May 11, 2025, 01:16 AM IST
ಪೊಟೋ ಮೇ.10ಎಂಡಿಎಲ್ 1. ಗೋವಿಂದ ಕಾರಜೋಳ ಸಂಸದರು ಚಿತ್ರದುರ್ಗ ಕ್ಷೇತ | Kannada Prabha

ಸಾರಾಂಶ

ಪಹಲ್ಗಾಂನಲ್ಲಿ ಉಗ್ರರು ದಾಳಿ ನಡೆಸಿ 26 ಜನ ಅಮಾಯಕರನ್ನು ಹತ್ಯೆ ಮಾಡಿದ್ದು, ಈ ದೇಶದ ಸಂಸ್ಕೃತಿ ಮೇಲೆ ಮಾಡಿದ ದಾಳಿಯಾಗಿದೆ. ಜಾತಿ ಧರ್ಮದ ಹೆಸರಿನಲ್ಲಿ ಬೇರೆಯವರಿಗೆ ಹಿಂಸೆ, ಕೊಲೆ, ಸುಲಿಗೆ ಮಾಡುವುದು ನಮ್ಮ ದೇಶದ ಸಂಸ್ಕೃತಿ ಅಲ್ಲ. ಈ ದೇಶದಲ್ಲಿ ಪ್ರಾಚೀನ ಕಾಲದಿಂದಲೂ ಎಲ್ಲ ಧರ್ಮದವರಿಗೆ ಸಮಾನ ಅವಕಾಶ ಇದೆ ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಹೇಳಿದರು.

ಕನ್ನಡಪ್ರಭ ವಾರ್ತೆ ಮುಧೋಳ

ಪಹಲ್ಗಾಂನಲ್ಲಿ ಉಗ್ರರು ದಾಳಿ ನಡೆಸಿ 26 ಜನ ಅಮಾಯಕರನ್ನು ಹತ್ಯೆ ಮಾಡಿದ್ದು, ಈ ದೇಶದ ಸಂಸ್ಕೃತಿ ಮೇಲೆ ಮಾಡಿದ ದಾಳಿಯಾಗಿದೆ. ಜಾತಿ ಧರ್ಮದ ಹೆಸರಿನಲ್ಲಿ ಬೇರೆಯವರಿಗೆ ಹಿಂಸೆ, ಕೊಲೆ, ಸುಲಿಗೆ ಮಾಡುವುದು ನಮ್ಮ ದೇಶದ ಸಂಸ್ಕೃತಿ ಅಲ್ಲ. ಈ ದೇಶದಲ್ಲಿ ಪ್ರಾಚೀನ ಕಾಲದಿಂದಲೂ ಎಲ್ಲ ಧರ್ಮದವರಿಗೆ ಸಮಾನ ಅವಕಾಶ ಇದೆ ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಹೇಳಿದರು.

ನಗರದ ಹೌಸಿಂಗ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಎಲ್ಲರೂ ಏಕತೆ ಭಾವೈಕ್ಯತೆಯಿಂದ ಬದುಕುತ್ತಿದ್ದಾರೆ. ಈ ನಾಡಿನಲ್ಲಿ ಶರಣರು, ಸೂಫಿ ಸಂತರು ಆಗಿ ಹೋಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಡೆದುಕೊಳ್ಳುತ್ತಿದ್ದೇವೆ. ಇಂತಹ ದೇಶದಲ್ಲಿ ಭಯೋತ್ಪಾದಕರು ಧರ್ಮದ ಹೆಸರಿನಲ್ಲಿ ದಾಳಿ ಮಾಡಿರುವುದು ಅಕ್ಷಮ್ಯ. ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಸೇನೆಯವರು ಸೇರಿ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ಕೊಟ್ಟಿದ್ದಾರೆ. ಪಾಕ್‌ ನಿರಂತರವಾಗಿ ದಾಳಿ ನಡೆಸಿದರೂ ನಮ್ಮ ಸೈನಿಕರು ಅದನ್ನು ಸಮರ್ಪಕವಾಗಿ ಹಿಮ್ಮೆಟ್ಟಿಸುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಬಿಜೆಪಿ ಯುವ ಧುರೀಣ ಅರುಣ ಕಾರಜೋಳ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರವಿ ನಂದಗಾಂವ, ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ನಾರಾಯಣ ಯಡಹಳ್ಳಿ, ನಗರ ಬಿಜೆಪಿ ಅಧ್ಯಕ್ಷ ಕೆ.ಎಸ್. ಹಿರೇಮಠ, ಶ್ರೀಶೈಲ ಚಿನ್ನಣವರ, ಗಿರೀಶ ಮೇತ್ರಿ, ನಾಗಪ್ಪ ಅಂಬಿ, ಗುರುಪಾದ ಕುಳಲಿ, ಅನುಪ್ ಚವಾಣ್, ಬಸವರಾಜ ಬಟಕುರ್ಕಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಸುರಕ್ಷತೆಗೆ ಸಾರಿಗೆ ಇಲಾಖೆ ಎಐ ಆಧರಿತ ಕ್ಯಾಮೆರಾ ಅಳವಡಿಕೆ
ಮಂಡ್ಯ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸ್ವತಂತ್ರ ಸ್ಪರ್ಧೆ - ಸುಮಲತಾ ಪರ ನಾರಾಯಣಗೌಡ ಬ್ಯಾಟಿಂಗ್‌