ಪಾಕಿಸ್ತಾನ ಜಿಂದಾಬಾದ್ ಘೋಷಣೆ ಸಮಗ್ರ ತನಿಖೆಗೆ ಆಗ್ರಹ

KannadaprabhaNewsNetwork | Published : Feb 29, 2024 2:03 AM

ಸಾರಾಂಶ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕುರಿತು ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಎಸ್‌ಪಿ ರಾಜ್ಯ ಸಂಯೋಜಕ ಹಾಗೂ ಉಸ್ತುವಾರಿ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು.

ಕನ್ನಡಪ್ರವಾರ್ತೆ ಚಾಮರಾಜನಗರವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕುರಿತು ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಎಸ್‌ಪಿ ರಾಜ್ಯ ಸಂಯೋಜಕ ಹಾಗೂ ಉಸ್ತುವಾರಿ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು. ನಗರದ ಪ್ರವಾಸಿಮಂದಿರದಲ್ಲಿ ಬಹುಜನ ಸಮಾಜ ಪಕ್ಷದ ವತಿಯಿಂದ ನಡೆದ ಸಂವಿಧಾನ ಸಂರಕ್ಷಣಾ ಅಭಿಯಾನ ಸಮಾವೇಶದ ಪೂರ್ವಭಾವಿಯಲ್ಲಿ ಅವರು ಮಾತನಾಡಿದರು. ಶಕ್ತಿಕೇಂದ್ರ ವಿಧಾನಸೌಧದಲ್ಲಿ ನೆನ್ನೆ ರಾಜ್ಯಸಭಾ ಚುನಾವಣೆ ನಡೆದಿದ್ದು, ಈ ಚುನಾವಣೆಯಲ್ಲಿ ಆಡಳಿಡರೂಢ ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡಿದೆ. ಬಿಜೆಪಿ ಒಬ್ಬರನ್ನು ಗೆಲ್ಲಿಸಿಕೊಂಡಿದೆ. ಆದರೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಮಾಡಿಕೊಂಡು ಮತ್ತೊಬ್ಬ 5ನೇ ಅಭ್ಯರ್ಥಿ ಕುಪೇಂದ್ರರೆಡ್ಡಿ ಅವರನ್ನು ಚುನಾವಣೆಗೆ ನಿಲ್ಲಿಸಿತ್ತು. ಸಹಜವಾಗಿ ಬಿಜೆಪಿ ಜೆಡಿಎಸ್ ನಿರೀಕ್ಷೆಗೆ ವ್ಯತಿರಿಕ್ತವಾಗಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್‌ಗೆ ಅಡ್ಡಮತದಾನ ಮಾಡಿರವುದು ಬಿಜೆಪಿಗೆ ಮುಖಭಂಗವಾಗಿದೆ. ಶಿವರಾಂ ಹೆಬ್ಬಾರ್ ಮತದಾನ ಪಕ್ರಿಯೆಯಿಂದ ದೂರ ಉಳಿಯುವ ಮೂಲಕ ಬಿಜೆಪಿಗೆ ಮುಖಭಂಗ ಮಾಡಿದ್ದಾರೆ ಎಂದರು. ಕಾಂಗ್ರೆಸ್‌ನಿಂದ ಗೆದ್ದ ರಾಜ್ಯಸಭಾ ಸದಸ್ಯ ನಾಸೀರ್ ಹುನೇನ್ ಬೆಂಬಲಿಗರು ಘೋಷಣೆಗಳನ್ನು ಕೂಗಿದ್ದಾರೆ ಕೂಗುವಾಗ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ ಎಂಬ ಆರೋಪವಿದೆ. ಹಾಗಾಗಿ ಇದೊಂದು ದೇಶದ್ರೋಹ ವಿರೋಧಿ ಹೇಳಿಕೆ ಹಾಗಾಗಿ ನಾಸೀರ್‌ಹುಸೇನ್ ರಾಜೀನಾಮೆ ನೀಡಬೇಕು. ರಾಜ್ಯ ಸರ್ಕಾರ ರಾಜೀನಾಮೆ ಕೊಡಬೇಕು ಎಂದು ಹೇಳಿ ಬಿಜೆಪಿ ನಾಯಕರು ಸದನದೊಳಗೆ, ಜಿಲ್ಲಾ ಮಟ್ಟದ ಕಾರ್ಯಕರ್ತರು ಹೊರಗಡೆ ಹೋರಾಟ ಮಾಡುತ್ತಿದ್ದಾರೆ ಈಗ ಸರ್ಕಾರ ಆದೇಶ ಘೋಷಣೆ ತುಣುಕನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದೆ. ತರಾತುರಿಯಲ್ಲಿ ಬಿಜೆಪಿ ದೊಡ್ಡ ಹೋರಾಟ ಮಾಡುತ್ತಿದೆ ಇದರ ಬಗ್ಗೆ ನನಗೆ ದೊಡ್ಡ ಹುನ್ನಾರ ಕಾಣಿಸುತ್ತಿದೆ. ಮಾಧ್ಯಮ ಸ್ನೇಹಿತರು, ಮಂತ್ರಿಗಳು, ಸ್ವತಃ ನಾಸೀರ್ ಹುಸೇನ್ ಅವರೇ ಸ್ಪಷ್ಠಪಡಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ನಾಸೀರ್ ಹುಸೇನ್ ಜಿಂದಾಬಾದ್ ಎಂದು ಕೂಗಿದ್ದಾರೆ ಅದನ್ನು ತಿರುಚಿ ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುತ್ತಿದ್ದಾರೆ ಎಂದು ಸ್ಪಷ್ಠನೆ ನೀಡಿದ್ದಾರೆ. ಎಫ್‌ಎಸ್‌ಎಲ್‌ಗೆ ವರದಿ ಬಂದ ಮೇಲೆ ಅದರ ಸತ್ಯಾಸತ್ಯತೆ ಹೊರಬರುತ್ತದೆ. ಅದಕ್ಕೂ ಮೊದಲೇ ರಾಜ್ಯದಲ್ಲಿ ಬಿಜೆಪಿಯವರು ದೊಡ್ಡ ಹೋರಾಟ ಮಾಡುತ್ತಿರುವುದು ದೊಡ್ಡ ಮಟ್ಟದಲ್ಲಿ ಸಂಶಯ ಮೂಡಿಸುತ್ತಿದೆ ಎಂದರು.ಪಾಕಿಸ್ತಾನ ಜಿಂದಾಬಾದ್ ಅಂತ ಘೋಷಣೆ ಕೂಗುವ ಮೂರ್ಖರು ನಮ್ಮ ರಾಜ್ಯದಲ್ಲಿ ಇಲ್ಲ ಅಂದುಕೊಂಡಿದ್ದೇನೆ. ಅದೊಂದು ಮುರ್ಖಾಪರಮಾವಧಿ, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದರೆ ಕೇಂದ್ರ ಸರ್ಕಾರ ಒಂದು ಯೋಜನೆ ತರಲಿ ಯಾರು ಪಾಕಿಸ್ತಾನ ಸೇರಬೇಕೆನ್ನುತ್ತಾರೋ ಅವರನ್ನು ಪಾಕಿಸ್ಥಾನಕ್ಕೆ ಕಳುಹಿಸಿಕೊಡಲಿ ನಮ್ಮದೇನು ಅಭ್ಯಂತರ ಇಲ್ಲ. ಆದರೆ ಘೋಷಣೆ ಕೂಗಿದರೊ ಇಲ್ಲವೋ ಎಂಬ ಸ್ಪಷ್ಠತೆ ಇಲ್ಲದಿರುವ ಸಂದರ್ಭದಲ್ಲಿ ದೊಡ್ಡ ಹೋರಾಟ ಶುರು ಮಾಡಿರುವ ಹಿಂದೆ ಒಂದು ಹುನ್ನಾರ ಇದೆ ಈ ಹುನ್ನಾರ ಬಿಜೆಪಿಯವರೇ ಮಾಡಿದ್ದಾರೆ ಎಂದು ಆರೊಪಿಸಿದರು. ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಸ್ಪರ್ಧೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವು ರಾಜ್ಯದ 28 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದ್ದು, ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ. ಏಕಾಂಕಿಯಾಗಿ ದೇಶಾದ್ಯಂತ ಸ್ಪರ್ಧೆ ಮಾಡುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಘೋಷಣೆ ಮಾಡಿದ್ದಾರೆ. ಚಾಮರಾಜನಗರ ಮೀಸಲು ಕ್ಷೇತ್ರಕ್ಷೆ ಪಕ್ಷದ ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಹ.ರ,ಮಹೇಶ್, ನಿವೃತ್ತ ತಹಸೀಲ್ದಾರ್ ಮಹದೇವಯ್ಯ ಆಕಾಂಕ್ಷಿಯಾಗಿದ್ದಾರೆ ಅವರಲ್ಲಿ ಒಬ್ಬರನ್ನು ಪಕ್ಷದ ವತಿಯಿಂದ ಕಣಕ್ಕಿಳಿಸಲಾಗುವುದು ಎಂದರು.

ಹಾಸನದಲ್ಲಿ ಮಾ.12 ರಂದು ಸಮಾವೇಶ: ಹಾಸನದಲ್ಲಿ ಪಕ್ಷದ ವತಿಯಿಂದ ಮಾ.12 ರಂದು ಮಂಗಳವಾರ ಮೈಸೂರು ವಿಭಾಗೀಯ ಮಟ್ಟದ ಸಂವಿಧಾನ ಸಂರಕ್ಷಣಾ ಅಭಿಯಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ. 8 ಜಿಲ್ಲೆಗಳಿಂದ ಸಾವಿರಾರು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶ್ವಸಿಗೊಳಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ಬಿಎಸ್‌ಪಿ ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ಜಿಲ್ಲಾ ಸಂಯೋಜಕ ಪ್ರಕಾಶ್, ಜಿಲ್ಲಾ ಉಸ್ತುವಾರಿ ಚಂದಕವಾಡಿ ರಾಜಶೇಖರ್, ಜಿಲ್ಲಾ ಉಪಾಧ್ಯಕ್ಷ ರಾದ ಹನುಮಂತು, ರಾಜೇಂದ್ರ, ಬಿವಿಎಫ್ ಸಂಯೋಜಕ ಚಂದ್ರಕಾಂತ್, ಹನೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸೀಗನಾಯಕ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಗೋವಿಂದರಾಜು, ಚಾಮರಾಜನಗರ ಕ್ಷೇತ್ರದ ಉಸ್ತುವಾರಿ ಶಿವಶಂಕರ್, ಕೃಷ್ಣಮೂರ್ತಿ, ಎಸ್.ಪಿ.ಮಹೇಶ್ ಇತರರು ಭಾಗವಹಿಸಿದ್ದರು.

Share this article