ಪಂಚ ಗ್ಯಾರಂಟಿ ಯೋಜನೆಗಳು ಸ್ವಾವಲಂಬಿ ಬದುಕಿಗೆ ಪೂರಕ: ಸೊನ್ನದ ಗುರುಬಸವರಾಜ್

KannadaprabhaNewsNetwork |  
Published : Aug 30, 2026, 01:45 AM IST
ಹಗರಿಬೊಮ್ಮನಹಳ್ಳಿಯ ತಾಲೂಕು ಪಂಚಾಯಿತಿಯ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಸೊನ್ನದ ಗುರುಬಸವರಾಜ್ ಮಾತನಾಡಿದರು. | Kannada Prabha

ಸಾರಾಂಶ

ಪಂಚ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಬದುಕಿಗೆ ಆರ್ಥಿಕ ಭದ್ರತೆ ಒದಗಿಸುವ ಮೂಲಕ ಸ್ವಾವಲಂಬಿ ಜೀವನಕ್ಕೂ ಕಾರಣವಾಗಿವೆ ಎಂದು ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಸೊನ್ನದ ಗುರುಬಸವರಾಜ್ ಅಭಿಪ್ರಾಯಪಟ್ಟರು.

ಹಗರಿಬೊಮ್ಮನಹಳ್ಳಿ: ಸಿದ್ದರಾಮಯ್ಯನವರ ದೂರದರ್ಶಿತ್ವದ ಪರಿಣಾಮವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಬದುಕಿಗೆ ಆರ್ಥಿಕ ಭದ್ರತೆ ಒದಗಿಸುವ ಮೂಲಕ ಸ್ವಾವಲಂಬಿ ಜೀವನಕ್ಕೂ ಕಾರಣವಾಗಿವೆ ಎಂದು ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಸೊನ್ನದ ಗುರುಬಸವರಾಜ್ ಅಭಿಪ್ರಾಯಪಟ್ಟರು.

ಪಟ್ಟಣದ ತಾಲೂಕು ಪಂಚಾಯಿತಿಯ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಳೆದ ಸಭೆಯ ನಡಾವಳಿಗಳನ್ನು ಮತ್ತು ಪರಿಹರಿಸಲಾಗಿರುವ ಸಮಸ್ಯೆಗಳನ್ನು ಸಭೆಯಲ್ಲಿ ಮಂಡಿಸುವಂತೆ ಅಧಿಕಾರಿಗಳಿಗೆ ಅವರು ಕೋರಿದರು.

ಸಾರಿಗೆ ಅಧಿಕಾರಿ ಸಂತೋಷ್ ನಾಯ್ಕ ಮಾತನಾಡಿ, ಕಳೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡಿಸಿದ್ದ ಬೇಡಿಕೆಯಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಪಟ್ಟಣದಿಂದ ಚಿಲಗೋಡು, ಗುಳೇದಾಳು, ಆನೇಕಲ್ ತಾಂಡಾಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಪಟ್ಟಣದ ಬಸ್ ಡಿಪೋಗೆ 15 ಹೊಸ ಬಸ್‌ಗಳು ಮಂಜೂರಾಗಿದ್ದು, ತಾಲೂಕಿನ ಬಹುತೇಕ ಕಡೆ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.

ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ತಾಲೂಕಿನಲ್ಲಿ ಈ ವರೆಗೂ 1,85,00,731 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ಒಟ್ಟು ಮೊತ್ತ ₹74,80,80,233 ಇಲಾಖೆಗೆ ಸಂದಾಯವಾಗಿದೆ ಎಂದು ವರದಿ ಮಂಡಿಸಿದರು.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ತಾಲೂಕಿನ 40600 ನೋಂದಾಯಿತ ಫಲಾನುಭವಿಗಳಲ್ಲಿ 37588 ಫಲಾನುಭವಿಗಳಿಗೆ ಒಟ್ಟು ₹7,51,76,000 ಪಾವತಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದರು.

ಜೆಸ್ಕಾಂ ಎಇಇ ಹೇಮರೆಡ್ಡಿ ಮಾತನಾಡಿ, ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಮರು ಸರ್ವೆ ಕಾರ್ಯ ಶೇ. 95 ಮುಗಿದಿದೆ ಎಂದು ಸ್ಪಷ್ಟಪಡಿಸಿದರು.

ಆಹಾರ ನಿರೀಕ್ಷಕಿ ಮಮತಾ ಹಿರೇಮಠ, ಕೌಶಲ್ಯಾಭಿವೃದ್ಧಿ ಅಧಿಕಾರಿ ವೆಂಕಟೇಶ್ ತಮ್ಮ ತಮ್ಮ ಇಲಾಖೆಯ ಪ್ರಗತಿಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು.

ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಾಧಿಕಾರದ ಉಪಾಧ್ಯಕ್ಷ ಜಂದಿಸಾಬ್ ಮಾತನಾಡಿ, ಗ್ಯಾರಂಟಿ ಯೋಜನೆಗಳು ಕ್ಷೇತ್ರದ ಅಭಿವೃದ್ಧಿಗೂ ಪೂರಕವಾಗಿದ್ದು, ಸಮರ್ಪಕ ಅನುಷ್ಠಾನಕ್ಕಾಗಿ ಅಧಿಕಾರಿಗಳು ಶ್ರಮಿಸಲು ಸೂಚಿಸಿದರು.

ತಾಪಂ ಇಒ ವಿಶ್ವನಾಥ್ ಪಿ.ಕೆ., ಜಿಲ್ಲಾ ಪ್ರಾಧಿಕಾರದ ಸದಸ್ಯ ಪರಶುರಾಮ ಹೆಗ್ಡಾಳ್, ತಾಲೂಕು ಸಮಿತಿಯ ಸದಸ್ಯರಾದ ರಾಘವೇಂದ್ರ ಉಲವತ್ತಿ, ಮಂಜುನಾಥ್ ಮೇಟಿ, ವೆಂಕಟೇಶ್ ನಾಯ್ಕ, ಸರ್ದಾರ್ ರಾಮಣ್ಣ, ಕಾರ್ತಿಕ್ ಉಪ್ಪಾರ್, ಗಿರೀಶ್ ಗೌರಜ್ಜನವರ್, ಸಂತೋಷ್, ಹನಮಂತ ಹಾಗೂ ತಾಲೂಕು ಯೋಜನಾಧಿಕಾರಿ ನಾಗರಾಜನಾಯ್ಕ ಹಾಗೂ ಲಕ್ಷ್ಮೀ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಗೀತದಿಂದ ಮನಸ್ಸಿಗೆ ನೆಮ್ಮದಿ, ಶಾಂತಿ
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಅನುಮತಿ