ಪಾಕಿಸ್ತಾನ್ ಜಿಂದಾಬಾದ್ ಎಂದರೆ ಗುಂಡಿಕ್ಕಿ ಕೊಲ್ಲಿ: ಸಚಿವ ಜಮೀರ್‌ ಅಹ್ಮದ್ ಖಾನ್

KannadaprabhaNewsNetwork |  
Published : May 05, 2024, 02:10 AM IST
ಕುರುಗೋಡು 01 ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಪರ ಸಚಿವ ಬಿ.ಜೆಡ್. ಜಮೀರ್ ರೋಡ್ಶೋ.ಪ್ರಚಾರಸಭೆಯಲ್ಲಿ ನಡೆಸಿ ಮತಯಾಚನೆ ಮಾಡಿದರು | Kannada Prabha

ಸಾರಾಂಶ

ಹಿಂದೂ-ಮುಸ್ಲಿಂ ಜನಾಂಗದ ಮಧ್ಯೆ ಜಾತಿ ಭಾವನೆ ಬಿತ್ತಿರುವುದೇ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆ.

ಕುರುಗೋಡು: ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದರೆ ಅವರನ್ನು ಡುಂಡುಂ ಎಂದು ಗುಂಡಿಕ್ಕಿ ಕೊಲ್ಲಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್ ಖಾನ್ ಕರೆ ನೀಡಿದ್ದಾರೆ.

ಪಟ್ಟಣದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಪರ ಶುಕ್ರವಾರ ರಾತ್ರಿ ಆಯೋಜಿಸಿದ್ದ ರೋಡ್‌ ಶೋ ವೇಳೆ ಅವರು ಮಾತನಾಡಿದರು.

ಹಿಂದೂ-ಮುಸ್ಲಿಂ ಜನಾಂಗದ ಮಧ್ಯೆ ಜಾತಿ ಭಾವನೆ ಬಿತ್ತಿರುವುದೇ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆ. ಅಡುಗೆ ಅನಿಲ, ರಸಗೊಬ್ಬರ, ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಪ್ರಧಾನಿ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ದೂರಿದರು.

ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಮಾತನಾಡಿ, ಕಾಂಗ್ರೆಸ್ ಸರ್ಕಾರ ಉದ್ಯೋಗ ಮತ್ತು ಶಿಕ್ಷಣಕ್ಕೆ ಮೀಸಲಾತಿಗಾತಿ ಜಾರಿಗೊಳಿಸಿದ ೩೭೧ ಜೆ ಜಾರಿಯ ಬಗ್ಗೆ ಬಿಜೆಪಿಯವರು ವಿರೋಧ ವ್ಯಕ್ತಪಡಿಸಿದ್ದರು. ೩೭೧ ಜೆ ಜಾರಿಯಿಂದ ಜಿಲ್ಲೆಯಲ್ಲಿ ಸಾವಿರಾರು ಯುವಕರಿಗೆ ಮೀಸಲಾತಿಯಲ್ಲಿ ಶಿಕ್ಷಣ ಮತ್ತು ಉದ್ಯೋಗ ದೊರೆತಿದೆ. ವಿರೋಧಿಸಿದ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದರು.

ಸೋನಿಯಾ ಗಾಂಧಿ ಜಿಲ್ಲೆಯಿಂದ ಸಂಸದರಾಗಿದ್ದಾಗ ಜಿಲ್ಲೆಯ ಅಭಿವೃದ್ಧಿಗೆ ₹೩೩೦೦ ಕೋಟಿ ವಿಶೇಷ ಅನುದಾನ ನೀಡಿದ ಫಲವಾಗಿ ಜಿಲ್ಲೆಯ ಕುಡತಿನಿ ಬಳಿ ಬಳ್ಳಾರಿ ಶಾಖೋತ್ಪನ್ನ ಕೇಂದ್ರ ಸ್ಥಾಪನೆಯಾಗಿ ಸಾವಿರಾರು ಜನರಿಗೆ ಉದ್ಯೋಗ ದೊರೆತಿದೆ. ಜಿಲ್ಲೆಯ ತೋರಣಗಲ್ಲು ಬಳಿ ಇಂದಿರಾಗಾಂಧಿ ಜಿಂದಾಲ್ ಹುಕ್ಕು ಕಾರ್ಖಾನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಅದರಲ್ಲಿ ಲಕ್ಷಾಂತರ ಯುವಕರಿಗೆ ಉದ್ಯೋಗ ದೊರೆತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತದೆ ಎಂದರು.

ಶಾಸಕರಾದ ಜೆ.ಎನ್.ಗಣೇಶ್, ನಾರಾ ಭರತ್ ರೆಡ್ಡಿ ಮಾತನಾಡಿದರು. ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಂಗೆ ಸಿಎಂ ಸ್ಥಾನ ನೀಡದಿದ್ದರೆ ರಾಜ್ಯಕ್ಕೆ ಅಪಮಾನ ಮಾಡಿದಂತೆ
ಮೀಸಲು ವರ್ಗೀಕರಣದ ವಿರುದ್ಧ ಇಂದು ಬೆಳಗಾವಿ ಚಲೋ