ಮಹಿಳೆಯರು ತಲೆಯ ಮೇಲೆ ಪೂರ್ಣಕುಂಭ ಹೊತ್ತು ಕುಂಭ ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿ ಭಾವ ವ್ಯಕ್ತಪಡಿಸಿದರು.
ಕುಷ್ಟಗಿ: ತಾಲೂಕಿನ ಕೊರಡಕೇರಾ ಗ್ರಾಮದಲ್ಲಿ ಶ್ರೀ ಅಮೋಘ ಶಿದ್ದೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಹನ್ನೊಂದು ಪಲ್ಲಕ್ಕಿ ಉತ್ಸವ, ಕುಂಭ ಮೆರವಣಿಗೆ ಶ್ರದ್ಧಾ ಭಕ್ತಿಯಿಂದ ಜರುಗಿತು.
ಜಾತ್ರಾಮಹೋತ್ಸವ ಅಂಗವಾಗಿ ಬೆಳಗಿನ ಜಾವ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಹಾಗೂ ಅಲಂಕಾರ ನೆರವೇರಿಸಲಾಯಿತು.
ಬಳಿಕ ಶ್ರೀಅಮೋಘ ಶಿದ್ದೇಶ್ವರ ಜಾತ್ರೆ ಅಂಗವಾಗಿ ಅಲಂಕರಿಸಿದ ಪಲ್ಲಕ್ಕಿಯು ಗ್ರಾಮ ಸುತ್ತ ಮೆರವಣಿಗೆ ನಡೆಸಲಾಯಿತು. ಭಕ್ತರು ಜೈಘೋಷಗಳೊಂದಿಗೆ ಭಾಗವಹಿಸಿ ಧಾರ್ಮಿಕ ವಾತಾವರಣ ನಿರ್ಮಿಸಿದರು.
ಮಹಿಳೆಯರು ತಲೆಯ ಮೇಲೆ ಪೂರ್ಣಕುಂಭ ಹೊತ್ತು ಕುಂಭ ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿ ಭಾವ ವ್ಯಕ್ತಪಡಿಸಿದರು.
ಜಾತ್ರೆ ಅಂಗವಾಗಿ ಅನ್ನಸಂತರ್ಪಣೆ, ಭಜನಾ ಕಾರ್ಯಕ್ರಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು.ಶಾಸಕ ದೊಡ್ಡನಗೌಡ ಪಾಟೀಲ ಸೇರಿದಂತೆ ಕೊರಡಕೇರಾ ಹಾಗೂ ಸುತ್ತಮುತ್ತಲಿನ ಹತ್ತಾರು ಗ್ರಾಮಸ್ಥರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪಲ್ಲಕ್ಕಿ ಉತ್ಸವದಲ್ಲಿ ಭಕ್ತರು ಭಂಡಾರ ಅರ್ಪಿಸುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು.
ಇಂದು ಸಾಮೂಹಿಕ ವಿವಾಹ: ಕೊರಡಕೇರಾ ಗ್ರಾಮದಲ್ಲಿ ಅಮೋಘ ಸಿದ್ದೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ಈಶ್ವರನಂದಪುರಿ ಮಹಾಸ್ವಾಮಿಗಳು, ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು, ಸಿದ್ದಯ್ಯ ಸ್ವಾಮಿಗಳು, ಶಿವಸಿದ್ದೇಶ್ವರ ಮಹಾಸ್ವಾಮಿಗಳು, ಸಿದ್ದರಾಮಯ್ಯತಾತ, ತೇಜಯ್ಯ ಗುರುವಿನ್, ಸಿದ್ದಯ್ಯ ಗುರುವಿನ, ಕಳಕಯ್ಯ ಗುರುವಿನ, ಶಿವಾನಂದಯ್ಯ ಗುರುವಿನ, ಮಾದಯ್ಯಸ್ವಾಮಿ ಗುರುವಿನ, ಚಿದಾನಂದಯ್ಯ ಸ್ವಾಮಿ ಗುರುವಿನ, ಶರಣಯ್ಯ ಶಿವಯ್ಯ ಗುರುವಿನ, ಶರಣಯ್ಯ ಹನಮಯ್ಯ ಗುರುವಿನ, ಶರಣಯ್ಯ ಚನ್ನಯ್ಯ ಗುರುವಿನ, ನಂಜಯ್ಯ ಸಿದ್ದಯ್ಯ ಗುರುವಿನ, ರೇವಣಯ್ಯ ಮಲ್ಲಯ್ಯ ಗುರುವಿನ, ಗುರುಲಿಂಗಯ್ಯ ಶಿವಯ್ಯ ಗುರುವಿನ, ಕಳಕಯ್ಯ ಸಿದ್ದರಾಮಯ್ಯ ಗುರುವಿನ, ಮಳಿಯಪ್ಪಯ್ಯ ಹಿರೇಸಿದ್ದಯ್ಯ ಗುರುವಿನ ಕೊರಡಕೇರಾ ಸೇರಿದಂತೆ ರಾಜಕೀಯ ನಾಯಕರು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.