ಕಾಂಗ್ರೆಸ್‌ ಸರ್ಕಾರ ಇರುವ ವರೆಗೂ ಪಂಚ ಗ್ಯಾರಂಟಿ ನಿಲ್ಲದು: ಕೋನರಡ್ಡಿ

KannadaprabhaNewsNetwork |  
Published : Nov 13, 2024, 12:04 AM IST
ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿ ಸೋಮವಾರ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಕಚೇರಿಯನ್ನು ಶಾಸಕ ಎನ್‌.ಎಚ್‌. ಕೋನರಡ್ಡಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಬಡವರಿಗೆ ನೆರವಾಗಿದ್ದಾರೆ.

ಹುಬ್ಬಳ್ಳಿ:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ವರೆಗೂ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ಇಲ್ಲಿನ ಆಡಳಿತ ಸೌಧ (ಮಿನಿ ವಿಧಾನಸೌಧ)ದಲ್ಲಿ ಸೋಮವಾರ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಭೂಮಣ್ಣವರ ಅವರ ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಬಡವರಿಗೆ ನೆರವಾಗಿದ್ದಾರೆ. ಇಂತಹ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ತಾಲೂಕಿಗೊಂದು ಗ್ಯಾರಂಟಿ ಸಮಿತಿ ರಚಿಸಿ ಸಮಿತಿ ಅಧ್ಯಕ್ಷರಿಗೆ ಕಚೇರಿ ಪ್ರಾರಂಭಿಸಿ ಬಡವರಿಗೆ ಯೋಜನೆಗಳನ್ನು ತಲುಪಿಸಲು ಅಧ್ಯಕ್ಷರು ಹಾಗೂ ಸದಸ್ಯರು ಶ್ರಮಿಸುವಂತೆ ಸೂಚಿಸಿದರು.

ಈ ವೇಳೆ ತಹಸೀಲ್ದಾರ್‌ ಕಲ್ಲನಗೌಡ ಪಾಟೀಲ, ತಾಪಂ ಇಒ ಯಶವಂತಕುಮಾರ, ಗ್ರಾಮೀಣ ಉಪತಹಸೀಲ್ದಾರ್‌ ಪ್ರಕಾಶ ಹೆಬ್ಬಳ್ಳಿ, ಧಾರವಾಡ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಅನಿಲಕುಮಾರ ಪಾಟೀಲ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಆರ್.ಎಚ್. ಕೋನರಡ್ಡಿ, ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಾಪುಗೌಡ ಪಾಟೀಲ, ನವಲಗುಂದ ಗ್ಯಾರಂಟಿ ಸಮಿತಿ ಅಧ್ಯಕ್ಷ ವರ್ದಮಾನಗೌಡ ಹಿರೇಗೌಡ್ರ, ಕಿಮ್ಸ್ ನಾಮನಿರ್ದೇಶಿತ ಸದಸ್ಯ ಎಂ.ಎಸ್. ರೋಣದ, ಸುರೇಶ ಗೋಕಾಕ, ಜಿಪಂ ಮಾಜಿ ಅಧ್ಯಕ್ಷೆ ಸಾವಿತ್ರಿ ಭಗವತಿ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ