ಮಂಗಳೂರು: ಮಂಗಳೂರು ಹೊರವಲಯದ ಕೂಳೂರು ಸೇತುವೆ ಬಳಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಲು ಪ್ರಯತ್ನಿಸುತ್ತಿದ್ದ ಹಾಸನ ಜಿಲ್ಲೆ ಚೆನ್ನರಾಯಪಟ್ಟಣ ತಾಲೂಕಿನ ಶ್ರವಣ ಬೆಳಗೊಳದ ಹಳ್ಳಿಯೊಂದರ ಕೃಷಿಕನೋರ್ವನನ್ನು ಪಣಂಬೂರು ಪೊಲೀಸರು ಸಮಯಪ್ರಜ್ಞೆಯಿಂದ ಕಾಪಾಡಿದ್ದಾರೆ.
ಕೂಡಲೇ ಈ ಬಗ್ಗೆ ಪೊಲೀಸ್ ಇನ್ಸ್‌ಪೆಕ್ಟರ್ ವಿಚಾರವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ತಮ್ಮ ತಂಡದೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದ ವ್ಯಕ್ತಿಯ ಪತ್ತೆಗಾಗಿ ಕಾರ್ಯಪ್ರವೃತ್ತರಾದರು. ಪೊಲೀಸ್ ಕಮೀಷನರ್ ಕಚೇರಿಯ ತಾಂತ್ರಿಕ ಘಟಕದೊಂದಿಗೆ ಸಮನ್ವಯ ಸಾಧಿಸಿ ಆತ್ಮಹತ್ಯೆ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯ ಹುಡುಕಾಟಕ್ಕೆ ತೊಡಗಿದರು.
ಮೊದಲಿಗೆ ಫೋನ್ ಮಾಡಿ ಸಂಪರ್ಕ ಸಾಧಿಸಿದ ಪೊಲೀಸರು ಕೌನ್ಸಿಲಿಂಗ್ ಮಾಡಿ ಎಷ್ಟು ಸಾಂತ್ವನ ಹೇಳಿದರೂ ವ್ಯಕ್ತಿ ಸ್ಪಂದಿಸುತ್ತಿರಲಿಲ್ಲ. ಕೊನೆಗೆ ನಿರಂತರ ಒಂದೂವರೆ ಗಂಟೆ ಕಾಲ ಹುಡುಕಾಡಿದ ನಂತರ ಸಂಜೆ 7 ಗಂಟೆ ಸುಮಾರಿಗೆ ಕೂಳೂರು ಸೇತುವೆ ಬಳಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನದಲ್ಲಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾದರು.ಆತನನ್ನು ರಕ್ಷಿಸಿ ಬುದ್ಧಿಮಾತು ಹೇಳಿ ಆತ್ಮ ವಿಶ್ವಾಸ ಮೂಡಿಸಿದರು. ಕೊನೆಗೆ ಊರಿನಿಂದ ಬಂದ ಸಂಬಂಧಿಕರ ಜೊತೆ ಆತನನ್ನು ಕಳುಹಿಸಿಕೊಟ್ಟರು. ಕಾರ್ಯಾಚರಣೆಯಲ್ಲಿ ಪಣಂಬೂರು ಪೊಲೀಸ್ ಇನ್ಸ್‌ಪೆಕ್ಟರ್ ಸಲೀಂ ಅಬ್ಬಾಸ್, ಸಬ್ ಇನ್ಸ್‌ಪೆಕ್ಟರ್ ಜ್ಞಾನಶೇಖರ್, ಎಎಸ್ಐ ಸುಬ್ರಹ್ಮಣ್ಯ, ಸಿಬ್ಬಂದಿಗಳಾದ ಸುರೇಂದ್ರ, ದೀಪಕ್, ಇಮ್ತಿಯಾಜ್, ರಾಕೇಶ್, ಫಕ್ಕಿರೇಶ್, ಶರಣ ಬಸವ , ಅನ್ವರ್, ಮಂಜುನಾಥ್ ಮತ್ತಿತರರು ಇದ್ದರು.