ಪಂಚ ಗ್ಯಾರಂಟಿ ಯಶಸ್ವಿ ಜಾರಿ: ಅಣ್ಣಪ್ಪ ನಾಯ್ಕ

KannadaprabhaNewsNetwork |  
Published : Nov 15, 2026, 02:00 AM IST
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಣ್ಣಪ್ಪ ನಾಯ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. | Kannada Prabha

ಸಾರಾಂಶ

ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ಹೋಬಳಿ ಮಟ್ಟದಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ.

ಹೊನ್ನಾವರ: ರಾಜ್ಯದ ಕಾಂಗ್ರೆಸ್‌ ಸರ್ಕಾರವು ಪಂಚಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಣ್ಣಪ್ಪ ನಾಯ್ಕ ಹೇಳಿದರು.

ಶನಿವಾರ ಹಳದಿಪುರದಲ್ಲಿ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ದಂಡಾಧಿಕಾರಿ ಪ್ರವೀಣ ಕರಾಂಡೆ ಅವರು, ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ಹೋಬಳಿ ಮಟ್ಟದಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ. ಜನರ ಮನೆ ಬಾಗಿಲಿಗೇ ಬಂದು ಸಮಸ್ಯೆಗಳಿಗೆ ಪರಿಹಾರ ನೀಡುವ ಅತ್ಯುತ್ತಮ ವೇದಿಕೆ ಇದಾಗಿದೆ ಎಂದರು.

ಕೊರೋನಾ ನಂತರ ಗ್ರಾಮೀಣ ಭಾಗದ ಬಸ್‌ಗಳ ಸಂಖ್ಯೆ ಕಡಿಮೆಯಾಗಿದೆ. ನವಿಲಗೋಣ ಭಾಗಕ್ಕೆ ಸಂಚರಿಸುತ್ತಿದ್ದ 2 ಬಸ್‌ಗಳನ್ನು ಕಡಿತಗೊಳಿಸಿರುವುದರಿಂದ, ಮಧ್ಯಾಹ್ನ 3.30ಕ್ಕೆ ಕಾಲೇಜು ಮುಗಿಸಿ ಮನೆಗೆ ಮರಳುವ ವಿದ್ಯಾರ್ಥಿಗಳು ಸಂಜೆ 6 ಗಂಟೆಯವರೆಗೂ ಬಸ್‌ಗಾಗಿ ಕಾಯಬೇಕಾದ ದುಃಸ್ಥಿತಿ ಇದೆ ಎಂದು ನವಿಲಗೋಣ ಪಂಚಾಯಿತಿ ಮಾಜಿ ಸದಸ್ಯ ಪಾವ್ಲು ಗೊನ್ಸಾಲ್ವಿಸ್ ಅಧಿಕಾರಿಗಳ ಗಮನ ಸೆಳೆದರು.ಪ್ರಜಾಸೇವಾ ಆಂದೋಲನದಲ್ಲಿ ಆಂದೋಲನದಲ್ಲಿ 12 ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಒಟ್ಟು 52 ಅರ್ಜಿಗಳು ಸ್ವೀಕೃತಗೊಂಡವು. ಕಂದಾಯ ಇಲಾಖೆಗೆ ಅತಿ ಹೆಚ್ಚು18 ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 12 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟೆ ಗೌಡ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಏಸು ಸುಬ್ಬಣ್ಣ ಬೆಂಗಳೂರು, ಅರಣ್ಯ ಇಲಾಖೆಯ ಅಧಿಕಾರಿ ವಿಜಯಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಭಜಂತ್ರಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಎಸ್. ನಾಯ್ಕ ಹಾಗೂ ಡಾ. ವೈಶಾಲಿ ನಾಯ್ಕ ಉಪಸ್ಥಿತರಿದ್ದರು.

ಹಳದಿಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ.ಎಲ್. ನಾಯ್ಕ ಸ್ವಾಗತಿಸಿದರು. ಸುಧೀಶ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ