ಲಕ್ಷ್ಮೇಶ್ವರ: ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡವರ ಪಾಲಿಗೆ ವರದಾನವಾಗಿದೆ. ಜನ ಸಾಮಾನ್ಯರ ನೆರವಿಗೆ ಬರುವ ಕಾರ್ಯ ಮಾಡಿದೆ ಸಾರ್ಥಕತೆ ಕಾಂಗ್ರೆಸ್ ಸರ್ಕಾರಕ್ಕಿದೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಉಮಾ ವಿದ್ಯಾಲಯದ ಬಯಲಿನಲ್ಲಿ ಹಮ್ಮಿಕೊಂಡ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.ಪಂಚ ಗ್ಯಾರಂಟಿಗಳು ಬಡವರ ಪಾಲಿಗೆ ವರದಾನವಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಮಾರು ₹೩೮ ಸಾವಿರ ಕೋಟಿ ವೆಚ್ಚದಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡುವ ಕಾರ್ಯ ಮಾಡಲಾಗಿದೆ. ಮಹಿಳೆಯರಿಗೆ ಆರ್ಥಿಕವಾಗಿ ಸಬಲರನ್ನಾಗಿ ಮಾಡಿದೆ. ಗ್ಯಾರಂಟಿ ಯೋಜನೆಗಳು ಬಂದ್ ಆಗುವ ಮಾತೇ ಇಲ್ಲ. ಗ್ಯಾರಂಟಿ ಯೋಜನೆಯಿಂದ ೧.೧೦ ಕೋಟಿ ಕುಟುಂಬಗಳು ಬಡತನ ರೇಖೆಯಿಂದ ಹೊರ ಬಂದಿವೆ. ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ₹೫ ಸಾವಿರ ಹಣ ನಿಮ್ಮ ಖಾತೆಗೆ ಜಮಾ ಆಗುತ್ತಿದೆ. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಯಿಂದ ಹತಾಶೆಗೊಂಡು ಬಾಯಿಗೆ ಬಂದಂತೆ ಮಾತನಾಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಸಾಮಾಜಿಕ ಜೀವನ ಉತ್ತಮಗೊಳಿಸುವ ಕಾರ್ಯ ಮಾಡಿದೆ ಎಂದು ಹೇಳಿದರು.
ಈ ವೇಳೆ ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಮಾಜಿ ಶಾಸಕ ರಾಮಣ್ಣ ಲಮಾಣಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಆರಿಸಿ ತರುವಂತೆ ಮನವಿ ಮಾಡಿದರು.ಸಮಾರಂಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಸಸಿಗೆ ನೀರು ಉಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಟಿ.ಈಶ್ವರ, ಸುಜಾತಾ ದೊಡ್ಡಮನಿ, ತಹಸೀಲ್ದಾರ ವಾಸುದೇವಸ್ವಾಮಿ, ಶಿರಹಟ್ಟಿ ತಹಸೀಲ್ದಾರ ಅನೀಲ್ ಬಡಿಗೇರ್, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ, ಶಿರಹಟ್ಟಿ ಇಓ ನಿಂಗಪ್ಪ ಓಲೆಕಾರ, ಪುರಸಭೆ ಮುಖ್ಯಾದಿಕಾರಿ ಮಹೇಶ ಹಡಪದ, ಆಡಳಿತ ಅಧಿಕಾರಿ ತಾಪಂ ಲಕ್ಷ್ಮೇಶ್ವರ ಹಾಗೂ ಯೋಜನಾ ನಿರ್ದೇಶಕ ಜಿಪಂ ಗದಗ ಜಗದೇವ ಬಿ, ಎನ್.ಕೆ.ನಿರ್ಮಲಾ, ಗ್ರೇಡ್ 2 ತಹಸೀಲ್ದಾರ ಮಂಜುನಾಥ ಅಮಾಸಿ, ಬಿಇಓ ಮಂಗಳಾ ತಾಪಸ್ಕರ, ಸಿಡಿಪಿಓ ಮೃತ್ಯುಂಜಯ ಗುಡ್ಡದಾನ್ವೇರಿ, ಆಹಾರ ನಿರೀಕ್ಷಕಿ ಮಂಜುಳಾ ಆಕಳದ, ಶಿರಹಟ್ಟಿ ಲಕ್ಷ್ಮೇಶ್ವರ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಸಿಪಿಐ ನಾಗರಾಜ ಮಾಡಳ್ಳಿ ನೇತೃತ್ವದಲ್ಲಿ ಪಿಎಸ್ ಐ ಈರಪ್ಪ ರಿತ್ತಿ ಬಿಗಿ ಬಂದೋಬಸ್ತ ಏರ್ಪಡಿಸಿದ್ದರು. ಈಶ್ವರ ಮೆಡ್ಲೇರಿ ನಿರ್ವಹಿಸಿದರು.