ಸವದತ್ತಿ ವಿಧಾನಸಭಾ ಕ್ಷೇತ್ರದ ಮುನವಳ್ಳಿ ಪಟ್ಟಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ರೋಡ್ ಶೋ ನಡೆಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮುನವಳ್ಳಿರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.ಸವದತ್ತಿ ವಿಧಾನಸಭಾ ಕ್ಷೇತ್ರದ ಮುನವಳ್ಳಿ ಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ವಿರೋಧ ಪಕ್ಷದವರು ಸುಖಾಸುಮ್ಮನೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಎಲ್ಲರೂ ತಪ್ಪದೇ ಮತದಾನ ಮಾಡಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಕೋರಿದರು.ರೋಡ್ ಶೋನಲ್ಲಿ ಭಾರಿ ಜನಸ್ತೋಮ:
ಸವದತ್ತಿ ವಿಧಾನಸಭಾ ಕ್ಷೇತ್ರದ ಮುನವಳ್ಳಿ ಪಟ್ಟಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ರೋಡ್ ಶೋ ನಡೆಸಿದರು. ಸುಮಾರು 3 ಕಿಲೋಮೀಟರ್ ಸಾಗಿದ ರೋಡ್ ಶೋನಲ್ಲಿ ಸಾವಿರಾರು ಕಾರ್ಯಕರ್ತರು ಹೆಜ್ಜೆ ಹಾಕಿದರು. ಸಾಯಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಜಾರ್ ರೋಡ್‌ನಲ್ಲಿ ಸಂಚರಿಸಿ ಮಾರುತಿ ಮಂದಿರದ ಬಳಿ ರ್‍ಯಾಲಿ ಮುಕ್ತಾಯಗೊಂಡಿತು. ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಉರಿ ಬಿಸಿಲನ್ನು ಲೆಕ್ಕಿಸದೇ ಸುಮಾರು 3 ಗಂಟೆಗಳ ಕಾಲ ನಡೆದ ರ್‍ಯಾಲಿಯಲ್ಲಿ ಭಾಗವಹಿಸಿದ್ದರು.ಈ ವೇಳೆ ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, ರವಿ ಯಲಿಗಾರ್, ಉಮೇಶ್ ಬಾಳಿ, ಎಂ.ಆರ್. ಗೋಪಶೆಟ್ಟಿ, ಸಿ.ಬಿ.ಬಾಳಿ, ಸುಮಾ ಯಲಿಗಾರ್, ಸಿ.ಬಿ.ಗೋರನಕೊಳ್ಳ, ಶ್ರೀಕಾಂತ್ ನೇಗಿನಹಾಳ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.ಸವದತ್ತಿ ವಿಧಾನಸಭಾ ಕ್ಷೇತ್ರದಿಂದ ಅತೀ ಹೆಚ್ಚು ಮತಗಳ ಮುನ್ನಡೆ ನಿರೀಕ್ಷಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಗೆದ್ದರೇ ಶಾಸಕ ವಿಶ್ವಾಸ್ ವೈದ್ಯ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿದ್ದಾನೆ. ಜನರ ಹುರುಪನ್ನು ನೋಡಿದರೇ ಇದು ನನ್ನ ಪಾಲಿಗೆ ಮತಯಾಚನೆ ರ್‍ಯಾಲಿ ಥರ ಕಾಣುತ್ತಿಲ್ಲ. ವಿಜಯೋತ್ಸವದ ರ್‍ಯಾಲಿ ಎನಿಸುತ್ತಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.