ಪಾಳಾ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ

KannadaprabhaNewsNetwork |  
Published : Nov 15, 2026, 02:15 AM IST
ಪಾಳಾ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಶಾಸಕ ಶಿವರಾಮ ಹೆಬ್ಬಾರ ಉದ್ಘಾಟಿಸಿದರು. | Kannada Prabha

ಸಾರಾಂಶ

ಸಾರ್ವಜನಿಕರಿಗೆ ಅನುಕೂಲವಾಗಲೆಂದು ಹೋಬಳಿ ಮಟ್ಟದಲ್ಲಿ ಸಭೆಯ ಮೂಲಕ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ.

ಮುಂಡಗೋಡ: ರಾಜ್ಯ ಸರ್ಕಾರ ಜಾರಿ ಮಾಡಿರುವ ಸರ್ಕಾರವೇ ಜನರ ಬಳಿಗೆ ಎಂಬ ಪ್ರಜಾಸೇವೆ ಆಂದೋಲನ ಕಾರ್ಯಕ್ರಮವನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಂಡು ಅಗತ್ಯ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಶನಿವಾರ ತಾಲೂಕಿನ ಮಳಗಿ ಗ್ರಾಮದ ಶಿವಗಣೇಶ ಮಂದಿರ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪಾಳಾ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅನುಕೂಲವಾಗಲೆಂದು ಹೋಬಳಿ ಮಟ್ಟದಲ್ಲಿ ಸಭೆಯ ಮೂಲಕ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ. ಪ್ರತಿಯೊಬ್ಬರೂ ಇದರ ಲಾಭ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಬಳಿಕ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ತಹಸೀಲ್ದಾರ್‌ ಎಸ್.ಎ. ಪ್ರಸಾದ, ತಾಪಂ ಕಾರ್ಯನಿರ್ವಹಣಾಧಿಕಾರಿ ಟಿ.ವೈ. ದಾಸನಕೊಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಸುಮಾ ಜಿ., ವಿವಿಧ ಇಲಾಖೆ ಅಧಿಕಾರಿಗಳು, ಮುಖಂಡರು ಮುಂತಾದವರು ಉಪಸ್ಥಿತರಿದ್ದರು.ಯುವಕರ ನಡುವೆ ಗಲಾಟೆ: ಒಬ್ಬನಿಗೆ ಗಂಭೀರ ಗಾಯ

ಕಾರವಾರ: ತಾಲೂಕಿನ ಕದ್ರಾ ಜಾತ್ರೆಗೆ ಆಗಮಿಸಿದ್ದ ಯುವಕರ ನಡುವೆ ಬೈಕ್ ಕೀ ವಿಚಾರವಾಗಿ ಆರಂಭವಾದ ವಾಗ್ವಾದ ಗುಂಪು ಘರ್ಷಣೆಗೆ ತಿರುಗಿ, ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಮಲ್ಲಾಪುರದ ಲಕ್ಷ್ಮೀನಗರದಲ್ಲಿ ನಡೆದಿದೆ.ಗಣೇಶ ಎಂಬ ಯುವಕ ಗಾಯಗೊಂಡಿದ್ದು, ಯುವಕರ ಗುಂಪಿನ ನಡುವೆ ಬೈಕ್ ಕೀ ವಿಚಾರವಾಗಿ ಮಾತಿನ ಚಕಮಕಿ ಆರಂಭವಾಗಿದೆ. ಬಳಿಕ ವಾಗ್ವಾದ ವಿಕೋಪಕ್ಕೆ ತಿರುಗಿ ಯುವಕರು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಗಣೇಶನನ್ನು ತಕ್ಷಣ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಕುರಿತು ಮಾಹಿತಿ ಲಭ್ಯವಾಗಬೇಕಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ