ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಸುಳ್ಯ ನಗರದಲ್ಲಿ ಬಹುತೇಕ ವರ್ತಕರು ಬುಧವಾರ ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿಗಳನ್ನು ಬಂದ್ ಮಾಡಿ, ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದರು.
ಕನ್ನಡಪ್ರಭ ವಾರ್ತೆ ಸುಳ್ಯ
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಸುಳ್ಯ ನಗರದಲ್ಲಿ ಬಹುತೇಕ ವರ್ತಕರು ಬುಧವಾರ ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿಗಳನ್ನು ಬಂದ್ ಮಾಡಿ, ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದರು.
ಬೆಳಗ್ಗೆ ೧೧ರಿಂದ ೧೨ ಗಂಟೆವರೆಗೆ ಸ್ವಯಂ ಪ್ರೇರಿತ ಬಂದ್ ನಡೆಸಿದರು.
ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಜಮ್ಮುವಿನ ಘಟನೆ ಬೇಸರ ತರಿಸಿದೆ. ಈ ರೀತಿಯ ಘಟನೆಗಳು ಮುಂದೆ ನಡೆಯದಂತೆ ಎಲ್ಲರೂ ಒಗ್ಗಟ್ಟಾಗಬೇಕಿದೆ. ಉಗ್ರರಿಗೆ ತಕ್ಕ ಶಿಕ್ಷೆ ಆಗುತ್ತದೆ ಎಂದರು.ಭಯೋತ್ಪಾದಕ ಕೃತ್ಯ ಕೊನೆಗಾನಿಸಲು ಸೈನಿಕರಿಗೂ ನಾವು ಶಕ್ತಿ ನೀಡೋಣ ಎಂದು ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.